Site icon Vistara News

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ನೋಟಿಸ್‌ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkanna) ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್‌ ವಿಚಾರಣೆ ನೋಟೀಸ್‌ (police notice) ಹೋಗಿದೆ.

ನಟ ಯಶಸ್‌ ಸೂರ್ಯ (Yashas Surya) ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್‌ಗೂ ನೋಟೀಸ್‌ ನೀಡಲಾಗಿದೆ.

ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್‌ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್‌ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್‌, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

Exit mobile version