ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಯುವ ಸಂಭ್ರಮಕ್ಕೆ ಶುಕ್ರವಾರ ನಗಾರಿ ಬಾರಿಸುವ ಮೂಲಕ ನಟ ಡಾಲಿ ಧನಂಜಯ ಅವರಿಂದ ಚಾಲನೆ ಕೊಟ್ಟರು. ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಸಂಭ್ರಮಕ್ಕೆ ಚಾಲನೆ ಕೊಟ್ಟರು.
“ನಮ್ಮ ಏಳಿಗೆಗೆ ನಾವೇ ಶಿಲ್ಪಿಗಳು,” ಎಂದು ಸ್ವಾಮಿ ವಿವೇಕಾನಂದರ ವಾಣಿಯನ್ನು ತಮ್ಮದೇ ಶೈಲಿಯಲ್ಲಿ ಹೇಳಿದ ಧನಂಜಯ ಅವರು “ಇಲ್ಲಿ ಯಾರನ್ನೂ ಯಾರೂ ಬೆಳೆಸಲ್ಲ. ನಮಗೆ ನಾವೇ ಬೆಳೆಯಬೇಕು,” ಎಂದು ನುಡಿದರು.
ಬಸವಣ್ಣ ಮತ್ತು ಕುವೆಂಪು ಅವರ ನುಡಿಗಳನ್ನು ಸ್ಮರಿಸಿದ ಡಾಲಿ “ನಮ್ಮನ್ನು ಯಾರೂ ನಿಯಂತ್ರಣ ಮಾಡಬಾರದು. ಸೋಶಿಯಲ್ ಮೀಡಿಯಾಗಳಲ್ಲಿ ಬರುವ ವಿಚಾರಗಳ ಬಗ್ಗೆಯೇ ಯೋಚನೆ ಮಾಡುವುದು ತಪ್ಪು. ಅವುಗಳನ್ನು ಶೇರ್ ಮಾಡುವ ಮೊದಲು ಯೋಚನೆ ಮಾಡಬೇಕು,” ಎಂದು ಅವರು ಯುವಕರಿಗೆ ಕಿವಿ ಮಾತು ಹೇಳಿದರು.
ಬಳಿಕ ಅವರು ಟಗರು, ಹೆಡ್ ಬುಶ್, ಮಾನ್ಸೂನ್ ರಾಗ ಸಿನಿಮಾಗಳ ಡೈಲಾಗ್‌ಗಳನ್ನು ಅಭಿಮಾನಿಗಳ ಮುಂದೆ ಹೇಳಿದರು
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಲ್.ನಾಗೇಂದ್ರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ | ಮೈಸೂರು ದಸರಾ ಉದ್ಘಾಟನೆಗೆ ಬರ್ತಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