ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ (Actor Puneeth Rajkumar) ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಇದೀಗ ಬೆಂಗಳೂರು ವಿಶ್ವವಿದ್ಯಾಲಯ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಬೆಂಗಳೂರು ವಿಶ್ವವಿದ್ಯಾಲಯವು ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ವಾಣಿಜ್ಯ ಕನ್ನಡ 3ರಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ. ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ’ ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ.
ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.
ಇತ್ತೀಚೆಗಷ್ಟೇ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್‌ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ | Dowry harassment | ಮದುವೆಯಾದ ಏಳೇ ತಿಂಗಳಿಗೆ ಮೂರು ತಿಂಗಳ ಗರ್ಭಿಣಿ ಸಾವು; ಕೊಲೆಯೆಂದು ಕುಟುಂಬಸ್ಥರ ಆರೋಪ