Site icon Vistara News

Adani Group Shares: ಅದಾನಿಗಾಗಿ ಜನರ ಹಣ ಅಪಾಯದಲ್ಲಿಟ್ಟ ನರೇಂದ್ರ ಮೋದಿ: ದಿನೇಶ್‌ ಗುಂಡೂರಾವ್

Adani Hindenburg Row

ಬೆಂಗಳೂರು: ಅದಾನಿ ಗ್ರೂಪ್‌ ಆಫ್‌ ಕಂಪನಿ (Adani Group Shares) ನಷ್ಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಏಕೆ ಮೌನವಾಗಿದ್ದಾರೆ? ಮಾತನಾಡಲು ಸ್ನೇಹ ಅಡ್ಡವಾಗಿದೆಯೇ? ಜನರ ಬೆವರಿನ ಹಣವಾಗಿದ್ದು, ಸ್ನೇಹಕ್ಕಾಗಿ ಮೋದಿಯವರು ಜನರ ಅಪಾರ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ದಿನೇಶ್ ಗುಂಡೂರಾವ್ (Dinesh Gundu Rao) ಕಿಡಿಕಾರಿದ್ದಾರೆ.‌

ಹಿಂಡನ್ಸ್‌ ಬರ್ಗ್‌ ತನಿಖಾ ವರದಿ ಹಾಗೂ ಈ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಹಿಸಿರುವುದರ ಬಗ್ಗೆ ಪ್ರಶ್ನೆ ಮಾಡಿರುವ ದಿನೇಶ್‌ ಗುಂಡೂರಾವ್‌ ಅವರು, ಸರಣಿ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ಇದನ್ನೂ ಓದಿ: India energy week 2023: ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟಿಕ್ ಬಾಟಲಿಗಳಿಂದ ಬಟ್ಟೆ! ಹೇಗೆ ತಯಾರಿಸುತ್ತಾರೆ?

ಟ್ವೀಟ್‌ನಲ್ಲೇನಿದೆ?

1. ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿಯವರು ಮೌನವಾಗಿರುವುದೇಕೆ? ಅದಾನಿ ವಂಚನೆಯ ಬಗ್ಗೆ ಮಾತನಾಡಲು‌ ಮೋದಿಯವರಿಗೆ ಸ್ನೇಹ ಅಡ್ಡಿಯಾಗುತ್ತಿದೆಯೇ? ಸ್ನೇಹಕ್ಕಾಗಿ ದೇಶದ ಲಕ್ಷಾಂತರ ಜನರ ಹೂಡಿಕೆ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆಯೇ ಮೋದಿ? ಪ್ರಧಾನಿ ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ?

ಭಾಗ್ ಮಿಲ್ಕಾ ಭಾಗ್ ಎಂಬಂತೆ‌ ಮೋದಿ ಆಡಳಿತದಲ್ಲಿ ಮೆಹುಲ್ ಚೋಕ್ಸಿ, ನೀರವ್ ಮೋದಿ, ಲಲಿತ್ ಮೋದಿ, ಮಲ್ಯ ಸೇರಿದಂತೆ ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಓಡಿ ಹೋಗಿದ್ದಾರೆ. ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ? ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದ್ದ ಎಲ್‌ಐಸಿಯ 23 ಸಾವಿರ ಕೋಟಿ, ಎಸ್‌ಬಿಐ ಕೊಟ್ಟ ಸಾವಿರಾರು ಕೋಟಿ ಸಾಲಕ್ಕೆ ಪಂಗನಾಮ ಗ್ಯಾರಂಟಿಯೇ?

