Adhish Rajinish Wali: ಕಸಾಪ ಯುಕೆ ಗೌರವ ಯುವ ಸಂಚಾಲಕರಾಗಿ ಆದೀಶ್‌ ರಜನೀಶ್‌ ವಾಲಿ ನೇಮಕ Vistara News
Connect with us

ಕ ಸಾ ಪ

Adhish Rajinish Wali: ಕಸಾಪ ಯುಕೆ ಗೌರವ ಯುವ ಸಂಚಾಲಕರಾಗಿ ಆದೀಶ್‌ ರಜನೀಶ್‌ ವಾಲಿ ನೇಮಕ

Adhish Rajinish Wali: ಈ ಹಿಂದೆ ಲಂಡನ್‌ನಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸುವ ಮೂಲಕ ಮೆಚ್ಚುಗೆ ಪಡೆದಿದ್ದ ಕನ್ನಡಿಗ ಆದೀಶ್‌ ರಜನೀಶ್‌ ವಾಲಿ, ಕನ್ನಡ ಸಾಹಿತ್ಯ ಪರಿಷತ್‌ ಯುಕೆ ಗೌರವ ಯುವ ಸಂಚಾಲಕರಾಗಿ ನೇಮಕಗೊಂಡಿದ್ದಾರೆ.

VISTARANEWS.COM


on

Mahesh Joshi handed over the appointment order letter to Adhish Rajinish Wali
ಆದೀಶ್‌ ರಜನೀಶ್‌ ವಾಲಿಗೆ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದರು.
Koo

ಬೆಂಗಳೂರು: ಹೊರದೇಶದ ಕನ್ನಡಿಗರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸಮನ್ವಯ ಸಾಧಿಸುವ ಉದ್ದೇಶದಿಂದ ಯುನೈಟೆಡ್ ಕಿಂಗ್‌ಡಮ್‌ನ(UK) ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಯುವ ಸಂಚಾಲಕರಾಗಿ ಲಂಡನ್‌ನ ಕನ್ನಡಿಗ ಆದೀಶ್‌ ರಜನೀಶ್‌ ವಾಲಿ ಅವರನ್ನು ಕಸಾಪ ನೇಮಕ ಮಾಡಿದೆ.

ಈ ಹಿಂದೆ ಸಿಟಿ ಯೂನಿವರ್ಸಿಟಿ ಆಫ್‌ ಲಂಡನ್‌ನಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸುವ ಮೂಲಕ ಬೀದರ್‌ನ ಆದೀಶ್‌ ರಜನೀಶ್‌ ವಾಲಿ ಕನ್ನಡಿಗರ ಮೆಚ್ಚುಗೆ ಪಡೆದಿದ್ದರು. ನಂತರ ಯುವಕನಿಗೆ ಕಸಾಪದಿಂದ ಸನ್ಮಾನ ಮಾಡಿ, ಸದಸ್ಯತ್ವ ನೀಡಲಾಗಿತ್ತು. ಇದೀಗ ವಿದೇಶದಲ್ಲಿ ಕನ್ನಡಪರ ಕಾರ್ಯ ಮಾಡಲು ಮುಂದಿನ ಆದೇಶದವರೆಗೆ ಯುಕೆ ಗೌರವ ಯುವ ಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧೈಯೋದ್ದೇಶವನ್ನು ಕನ್ನಡ ಸಾಹಿತ್ಯ ಪರಿಷತ್‌ ಹೊಂದಿದೆ. ಪರಿಷತ್ತನ್ನು ‘ಜನಸಾಮಾನ್ಯರ ಪರಿಷತ್ತನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಯುನೈಟೆಡ್ ಕಿಂಗ್‌ಡಮ್‌ ಗೌರವ ಯುವ ಸಂಚಾಲಕರಾಗಿ ಕನ್ನಡಿಗ ಆದೀಶ್‌ ರಜನೀಶ್‌ ವಾಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ಗೋ ಸಂಪತ್ತು: ವಿದೇಶಗಳಲ್ಲಿ ಮಿಂಚುತ್ತಿವೆ ಭಾರತೀಯ ಗೋ ತಳಿಗಳು!

ಹೊರದೇಶದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಲಾಗುತ್ತಿದ್ದು, ಹೊರದೇಶದಲ್ಲಿರುವ ಕನ್ನಡಿಗರನ್ನು ಪರಿಷತ್ತಿಗೆ ಸದಸ್ಯರನ್ನಾಗಿಸಲು, ಕನ್ನಡಪರ ಕಾರ್ಯಚಟುವಟಿಕೆಗಳನ್ನು ಹೊರದೇಶದಲ್ಲಿ ನಡೆಸಲು, ಕನ್ನಡ ಸಾಹಿತ್ಯ ಸಮಾವೇಶ, ಸಮ್ಮೇಳನಗಳ ಯೋಜನೆಯನ್ನು ಕಾರ್ಯಾನುಷ್ಠಾನಗೊಳಿಸಲು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

Edited by

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ ಸಾ ಪ

ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಕಲಾವಿದ ಹಾಗೂ ಕನ್ನಡ ಹೋರಾಟಗಾರಾದ ಜಿ.ಕೆ. ಸತ್ಯ ಅವರು ಆಯ್ಕೆ ಆಗಿದ್ದಾರೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಆಯ್ಕೆ ಸಮಿತಿಯಲ್ಲಿ ನಿರ್ಧಾರವಾಗಿದೆ.

VISTARANEWS.COM


on

Edited by

G k sathya
ಹಿರಿಯ ಕಲಾವಿದ ಜಿ.ಕೆ ಸತ್ಯ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ 2023ನೇ ಸಾಲಿನ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಕನ್ನಡ ಪರ ಹೋರಾಟಗಾರ ಹಿರಿಯ ಕಲಾವಿದರಾದ ಜಿ.ಕೆ. ಸತ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಟಿ. ತಿಮ್ಮೇಶ್‌ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಹೊಂದಿದೆ. ಜತೆಗೆ ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿದೆ. ಕನ್ನಡ ಚಳವಳಿ ಸೇನಾನಿ ಮ. ರಾಮಮೂರ್ತಿ ಅವರು ರಾಜ್ಯಾದ್ಯಂತ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೋರಾಟಕ್ಕೆ ಶಕ್ತಿ ಮತ್ತು ಚೈತನ್ಯವನ್ನು ತುಂಬಿದವರು.

ಇವರ ಹೆಸರಿನಲ್ಲಿರುವ ಈ ದತ್ತಿ ಪ್ರಶಸ್ತಿಯನ್ನು ರಾಜ್ಯದಲ್ಲಿ ಕನ್ನಡದ ಹೋರಾಟದಲ್ಲಿ ತೊಡಗಿಸಿಕೊಂಡಿರುವ 50 ವರ್ಷ ಮೀರಿದ ವಯೋಮಾನದ ಕನ್ನಡ ಕಾರ್ಯಕರ್ತರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಇದುವರೆಗೆ 8 ಜನ ಕನ್ನಡ ಚಳುವಳಿಗಾರರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಸಾಲಿನ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರ ಹಿರಿಯ ಕಲಾವಿದ ಜಿ.ಕೆ. ಸತ್ಯ ಅವರು ಆಯ್ಕೆ ಆಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಜಿ.ಕೆ. ಸತ್ಯ ಕನ್ನಡದ ಅತ್ಯಂತ ಜನಪ್ರಿಯ ವರ್ಣಚಿತ್ರಕಾರರು. ಅವರು ಚಿತ್ರಕಲೆಗೆ ಸೀಮಿತವಾಗದೆ ಕನ್ನಡ ಹೋರಾಟಗಳಲ್ಲಿ ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಂಡವರು. ಕನ್ನಡ ಚಳವಳಿಗಾರರಾದ ಅ.ನ.ಕೃ, ಮ.ರಾಮಮೂರ್ತಿ, ನಾಡಿಗೇರರು ಮೊದಲಾದವರ ನಿಕಟ ಒಡನಾಡಿಯಾಗಿದ್ದರು. ಗೋಕಾಕ್ ಚಳುವಳಿ ಅನುಷ್ಟಾನಕ್ಕೆ ಹೋರಾಡಿದ ಪ್ರಮುಖ ನೇತಾರರಲ್ಲಿ ಒಬ್ಬರು. ಕನ್ನಡ ಶಕ್ತಿ ಕೇಂದ್ರದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳೂ ಆಗಿದ್ದರು. ಸದಾ ಕನ್ನಡ, ಕನ್ನಡಿಗ, ಕರ್ನಾಟಕದ ಹಿತರಕ್ಷಣೆಗೆ ಹೋರಾಡುತ್ತಾ ಬಂದಿರುವ ಸತ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತಿದೆ ಎಂದು ನಾಡೋಜ. ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಮಾಜಿ ಜಿಲ್ಲಾಧ್ಯಕ್ಷರಾದ ಟಿ.ತಿಮ್ಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ ಸಾ ಪ

