Site icon Vistara News

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಪವಿತ್ರಾ ಗೌಡ, ಬರೋಬ್ಬರಿ 72 ದಿನಗಳ ನಂತರ ಇದೀಗ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಕೋರಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ಗೆ ಪವಿತ್ರಾ ಗೌಡ (Pavithra gowda) ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಆ.22ಕ್ಕೆ ನಡೆಯಲಿದೆ.

ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಆಗಸ್ಟ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಪವಿತ್ರಾ ಗೌಡ ಜತೆ ಮತ್ತೊಬ್ಬ ಆರೋಪಿ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan) ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ‌ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್‌ಚಾರ್ಜ್ ಕೋರ್ಟ್‌, ನ್ಯಾಯಾಂಗ ಬಂಧನವನ್ನು ಆ.14ರಂದು ವಿಸ್ತರಿಸಿತ್ತು

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

murder case

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version