ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತ್ಯ ಸಂಸ್ಕಾರ ನೆಲಮಂಗಲದ ಸೋಲದೇವನಹಳ್ಳಿಯ ತೋಟದ ಮನೆ ಬಳಿ ಕುಟುಂಬಸ್ಥರು ಸೇರಿ ಸಾವಿರಾರು ಜನರ ಸಮ್ಮುಖದಲ್ಲಿ ಶನಿವಾರ ಸಂಜೆ ನೆರವೇರಿತು. ಸಕಲ ಸರ್ಕಾರಿ ಗೌರವದೊಂದಿಗೆ ಹಿಂದು ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಯಿತು.
ಇದಕ್ಕೂ ಮುನ್ನಾ ನಡೆದ ಅಂತಿಮ ಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಸೋಲದೇವನಹಳ್ಳಿಗೆ ಆಂಬ್ಯುಲೆನ್ಸ್‌ನಲ್ಲಿ ತರಲಾಯಿತು. ನಂತರ ವಿನೋದ್ ರಾಜ್ ಕುಟುಂಬಸ್ಥರು ಪೂಜೆ ಸಲ್ಲಿಸಿದರು. ನಂತರ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಸರ್ಕಾರದ ಪರವಾಗಿ ಸಚಿವ ಕೆ.ಎಚ್.ಮುನಿಯಪ್ಪ ಪುಷ್ಪಗುಚ್ಛ ಸಮರ್ಪಿಸಿದರು. ಬಳಿಕ ಹಿಂದು ಧರ್ಮದ ಬಂಟ ಸಮುದಾಯದ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಲಾಯಿತು.
ಇದನ್ನೂ ಓದಿ | Actress Leelavathi: ಅನ್ನ, ನೀರು ಬಿಟ್ಟಿದೆ ಲೀಲಾವತಿ ಅವರ ಪ್ರೀತಿಯ ಶ್ವಾನ; ಕಣ್ಣೀರಿಟ್ಟ ವಿನೋದ್!
ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ, ಡಿಸಿಎಂ ಸೇರಿ ಗಣ್ಯರು
ನೆಲಮಂಗಲದ ಅಂಬೇಡ್ಕರ್ ಮೈದಾನದ ಬಳಿಕ ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಅಂತಿಮ ದರ್ಶನ ಪಡೆದ ಬಳಿಕ ವಿನೋದ್ ರಾಜ್ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತಬ್ಬಿಕೊಂಡು ಸಾಂತ್ವನ ಹೇಳಿದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಸೋಮಣ್ಣ, ವಾಟಾಳ್ ನಾಗರಾಜ್, ನಟ ರಮೇಶ್ ಅರವಿಂದ್, ಉಪೇಂದ್ರ, ದ್ವಾರಕೀಶ್, ಶ್ರೀನಾಥ್, ಸಾಧು ಕೋಕಿಲ, ನಟಿ ತಾರಾ, ಶೃತಿ, ಉಮಾಶ್ರೀ, ಪೂಜಾ ಗಾಂಧಿ, ಸುಧಾರಾಣಿ ಮತ್ತಿತರ ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.
ಇದನ್ನೂ ಓದಿ | Actress Leelavathi: ನಟಿ ಲೀಲಾವತಿ ನಿಧನಕ್ಕೆ ಮೋದಿ ಸೇರಿ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರ ಸಂತಾಪ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