ನಾಡಿನ ಸಾಧಕರ ಪರಿಚಯಕ್ಕೆ ಕಸಾಪದಿಂದ ಕನ್ನಡದ ಹೆಸರು, ಸಹಿ ಅಭಿಯಾನ

ಸಾಧಕರ ಹೆಸರನ್ನು ಆಂಗ್ಲ ಭಾಷೆಯಲ್ಲಿ ಹೃಸ್ವಗೊಳಿಸುವುದರಿಂದ ಮೂಲ ಅರ್ಥದಿಂದ ದೂರವಾಗುತ್ತದೆ. ಹೀಗಾಗಿ ಹೊಸ ಪೀಳಿಗೆಗೆ ಸಾಧಕರ ಪರಿಚಯ ಮಾಡಲು ಕನ್ನಡ ಸಾಹಿತ್ಯ ಪರಿಷತ್‌, ಕನ್ನಡದ ಹೆಸರು ಮತ್ತು ಸಹಿ ಅಭಿಯಾನ ಕೈಗೊಳ್ಳಲು ನಿರ್ಧರಿಸಿದೆ.

VISTARANEWS.COM


on

Edited by

Kannada Sahitya Parishat
ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ
Koo

ಬೆಂಗಳೂರು: ಕನ್ನಡ ನಾಡಿಗೆ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಿದ ಹಲವು ಹಿರಿಯರು, ಸಾಧಕರ ಹೆಸರನ್ನು ರಸ್ತೆ, ಬಡಾವಣೆಗೆ ಇಡುವ ಪದ್ಧತಿ ಮೊದಲಿಂದಲೂ ಇದೆ. ಆದರೆ, ಕ್ರಮೇಣ ಆಂಗ್ಲ ಭಾಷೆಯಲ್ಲಿ ಹೃಸ್ವಗೊಳ್ಳುವ ಹೆಸರುಗಳು ಮೂಲ ಅರ್ಥದಿಂದ ದೂರವಾಗುತ್ತಿವೆ. ಹೀಗಾಗಿ ಹೊಸ ಪೀಳಿಗೆಯವರಿಗೆ ಸಾಧಕರ ಪರಿಚಯ ಮಾಡಲು ಕನ್ನಡ ಸಾಹಿತ್ಯ ಪರಿಷತ್‌ನಿಂದ ಕನ್ನಡದ ಹೆಸರು ಮತ್ತು ಸಹಿ ಅಭಿಯಾನ ಹಮ್ಮಿಕೊಳ್ಳಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಡಾ.ಮಹೇಶ ಜೋಶಿ ಅವರು, ಮಹಾತ್ಮ ಗಾಂಧಿ ರಸ್ತೆ ಈಗ ಎಂ.ಜಿ.ರಸ್ತೆಯಾಗಿದೆ, ಕೃಷ್ಣ ರಾಜ ಒಡೆಯರ ಹೆಸರಿನಲ್ಲಿ ಇರುವ ರಸ್ತೆ ಕೆ.ಆರ್.ರಸ್ತೆಯಾಗಿದೆ. ನರಸಿಂಹ ರಾಜ ಒಡೆಯರ್ ಅವರ ಹೆಸರಿನಲ್ಲಿ ರೂಪಿತವಾದ ಬಡಾವಣೆ ಎನ್.ಆರ್.ಕಾಲೋನಿಯಾಗಿದೆ. ಹೀಗೆ ಹತ್ತಾರು ಉದಾಹರಣೆಗಳನ್ನು ನೀಡಬಹುದು. ಕನ್ನಡ ಬರಹಗಾರರಲ್ಲಿ ಡಿ.ವಿ.ಗುಂಡಪ್ಪ ಅವರ ಹೆಸರನ್ನು ಡಿ.ವಿ.ಜಿ ಎಂದು ಬರೆಯುವ ಪದ್ಧತಿ ಜನಜನಿತವಾಗಿದ್ದು, ಅವರ ಮೂಲ ಹೆಸರೇ ಮರೆಯಾಗುವ ಅಪಾಯವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Adhish Rajinish Wali: ಕಸಾಪ ಯುಕೆ ಗೌರವ ಯುವ ಸಂಚಾಲಕರಾಗಿ ಆದೀಶ್‌ ರಜನೀಶ್‌ ವಾಲಿ ನೇಮಕ

ಅದೇ ರೀತಿ ಎಚ್.ಎಸ್.ವಿ (ಎಚ್.ಎಸ್.ವೆಂಕಟೇಶ ಮೂರ್ತಿ), ಬಿ.ಆರ್.ಎಲ್ (ಬಿ.ಆರ್.ಲಕ್ಷ್ಮಣ ರಾವ್) ಪಿ.ಟಿ.ಎನ್, (ಪು.ತಿ.ನರಸಿಂಹಾಚಾರ್) ಕೆ.ಎಸ್.ಎನ್ (ಕೆ.ಎಸ್.ನರಸಿಂಹ ಸ್ವಾಮಿ) ಇಂತಹ ಪ್ರಯೋಗಗಳು ಸಾಮಾಜಿಕ ಜಾಲತಾಣಗಳು ಬೆಳೆಯುತ್ತಾ ಹೋದಷ್ಟು ಹೆಚ್ಚಾಗುತ್ತಿದೆ. ಸೌಂತ್ ಎಂಡ್ ಸರ್ಕಲ್‌ಗೆ ತೀನಂಶ್ರೀ ವೃತ್ತ ಎಂದು ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ನಾಮಕರಣ ಮಾಡಿದ್ದರೂ ಅದು ಜನ ಜನಿತವಾಗಿಲ್ಲ. ಟ್ಯಾಂಕ್ ಬಂಡ್ ರಸ್ತೆಗೆ ಆರ್.ನಾಗೇಂದ್ರ ರಾಯರ ಹೆಸರು ಇಟ್ಟಿದ್ದರೂ ಅದು ಆಚರಣೆಗೆ ಬಂದಿಲ್ಲ. ಇಂತಹ ಹಲವು ದೋಷಗಳನ್ನು ಪಟ್ಟಿ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಉಂಟು ಮಾಡುವ ಅಭಿಯಾನ ಆರಂಭಿಸಲು ಕನ್ನಡ ಸಾಹಿತ್ಯ ಪರಿಷತ್‌ ಅಲೋಚಿಸಿದೆ ಎಂದು ಡಾ.ಮಹೇಶ ಜೋಶಿ ಹೇಳಿದ್ದಾರೆ.

ಇದಲ್ಲದೆ ಈಗ ಹೆಸರು ಇಟ್ಟಿರುವ ಸಾಧಕರ ಕುರಿತು ಜನ ಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿಸಿ ಅರಿವನ್ನು ಹೆಚ್ಚಿಸುವ ಉದ್ದೇಶವೂ ಕನ್ನಡ ಸಾಹಿತ್ಯ ಪರಿಷತ್‌ಗೆ ಇದೆ. ಉದಾಹರಣೆಗೆ ಬ್ಯೂಗಲ್ ರಾಕ್ ಪಾರ್ಕ್‌ ದ್ವಾರಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ಏಳಿಗೆಗೆ ಶ್ರಮಿಸಿದ ಬೆಳ್ಳಾವೆ ವೆಂಕಟನಾರಾಯಣಪ್ಪ ಅವರ ಹೆಸರನ್ನು ಇಡಲಾಗಿದೆ. ಆದರೆ, ಅವರ ಕುರಿತ ವಿವರಗಳು ಅಲ್ಲಿ ಲಭ್ಯವಿಲ್ಲ. ಈ ವಿವರಗಳನ್ನು ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಅಲ್ಲಿ ಅಳವಡಿಸುವ ಉದ್ದೇಶ ಕನ್ನಡ ಸಾಹಿತ್ಯ ಪರಿಷತ್‌ಗೆ ಇದೆ ಎಂದು ಅಭಿಯಾನದ ಉದ್ದೇಶದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕನ್ನಡದಲ್ಲಿ ಸಹಿ ಮಾಡುವ ಅಭಿಯಾನವನ್ನೂ ಕೂಡ ಕನ್ನಡ ಸಾಹಿತ್ಯ ಪರಿಷತ್ತು ರೂಪಿಸಲಿದೆ. ಸಹಿ ಎನ್ನುವುದು ವ್ಯಕ್ತಿಯ ವ್ಯಕ್ತಿತ್ವದ ಹೆಗ್ಗುರುತು ಇದ್ದಂತೆ. ಇಲ್ಲಿ ಕನ್ನಡ ಬಳಕೆಯಾದರೆ ಭಾಷೆಯ ಭಾವನಾತ್ಮಕ ಅಯಾಮದ ಜತೆಗಿನ ವ್ಯಕ್ತಿಯ ಬಾಂಧವ್ಯವೂ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡದಲ್ಲಿಯೇ ಸಹಿ ಮಾಡುವಂತೆ ಕನ್ನಡಿಗರೆಲ್ಲರೂ ಜಾಗೃತಿ ಉಂಟು ಮಾಡುವ ಇಂತಹ ಕನ್ನಡದ ಸಹಿಯನ್ನು ಎಲ್ಲಾ ಅಧಿಕೃತ ವ್ಯವಹಾರಗಳಲ್ಲಿಯೂ ಮಾನ್ಯ ಮಾಡುವಂತೆ ಮಾಡುವ ಅಭಿಯಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತೊಡಗಲಿದೆ ಎಂದು ಹೇಳಿದ್ದಾರೆ.‌

