Site icon Vistara News

Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

Actress Ramya

Actress Ramya

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ (Darshan), ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ (Prajwal Revanna), ಸೂರಜ್ ರೇವಣ್ಣ (Suraj Revanna) ಹಾಗೂ ಪೋಕ್ಸೋ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರನ್ನು ಉಲ್ಲೇಖಿಸಿ ನಟಿ, ರಾಜಕಾರಣಿ ರಮ್ಯಾ (Actress Ramya) ಮತ್ತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಅಪರಾಧ ಕೃತ್ಯಗಳನ್ನು ಬಯಲಿಗೆಳೆದ ಪೊಲೀಸರು ಮತ್ತು ಮಾಧ್ಯಮಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ.

ರಮ್ಯಾ ಹೇಳಿದ್ದೇನು?

”ಕಾನೂನನ್ನು ಶ್ರೀಮಂತರು ಮತ್ತು ಪ್ರಭಾವಶಾಲಿಗಳು ಮುರಿದಾಗ ಮತ್ತು ಹಿಂಸಾತ್ಮಕ ಕ್ರಿಯಲ್ಲಿ ತೊಡಗಿಸಿಕೊಂಡಾಗ ಕರ್ನಾಟಕದ ಬಡವರು, ಮಹಿಳೆಯರು, ಮಕ್ಕಳು ತೊಂದರೆ ಅನುಭವಿಸುತ್ತಾರೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್‌ ಆಫ್‌. ತ್ವರಿತವಾಗಿ ವಿಚಾರಣೆ ನಡೆಸಿದಾಗ ಮತ್ತು ಪ್ರಕರಣದ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಂಡಾಗ ನ್ಯಾಯವನ್ನು ಒದಗಿಸಿದಂತಾಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾವರ್ಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ?” ಎಂದು ಪ್ರಶ್ನಿಸಿದ್ದಾರೆ.

ಏನಿದು ಪ್ರಕರಣ?

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಚಿತ್ರದುರ್ಗದ ರೇಣುಕಾಚಾರ್ಯ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಈಗಾಗಲೇ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದ ರಮ್ಯಾ ದರ್ಶನ್‌ಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದ್ದರು.

ಇನ್ನು ಹಲವು ಮಹಿಳೆಯರಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಲಾಗಿದೆ. ಸುಮಾರು 1 ತಿಂಗಳು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್‌ ಇದೀಗ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ.

ಈ ಮಧ್ಯೆ ಶುಕ್ರವಾರ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ತನ್ನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಿರುವ ಜೆಡಿಎಸ್ ಕಾರ್ಯಕರ್ತರೊಬ್ಬರು ಇದೀಗ ವಕೀಲರ ಮೂಲಕ ದೂರು ದಾಖಲಿಸಲು ತಯಾರಿ ನಡೆಸಿದ್ದಾರೆ. ಜೂ. 16ರಂದು ಹೊಳೆನರಸೀಪುರ ತಾಲೂಕಿನ ಗನ್ನಿಕಡದ ಸೂರಜ್ ತೋಟದ ಮನೆಯಲ್ಲಿ ದೌರ್ಜನ್ಯ ನಡೆಸಲಾಗಿತ್ತು ಎಂದು ಸಂತ್ರಸ್ತ ಹೇಳಿದ್ದಾರೆ. ತೋಟದ ಮನೆಗೆ ಕರೆಸಿ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಶುಕ್ರವಾರ ಅವರು 14 ಪುಟಗಳ ದೂರು ಬರೆದು ಬೆಂಗಳೂರಿನಲ್ಲಿ ಡಿಜಿ ಅವರಿಗೆ ನೀಡಿದ್ದಾರೆ.

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಹೈಕೋರ್ಟ್‌ನ ಮುಂದಿನ ವಿಚಾರಣೆವರೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ಇದರಿಂದಾಗಿ, ಸಿಐಡಿ ಅಧಿಕಾರಿಗಳಿಂದ ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಈ ಎಲ್ಲ ಕಾರಣಗಳಿಂದ ರಮ್ಯಾ ತನ್ನ ಪೋಸ್ಟ್‌ನಲ್ಲಿ ಇವರೆಲ್ಲರ ಹೆಸರನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Exit mobile version