ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ. ಶಿವರಾಮ್ (K. Shivram) ಅವರು ಹೃದಯಾಘಾತದಿಂದ ಆಸ್ಪತ್ರೆ ಸೇರಿದ ಹಿನ್ನೆಲೆಯಲ್ಲಿ ಅವರ ಅಳಿಯ ಹಾಗೂ ನಟ ಪ್ರದೀಪ್ ನಗರದ ಎಚ್‌ಸಿಜಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಸದ್ಯ ಕೆ. ಶಿವರಾಮ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಪ್ರದೀಪ್ ಅವರು, ಶಿವರಾಮ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಫೆಬ್ರವರಿ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಿಪಿ ಏರುಪೇರು ಆಗಿದೆ, ಈಗಲೂ ಸಮಸ್ಯೆ ಮುಂದುವರಿದಿದೆ. ಅವರು ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳು ಪ್ರಾರ್ಥಿಸಬೇಕು. ಅವರನ್ನು ರೆಗ್ಯುಲರ್ ಆಗಿ ನೋಡುತ್ತಿದ್ದ ಡಾಕ್ಟರ್ ಇಲ್ಲೇ ಇರುವ ಕಾರಣ, ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ | Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್ ಸಂತೋಷ್ ರಿಯಾಕ್ಷನ್ ಏನು?
ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲು
ಹೃದಯಾಘಾತದ ಹಿನ್ನೆಲೆಯಲ್ಲಿ ನಟ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ (71) ಅವರನ್ನು ನಗರದ ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟ ಕೆ. ಶಿವರಾಮ್ ಅವರು ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ 10 ಸಿನಿಮಾಗಳಲ್ಲಿ ನಟಿಸಿದ್ದಾರೆ.
ʻಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ. ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿ ಜೀವನದಲ್ಲಿ ಬಿಜಾಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ | Jaya Prada: ನಟಿ , ರಾಜಕಾರಣಿ ಜಯಪ್ರದಾ ಬಂಧನಕ್ಕೆ ಕೋರ್ಟ್ ಮತ್ತೊಮ್ಮೆ ಆದೇಶ
2013 ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ.