ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ (Congress Guarantee Scheme) ಯೋಜನೆಗಳಲ್ಲೊಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ (Gruha Lakshmi scheme) ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಲು ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದೆ. ಇನ್ನು ನಾಲ್ಕೈದು ದಿನದಲ್ಲಿ ಗೃಹಲಕ್ಷ್ಮಿ ಅದಾಲತ್ (Gruhalakshmi Adalat) ಆರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಹೀಗಾಗಿ ಇನ್ನೂ ಹಣ ಜಮೆಯಾಗದೇ ಇರುವವರ ಬಳಿ ಸರ್ಕಾರ ಹೋಗಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದೆ. ಹೀಗಾಗಿ ಇನ್ನೂ ಹಣ ಸಿಗದವರು ಅದಾಲತ್‌ನಲ್ಲಿ ದೂರು ಕೊಡಲು ಸಿದ್ಧರಾಗಿ.
ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡುವ ನಿರ್ಧಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಬಂದಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: DL RC card : ನಿಮ್ಮ ಡಿಎಲ್-ಆರ್‌ಸಿ ಕಾರ್ಡ್ ಮೇಲೆ ಕ್ಯೂಆರ್ ಕೋಡ್! ಏನಿದು ಹೊಸ ರೂಲ್ಸ್?
ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಈಗಾಗಲೇ ಹೇಳಿದ್ದಾರೆ. ಹೀಗಾಗಿ ತಮಗೆ ಹಣವೇ ಬರುವುದಿಲ್ಲ ಎಂದು ನಿರಾಶರಾದವರಿಗೆ ಈಗ ಹೊಸ ಆಸೆ ಚಿಗುರಿದಂತೆ ಆಗಿದೆ.
ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಣಯ
ಬ್ಯಾಂಕ್ ಖಾತೆ, ಆಧಾರ್ ಲಿಂಕ್ ಆಗದ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ 9 ಲಕ್ಷಕ್ಕೂ ಅಧಿಕ ಕುಟುಂಬದವರಿಗೆ ಇನ್ನೂ ಗೃಹ ಲಕ್ಷ್ಮಿ ಹಣ ತಲುಪಿಲ್ಲ. ಹೀಗಾಗಿ ಪಡಿತರ ಚೀಟಿಯಲ್ಲಿರುವ ಬೇರೆ ಹಿರಿಯ ಮಹಿಳಾ ಸದಸ್ಯೆಯರ ಖಾತೆಗೆ ಹಣ ಹಾಕುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಈ ಸಂಬಂಧ ಗುರುವಾರ (ನ. 23) ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
50 ಸಾವಿರ ತೆರಿಗೆದಾರರಿಂದ ಅರ್ಜಿ!
ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ.
ಆತಂಕ ಬೇಡ, ಎಲ್ಲ ಮೊತ್ತ ಒಟ್ಟಿಗೇ ಸಿಗಲಿದೆ
ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಾಯಿಸಿಕೊಂಡ ಗೃಹಿಣಿಯರಲ್ಲಿ ಶೇಕಡಾ 95ರಷ್ಟು ಮನೆ ಒಡತಿಯರಿಗೆ ಈಗಾಗಲೇ ಹಣ ತಲುಪಿದೆ. ತಾಂತ್ರಿಕ ಸಮಸ್ಯೆಯಿಂದಾಗಿ (Technical Problem) ಶೇಕಡಾ 5ರಷ್ಟು ಜನರಿಗೆ ತಲುಪಿಲ್ಲ. ಈ ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನ. 8ರಂದು ಹೇಳಿದ್ದರು. ಅಷ್ಟೇ ಅಲ್ಲ, ಒಮ್ಮೆ ತಾಂತ್ರಿಕ ಸಮಸ್ಯೆ ಪರಿಹಾರವಾದ ಬಳಿಕ ಬಾಕಿ ಮೊತ್ತವನ್ನೂ ಸೇರಿಸಿಯೇ ಕೊಡಲಾಗುವುದು ಎಂದು ಭರವಸೆ ನೀಡಿದ್ದರು.
ಶೇಕಡ 95ರಷ್ಟು ಯಶಸ್ವಿ
ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದರು.
ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸಿಲ್ವಾ? ಕೂಡಲೇ ಈ ಕೆಲಸ ಮಾಡಿ!
ಪ್ರತಿ ತಿಂಗಳು ಎಷ್ಟು ಹಣ ಜಮಾವಣೆ?
ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ 1 ಕೋಟಿ 16 ಲಕ್ಷದ 65 ಸಾವಿರ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯರ ಅಕೌಂಟ್‌ಗೆ ತಲಾ ಎರಡು ಸಾವಿರ ರೂ.ಗಳಂತೆ 2,119 ಕೋಟಿ ಹಣ ಹಾಕಲಾಗಿದೆ. ಈ ಮೂಲಕ ಶೇಕಡಾ 97ರಷ್ಟು ಡಿಬಿಟಿ ಮುಖಾಂತರ ಹಣ ಹಾಕಲಾಗಿದೆ. ಆಗಸ್ಟ್ ತಿಂಗಳಲ್ಲಿ ಐದು ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಹಣ ಹೋಗಿಲ್ಲ. ಸೆಪ್ಟೆಂಬರ್ ನಲ್ಲಿ 82% ಕುಟುಂಬಗಳಿಗೆ ಹಣ ಹಾಕಲಾಗಿದ್ದು 12 ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಅಥವಾ ಕೆವೈಸಿ ಸಮಸ್ಯೆಯಿಂದ ಹಣ ಬ್ಯಾಂಕ್ ಅಕೌಂಟ್‌ನಲ್ಲಿ ಉಳಿದಿದೆ. ಇನ್ನು ಅಕ್ಟೋಬರ್ ನಲ್ಲಿ 2400 ಕೋಟಿ ರೂ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದರು.