Site icon Vistara News

Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

Actor Darshan

ಬೆಂಗಳೂರು: ನಟ ದರ್ಶನ್ (Actor Darshan) ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದೂಡಿದೆ. ಇದರಿಂದ ನಟ ದರ್ಶನ್‌ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಜೈಲು ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿತ್ತು. ಆದರೆ ಜೈಲಾಧಿಕಾರಿಗಳು ದರ್ಶನ್‌ ಮನವಿ ಪುರಸ್ಕರಿಸಿರಲಿಲ್ಲ. ಇನ್ನು ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್‌ ಪರ ವಕೀಲರು ಸಮಯ ಕೋರಿದ್ದರಿಂದ ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ರಾಜ್ಯದ ಎಲ್ಲಾ ಕಾರಾಗೃಹಗಳಲ್ಲೂ ಕೈದಿಗಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಹೀಗಾಗಿ ದರ್ಶನ್‌ ಮನೆಯೂಟ ಕೋರಿದ ಅರ್ಜಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಜೈಲಾಧಿಕಾರಿಗಳು ವರದಿ ನೀಡಿರುವುದಾಗಿ ಜಸ್ಟೀಸ್ ಎಂ ನಾಗಪ್ರಸನ್ನ ಅವರಿಗೆ ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಮಾಹಿತಿ ನೀಡಿದರು. ಈ ವೇಳೆ ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್‌ ಪರ ವಕೀಲೆ ಸಂಜೀವಿನಿ ನಾವದಗಿ ಸಮಯ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜು.25ರಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ನಟ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ | Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

ಬೆಂಗಳೂರು : ಕೇಂದ್ರ ಸಚಿವ ಎಚ್‌‌ ಕುಮಾರಸ್ವಾಮಿ (HD Kumaraswamy) ವಿರುದ್ಧದ ಅಕ್ರಮ ಗಣಿಗಾರಿಕೆಗೆ ಅನುಮತಿ ಪ್ರಕರಣವೊಂದರ ತನಿಖೆಯ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ ಕೋರಿ ಮತ್ತೆ ಎಸ್ಐಟಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಶ್ರೀಸಾಯಿ ವೆಂಕಟೇಶ್ವರ ಕಂಪನಿಗೆ ಗಣಿಗಾರಿಕೆ ಗುತ್ತಿಗೆ ಮಂಜೂರಿನಲ್ಲಿ ಅಕ್ರಮ ಆರೋಪವನ್ನು ಕುಮಾರಸ್ವಾಮಿ ಎದುರಿಸುತ್ತಿದ್ದಾರೆ.

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಈ ಹಿಂದೆ ರಾಜ್ಯಪಾಲರಿಗೆ ಎಸ್‌ಐಟಿ ಮನವಿ ಮಾಡಿತ್ತು. ಆದರೆ, ರಾಜ್ಯಪಾಲರ ಕಚೇರಿಯಿಂದ ಹೆಚ್ಚಿನ ಮಾಹಿತಿ ಬೇಕು ಎಂದು ಕೋರಲಾಗಿತ್ತು. ಹೀಗಾಗಿ ಮನವಿಯನ್ನು ಮತ್ತಷ್ಟು ಪರಿಷ್ಕರಿಸಿ ಎರಡನೇ ಬಾರಿಗೆ ಕಳುಹಿಸಲಾಗಿದೆ. ಆಗಸ್ಟ್‌ 19ರಂದು ಅಧಿಕಾರಿಗಳು ಎರಡನೇ ಬಾರಿಗೆ ಮನವಿಯನ್ನು ರಾಜ್ಯಪಾಲರ ಕಚೇರಿಗೆ ಕಳುಹಿಸಿದೆ.

2023ರ ನವೆಂಬರ್ 21ರಂದು ಚಾರ್ಜ್‌‌ಶೀಟ್‌ ಸಲ್ಲಿಸಲು ಎಸ್ಐಟಿ ಅನುಮತಿ ಕೋರಿತ್ತು. ಅಂತೆಯೇ ಜುಲೈ 29 ರಂದು ರಾಜ್ಯಪಾಲರು ಮರು ಪತ್ರ ಬರೆದಿದ್ದರು. ಅದರು ಆಗಸ್ಟ್ 8ರಂದು ಎಸ್ಐಟಿ ಕೈಸೇರಿತ್ತು. ಅದರಲ್ಲಿ ಹೆಚ್ಚುವರಿ ಮಾಹಿತಿ ನೀಡುವಂತೆ ಕೋರಲಾಗಿತ್ತು.ಈ ಸಂಬಂಧ ಸ್ಪಷ್ಟನೆ ಸಮೇತ ಎರಡನೇ ಬಾರಿ ಪತ್ರ ಬರೆಯಲಾಗಿದೆ. ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ಮನವಿ ಸಲ್ಲಿದ್ದು, ಪ್ರಕರಣದ ತನಿಖೆ ಮುಕ್ತಾಯವಾಗಿದೆ ಎಂದು ಕೋರಿದ್ದಾರೆ.

ಏನಿದು ಪ್ರಕರಣ

2007ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯಮಗಳನ್ನು ಉಲ್ಲಂಘಿಸಿ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ಗುತ್ತಿ ನೀಡಿರುವ ಆರೋಪ ಬಂದಿತ್ತು. ಈ ಬಗ್ಗೆ 2015ರಲ್ಲಿ ಎಸ್‌ಐಟಿ ವಿಚಾರಣೆ ನಡೆಸಿತ್ತು. ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ತನಿಖಾ ತಂಡದ ಅವಧಿಯನ್ನು ವಿಸ್ತರಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆ ತನಿಖೆಗಾಗಿ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಅದು ನಿಷ್ಕ್ರಿಯಗೊಂಡಿದೆ ಎಂಬದು ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

Exit mobile version