ಇದನ್ನೂ ಓದಿ | ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಕಸೂತಿ‍

ಕನ್ನಡವನ್ನು ಎಲ್ಲಾ ಹಂತದಲ್ಲಿಯೂ ಸ್ಥಾಪಿಸುವ ಇನ್ನಷ್ಟು ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದ ಡಾ.ಮಹೇಶ ಜೋಶಿ ಅವರು, ಅನುಷ್ಠಾನದಲ್ಲಿ ಎಲ್ಲಾ ಕನ್ನಡಿಗರ ಸಹಕಾರ ಅಗತ್ಯವಿದೆ. ಕನ್ನಡ ತಾಯಿ ಭುವನೇಶ್ವರಿಯ ನೆಲೆವೀಡಾದ ಸಿದ್ದಾಪುರಿಂದ ಈ ಅಭಿಯಾನ ಆರಂಭವಾಗಲಿದ್ದು, ಶೀಘ್ರದಲ್ಲಿಯೇ ದಿನಾಂಕವನ್ನು ನಿಗದಿ ಪಡಿಸುವುದಾಗಿ ತಿಳಿಸಿದ್ದಾರೆ.

Continue Reading

ಕ ಸಾ ಪ

Chavundaraya Award: ಜೈನ ಧರ್ಮದ ಶಾಂತಿಯ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಡಾ. ಜಿ. ಪರಮೇಶ್ವರ

Chavundaraya Award: ಬೆಂಗಳೂರಿನಲ್ಲಿ ಬಹುಶ್ರುತ ವಿದ್ವಾಂಸ ಪ್ರೊ.ಕೆ.ಇ.ರಾಧಾಕೃಷ್ಣ ಅವರಿಗೆ ಕಸಾಪದಿಂದ 2022ನೇ ಸಾಲಿನ ʼಚಾವುಂಡರಾಯ ಪ್ರಶಸ್ತಿʼ ಪ್ರದಾನ ಮಾಡಲಾಗಿದೆ. ಪ್ರಶಸ್ತಿಯು 30 ಸಾವಿರ ರೂ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ.

VISTARANEWS.COM


on

Edited by

Chavundaraya Award to Pro KE Radhakrishna
Koo

ಬೆಂಗಳೂರು: ನಮ್ಮ ದೇಶ ನಾಲ್ಕು ಧರ್ಮಗಳ ಹುಟ್ಟನ್ನು ಕಂಡಿದೆ. ಹಿಂದು, ಬೌದ್ಧ, ಜೈನ ಹಾಗೂ ಸಿಖ್ ಧರ್ಮಗಳು ಹುಟ್ಟಿದ್ದು ನಮ್ಮ ದೇಶದಲ್ಲಿಯೇ. ವಿಶ್ವಕ್ಕೆ ಈ ನಾಲ್ಕೂ ಧರ್ಮಗಳು ವಿಶೇಷ ಸಂದೇಶ ನೀಡುತ್ತಿವೆ. ಜೈನ ಧರ್ಮ (Chavundaraya Award) ನೀಡಿರುವ ಶಾಂತಿಯ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದರು.

ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನ ಶ್ರೀ ಕೃಷ್ಣರಾಜ ಪರಿಷತ್‌ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ʻಚಾವುಂಡರಾಯ ಪ್ರಶಸ್ತಿʼ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಧರ್ಮದ ಕುರಿತ ಅಧ್ಯಯನ ನಮ್ಮಲ್ಲಿ ಕೇವಲ ಅಕಾಡೆಮಿಕ್ ನೆಲೆಯಲ್ಲಿ ನಡೆಯುತ್ತಿದೆಯೇ ಹೊರತು ಅದರ ಅಂತ:ಸತ್ವ ಹಿಡಿಯುವ ಕೆಲಸವಾಗುತ್ತಿಲ್ಲ, ಪ್ರೊ.ಕೆ.ಇ.ರಾಧಾಕೃಷ್ಣ ಅವರು ಇಂತಹ ಮಹತ್ವದ ಕೆಲಸವನ್ನು ಮಾಡಿದ್ದಾರೆ ಎಂದು ಮೆಚ್ಚಿಗೆ ಸೂಚಿಸಿದ ಅವರು, ಜೈನ ಧರ್ಮ ನಮ್ಮ ದೇಶದಲ್ಲಿ ಹುಟ್ಟಿಕೊಂಡು ಪ್ರಪಂಚಕ್ಕೆ ಶಾಂತಿಯ ಸಂದೇಶವನ್ನು ನೀಡುತ್ತ ಬಂದಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡುವುದರ ಜತೆಗೆ ಯೋಗ್ಯರನ್ನು ಹುಡುಕಿ ಅವರನ್ನು ಗೌರವಿಸುವ ಕಾರ್ಯವನ್ನು ಕಸಾಪ ಮಾಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಮೈ ಲೈಫ್ ಮೈ ಪ್ರಾಬ್ಲಮ್

ಬಹುಶ್ರುತ ವಿದ್ವಾಂಸ ಪ್ರೊ.ಕೆ.ಇ.ರಾಧಾಕೃಷ್ಣ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2022ನೇ ಸಾಲಿನ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು, ಚಾವುಂಡರಾಯ 10ನೇ ಶತಮಾನಕ್ಕೆ ಸೇರಿದ ಜೈನ ಕವಿ ಹಾಗೂ ಮಹಾಯೋಧನಾಗಿದ್ದ. ಕನ್ನಡ ಜೈನ ಸಾಹಿತ್ಯ ರಚನೆಕಾರನಾಗಿ, ಅನೇಕ ಕವಿಗಳಿಗೆ ಪೋಷಕನಾಗಿ, ದಾನ-ಧರ್ಮಗಳಿಗೆ ಹೆಸರುವಾಸಿಯಾಗಿ ಮೆರೆದವನು. ಆತ ‘ಚಾವುಂಡರಾಯ ಪುರಾಣ’ ಎಂದು ವಾಡಿಕೆಯಾಗಿ ಹೇಳುವ ‘ತ್ರಿಷಷ್ಟಿ ಲಕ್ಷಣ ಮಹಾ ಪುರಾಣ’ ಎಂಬ ಮಹಾಪುರಾಣವನ್ನು ರಚಿಸಿದ್ದ ಎಂದು ತಿಳಿಸಿದರು.

ಕನ್ನಡ ನಾಡಿನ ಪ್ರಸಿದ್ಧ ಜೈನಕ್ಷೇತ್ರ ಶ್ರವಣಬೆಳಗೊಳದಲ್ಲಿ ಭಕ್ತಿ, ಜ್ಞಾನ, ವೈರಾಗ್ಯಮೂರ್ತಿ ‘ಗೊಮ್ಮಟೇಶ್ವರ’ ಎಂದು ಕರೆಯುವ ಬಾಹುಬಲಿ ಸ್ವಾಮಿಯ ಮಹೋನ್ನತ ಶಿಲಾಮೂರ್ತಿಯನ್ನು ಪ್ರತಿಷ್ಠಾಪಿಸಿದ ಧೀಮಂತ ವ್ಯಕ್ತಿ ಚಾವುಂಡರಾಯ. ಚಾವುಂಡರಾಯ ಸ್ವತಃ ಕವಿಯಾಗಿದ್ದುದಲ್ಲದೆ ಕವಿಜನ ಪೋಷಕನೂ ಆಗಿದ್ದ. ಆತ ರನ್ನ ಮಹಾಕವಿಯು ಅವರ ಆಶ್ರಯದಲ್ಲಿ ಇದ್ದು, ಅಜಿತಸೇನಾಚಾರ್ಯರ ಬಳಿ ವಿದ್ಯಾಭ್ಯಾಸ ಮಾಡಿದ್ದ. ಅದರ ಪರಿಣಾಮವೇ ರನ್ನ ತನ್ನ ‘ಅಜಿತ ಪುರಾಣ’ದಲ್ಲಿ ಚಾವುಂಡರಾಯನ ಶೌರ್ಯ, ಔದಾರ್ಯಗಳನ್ನು ವರ್ಣಿಸಿದ್ದಾನೆ ಎಂದು ನಾಡೋಜ ಡಾ. ಮಹೇಶ ಜೋಶಿ ನೆನಪಿಸಿಕೊಂಡರು.

ಮುಖ್ಯ ಅತಿಥಿ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ ಅರ್ಥಪೂರ್ಣವಾಗಿದೆ. ಪಂಪ ರನ್ನನ ಕಾಲವನ್ನು ನಮ್ಮ ನಾಡಿನ ಸಾಹಿತ್ಯದ ಸುವರ್ಣಯುಗ ಎಂದು ಕರೆಯುತ್ತಿದ್ದರು. ಪ್ರಪಂಚಕ್ಕೆ ಜೈನ ಮತವು ಏಕ ರೂಪತೆಯ ನಡತೆಯನ್ನು ತೋರಿಸಿಕೊಟ್ಟಿದೆ. ಆದರೆ ನಮ್ಮ ಪಠ್ಯದಲ್ಲಿ ಮಕ್ಕಳಿಗೆ ಇಂತಹ ಮಹತ್ವದ ಸಂಗತಿಗಳು ಇಲ್ಲದಿರುವುದು ವಿಷಾದನೀಯ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಇಂದು ಶೇ. 60ರಷ್ಟು ಜನರು ಕನ್ನಡ ಬಾರದವರಿದ್ದಾರೆ. ಹೀಗಾಗಿ ನಾವು ಕನ್ನಡ ನಾಡಿನಲ್ಲಿ ಭಾಷೆ ಸಂಸ್ಕೃತಿ, ಕಲೆ, ಸಾಹಿತ್ಯ ಬೆಳೆಸುವ ಕೆಲಸ ಮಾಡಬೇಕಿದೆ. ಸರ್ಕಾರ ನನಗೆ ಕನ್ನಡ ನಾಡಿನ ನೆಲ ಮೂಲವನ್ನು ಉಳಿಸಿ ಬೆಳೆಸು ಜವಾಬ್ದಾರಿಯನ್ನು ನೀಡಿದೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂಬ ಭರವಸೆಯನ್ನು ನೀಡುವ ಜತೆಗೆ ಕಸಾಪ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ | ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಶ್ರಾವಣಾ

ಚಾವುಂಡರಾಯ ಪ್ರಶಸ್ತಿ ಪಡೆದ ಬಹುಶ್ರುತ ವಿದ್ವಾಂಸ ಪ್ರೊ.ಕೆ.ಇ. ರಾಧಾಕೃಷ್ಣ ಅವರು ಮಾತನಾಡಿ, ಭಾಷೆಗೊಂದು ಮನೋಧರ್ಮವಿರುತ್ತದೆ. ಆ ಮನೋಧರ್ಮದ ಮೂಲಕವೇ ಜ್ಞಾನದ ಬೆಳವಣಿಗೆಯಾಗುವುದು, ಜ್ಞಾನಕ್ಕೂ ಜೀವನಕ್ಕೂ ಅವಿನಾಭಾವ ಪವಿತ್ರ ಸಂಬಂಧವಿದೆ. ಈ ಮಧ್ಯದಲ್ಲಿ ನಮ್ಮ ಮೂಲ ಭಾಷೆ ಸಂಸ್ಕೃತದಲ್ಲಿ ಇದೆಲ್ಲವೂ ಇದೆ. ಆದರೆ ಸಾಮಾನ್ಯರಿಂದ ಸಂಸ್ಕೃತವನ್ನು ದೂರ ಮಾಡಿರುವುದು ನಮ್ಮತನವನ್ನು ಅರಿಯಲು ಸಾಧ್ಯವಾಗದೇ ಇರುವದಕ್ಕೆ ಮೂಲ ಕಾರಣ. ಶಂಕರ ಭಗವತ್ಪಾದರು ಆತ್ಮ ಎನ್ನುವ ಶಬ್ದಕ್ಕೆ ಅವರ ರೀತಿಯಲ್ಲಿ ಅದ್ಭುತವಾಗಿ ವಾಖ್ಯಾನ ಮಾಡಿದ್ದರು. ಆದರೆ, ಅದರ ತತ್ವಾರ್ಥವನ್ನು ಅರಿತುಕೊಳ್ಳಲು ಜೈನ ಗ್ರಂಥಗಳು ಸಹಾಯ ಮಾಡುತ್ತವೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಜೈನ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ, ಕಸಾಪ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಮ್.ಪಟೇಲ್ ಪಾಂಡು, ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಮತ್ತಿತರರು ಇದ್ದರು.

