ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರು (Shiva Rajkumar) ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ನಗರದ ವೈದೇಹಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶುಕ್ರವಾರ ಮಧ್ಯಾಹ್ನ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ವೇಳೆಗೆ ಜನರಲ್ ಚೆಕಪ್ ಮುಗಿಸಲಾಗಿದೆ. ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದು, ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಯಾವುದೇ ಸಮಸ್ಯೆ ಇಲ್ಲ, ಜನರಲ್ ಚೆಕಪ್ಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ | Zika Virus : ಝಿಕಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