ಆರ್ಥಿಕ ಅಪರಾಧಗಳ ಬಗ್ಗೆ ತಮ್ಮದು ಝೀರೋ ಟಾಲರೆನ್ಸ್ ನಿಲುವು ಎಂದು ಮೋದಿಯವರು ಹೇಳುತ್ತಾರೆ. ಆದರೆ ಅದಾನಿ ಎಸಗಿದ ಆರ್ಥಿಕ ಅಪರಾಧದ ಬಗ್ಗೆ ಮೋದಿಯವರ ವ್ಯಾಖ್ಯಾನವೇನು? ಇ.ಡಿ., ಸಿಬಿಐ ಮತ್ತು ಐಟಿ ಸಂಸ್ಥೆಗಳು ಕೇವಲ ರಾಜಕೀಯ ವಿರೋಧಿಗಳ ವಿರುದ್ಧ ತನಿಖೆ ಮಾಡುವ ಸಂಸ್ಥೆಗಳೇ? ಮೋದಿಯವರ ಅತ್ಯಾಪ್ತರಿಗೆ ಈ ತನಿಖಾ ಸಂಸ್ಥೆಗಳಿಂದ ವಿನಾಯಿತಿ ಇದೆಯೇ?

ಸಾರ್ವಜನಿಕರ ಜೀವನ ಭದ್ರತೆಗಾಗಿ ಕಾಂಗ್ರೆಸ್‌ 1956ರಲ್ಲಿ ಎಲ್‌ಐಸಿಯನ್ನು ಸ್ಥಾಪಿಸಿತ್ತು. 2021ರ ವರೆಗೆ ಎಲ್‌ಐಸಿಯಲ್ಲಿದ್ದ ಜನರ ಹಣ ಸುಭದ್ರವಾಗಿತ್ತು. ಆದರೆ 2021ರಲ್ಲಿ ಈ ಸರ್ಕಾರ ಎಲ್‌ಐಸಿ ಹಣವನ್ನು ಷೇರು ಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿತ್ತು. ಎಲ್‌ಐಸಿ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದ್ದು ಯಾರ ಅನುಕೂಲಕ್ಕಾಗಿ ಮೋದಿಯವರೇ?

ಇದನ್ನೂ ಓದಿ: Planet Transit 2023 : ಸದ್ಯವೇ ಮೂರು ಗ್ರಹಗಳ ಸಂಚಾರ; ಶುಭಾಶುಭ ಫಲಗಳೇನು?

ಮೋದಿಯವರ ಸ್ನೇಹಿತ ಗೌತಮ್ ಅದಾನಿ ಇನ್ನೇನು ಕೆಲವೇ ದಿನಗಳಲ್ಲಿ ‌ಮೋಸ್ಟ್ ವಾಂಟೆಡ್ ಫ್ಯುಜಿಟಿವ್ ಆಗಲಿದ್ದಾರೆ. ಅದಾನಿ ಸಮೂಹದಲ್ಲಿ‌ ಹೂಡಿಕೆ ಮಾಡಿದ್ದ ಎಲ್‌ಐಸಿಯ 23 ಸಾವಿರ ಕೋಟಿ, ಎಸ್‌ಬಿಐನ ಸಾವಿರಾರು ಕೋಟಿಗೆ‌ ಉಂಡೆನಾಮ ಫಿಕ್ಸ್. ಮೋದಿಯವರೇ ನಿಮ್ಮ‌ ಗೆಳೆಯನಿಗಾಗಿ ದೇಶದ ಜನರ ದುಡ್ಡಿನ ಜತೆ ಚೆಲ್ಲಾಟವಾಡಬೇಡಿ. ಯಾಕೆಂದರೆ ಅದು ಜನರ ಬೆವರಿನ ದುಡ್ಡು.

ಅದಾನಿ ಸಮೂಹದಲ್ಲಿ‌ ಹೂಡಿಕೆ ಮಾಡಿದ್ದ ಎಲ್‌ಐಸಿ ಹಾಗೂ ಎಸ್‌ಬಿಐನ ಹಣಕ್ಕೆ ಮೋಸ ಗ್ಯಾರಂಟಿ ಎಂದು ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

Exit mobile version