Continue Reading
Advertisement
Vivek Ramaswamy offering rs 80 lakh to nanny Says media report
ಪ್ರಮುಖ ಸುದ್ದಿ4 hours ago

ಮಕ್ಕಳನ್ನು ನೋಡಿಕೊಳ್ಳುವ ಆಯಾ ಕೆಲಸಕ್ಕೆ 80 ಲಕ್ಷ ರೂ. ಸ್ಯಾಲರಿ ಆಫರ್!

MLC TA Sharavana
ಬೆಂಗಳೂರು4 hours ago

TA Sharavana: ಅನಾಮಿಕರಾಗಿದ್ದ ಜಮೀರ್‌ಗೆ ರಾಜಕೀಯ ಬದುಕು ಕೊಟ್ಟಿದ್ದೇ ಜೆಡಿಎಸ್: ಟಿ.ಎ.ಶರವಣ

Justin Trudeau
ದೇಶ5 hours ago

India Canada Row: ಥಂಡಾ ಹೊಡೆದ ಕೆನಡಾ ಪಿಎಂ! ಭಾರತದೊಂದಿಗೆ ಇನ್ನು ಜಗಳ ಮಾಡಲ್ಲ ಎಂದ ಟ್ರೂಡೋ

Netherlands cricket team
ಕ್ರಿಕೆಟ್5 hours ago

ICC World Cup 2023 : ವಿಶ್ವ ಕಪ್​ನಲ್ಲಿ ಆಡಲಿರುವ ನೆದರ್ಲ್ಯಾಂಡ್ಸ್​​ ತಂಡದ ಬಲವೇನು? ದೌರ್ಬಲ್ಯವೇನು?

Modi and KTR
ದೇಶ5 hours ago

ಎನ್‌ಡಿಎಗೆ ಸೇರಿಸಿಕೊಳ್ಳಿ ಎಂದಿದ್ದ ಕೆಸಿಆರ್; ಮೋದಿ! ಬಿಜೆಪಿ ಜತೆ ಹೋಗಲು ನಮಗೇನು ಹುಚ್ಚು ನಾಯಿ ಕಚ್ಚಿದೆಯಾ; ಕೆಟಿಆರ್

Child dies
ಕರ್ನಾಟಕ5 hours ago

Anekal News: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಸಾವು

MB Patil visits america
ಕರ್ನಾಟಕ6 hours ago

MB Patil : ಬೆಂಗಳೂರಿನಲ್ಲಿ 800 ಕೋಟಿ ರೂ. ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಒಲವು: ಎಂ.ಬಿ. ಪಾಟೀಲ್

Top 10 news
ಟಾಪ್ 10 ನ್ಯೂಸ್6 hours ago

VISTARA TOP 10 NEWS : ಜಾತಿ ಗಣತಿಗೆ ಮೋದಿ ವಿರೋಧ, ಶಿವಮೊಗ್ಗದಲ್ಲಿ ಪೊಲೀಸರಿಗೇ ಬೆದರಿಕೆ ಹಾಕಿದ್ದ ಕಿಡಿಗೇಡಿಗಳು ಮತ್ತಿತರ ದಿನದ ಪ್ರಮುಖ ಸುದ್ದಿಗಳು

Agriculture Minister N Cheluvarayaswamy latest pressmeet at Kalaburagi
ಕರ್ನಾಟಕ6 hours ago

Kalaburagi News: ಮುಂದಿನ ವಾರ ರಾಜ್ಯಕ್ಕೆ ಬರ ಅಧ್ಯಯನ ತಂಡ : ಕೃಷಿ ಸಚಿವ ಚೆಲುವರಾಯಸ್ವಾಮಿ

PM Narenra Modi will stay advaita Ashram where Swami vivekand stayed in 1901
ದೇಶ6 hours ago

PM Narendra Modi: ಸ್ವಾಮಿ ವಿವೇಕಾನಂದರು ತಂಗಿದ್ದ ಆಶ್ರಮದಲ್ಲಿ ಪ್ರಧಾನಿ ಮೋದಿ ವಾಸ್ತವ್ಯ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ12 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ14 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ2 days ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