ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಹೊಸ ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. 2009ರಲ್ಲಿ ಪುನೀತ್ ರಾಜಕುಮಾರ್ ಅವರು ರಾಯಭಾರಿಯಾಗಿ (Nandini Brand Ambassador) ನೇಮಕವಾಗಿದ್ದರು. ಅವರು ನಿಧನರಾದ ಹಿನ್ನೆಲೆಯಲ್ಲಿ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ಶಿವರಾಜ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.
ನಂದಿನಿ ಉತ್ಪನ್ನಗಳ ರಾಯಭಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಗೂ ಎಂಡಿ ಜಗದೀಶ್ ಅವರ ಮನವಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಒಪ್ಪಿದ್ದಾರೆ. ಡಾ.ರಾಜ್ ಕುಟುಂಬ ಹಾಗೂ ಕೆಎಂಎಫ್‌ಗೆ ಹತ್ತಿರದ ನಂಟಿದೆ. 1996ರಲ್ಲಿ ಡಾ.ರಾಜ್ ಕುಮಾರ್ ಅವರು ನಂದಿನಿ ಉತ್ಪನ್ನಗಳಿಗೆ ಉಚಿತವಾಗಿಯೇ ರಾಯಭಾರಿಯಾಗಲು ಒಪ್ಪಿಕೊಂಡಿದ್ದರು. ಅದು ಅವರ ಮೊದಲ ಜಾಹೀರಾತು ಆಗಿತ್ತು. ಅವರ ನಂತರ 2009ರಲ್ಲಿ ಪುನೀತ್ ರಾಜಕುಮಾರ್ ಆಯ್ಕೆಯಾಗಿದ್ದರು. ಇದೀಗ ಶಿವರಾಜ್ ಕುಮಾರ್ ಅವರು ರಾಯಭಾರಿಯಾಗಿ ನೇಮಕವಾಗಿದ್ದಾರೆ.
ಇದನ್ನೂ ಓದಿ | LPG Price: ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ₹ 99.75 ಇಳಿಕೆ
ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಟ್ವೀಟ್ ಮಾಡಿದ್ದು, “ನಂದಿನಿ” ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಲು ಒಪ್ಪಿಕೊಂಡಿರುವ ಕರುನಾಡ ಚಕ್ರವರ್ತಿ, ಸ್ಯಾಂಡಲ್‌ವುಡ್ ನಟ, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅವರಿಗೆ ಕೆ.ಎಂ.ಎಫ್, ಸಮಸ್ತ ಕರ್ನಾಟಕ ರೈತರು ಹಾಗೂ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿ ಶುಭ ಕೊರಲಾಯಿತು ಎಂದು ತಿಳಿಸಿದ್ದಾರೆ.
ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಡಾ|| @NimmaShivanna ರವರನ್ನು "ನಂದಿನಿ" ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವ ಕರುನಾಡ ಚಕ್ರವರ್ತಿಗೆ ಅಭಿನಂದನೆ ಸಲ್ಲಿಸಿ ಶುಭ ಕೊರಲಾಯಿತು.
— Bheema Naik (@BheemaNaikINC) August 1, 2023
ಅವರಿಗೆ ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ ರೈತರ ಹಾಗೂ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು🙏💐💐 pic.twitter.com/MBwRh1dX3v