Site icon Vistara News

Aero India 2023: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Approval for release of funds for various infrastructure projects in state cabinet meeting

ಬೆಂಗಳೂರು: ರಕ್ಷಣಾ ವಲಯದಲ್ಲಿ (Aero India 2023) ಬಂಧನ್‌ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧವಾಗಿದ್ದು, ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65 ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಏರೋ ಇಂಡಿಯಾ 2023ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ರಕ್ಷಣೆ ಮತ್ತು ಏರೋಸ್ಪೇಸ್ ವಲಯವು ಸ್ಥಾಪಿತ ಕ್ಷೇತ್ರವಾಗಿದ್ದು, ಇದರಲ್ಲಿ ಅತ್ಯಂತ ಪರಿಣಿತರು ಮಾತ್ರ ಕೆಲಸವನ್ನು ಸಂಪೂರ್ಣಗೊಳಿಸಬಲ್ಲರು. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದೊಂದಿಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ವಲಯವು ತೆರೆದುಕೊಂಡಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬೇಡಿಕೆಯ ಶೇ.80 ರಷ್ಟನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಆದರೆ, ಈಗ ಪ್ರಧಾನಿಗಳ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ದೇಶದಲ್ಲಿಯೇ ತಯಾರಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | Karnataka Budget: ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಬೇಕು ಪ್ರತ್ಯೇಕ ಅನುದಾನ: ಸಿಎಂಗೆ ಪ್ರೊ. ಎಂ.ಆರ್.‌ ದೊರೆಸ್ವಾಮಿ ಪತ್ರ

ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ

ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲುದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲುದಾಗಿದೆ ಎಂದು ಹೇಳಿದರು.

ರಕ್ಷಣಾ ಕ್ಷೇತ್ರದಲ್ಲಿ ವಿಫುಲ ಅವಕಾಶ

ಉತ್ಪಾದನಾ ವಲಯದಲ್ಲಿ ಡೊಮೈನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿವೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ್ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೇವೆ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿಯಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ | Payment aggregator : ರಿಲಯನ್ಸ್‌, ಜೊಮ್ಯಾಟೊ ಸೇರಿ 32 ಕಂಪನಿಗಳಿಗೆ ಪೇಮೆಂಟ್‌ ಅಗ್ರಿಗೇಟರ್‌ ಲೈಸೆನ್ಸ್ ವಿತರಣೆ

32 ಒಪ್ಪಂದಗಳಿಗೆ ರಾಜ್ಯ ಸಹಿ

ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ಸಂಸ್ಥೆಗಳು ಶೇ.65 ಪಾಲನ್ನು ಪೂರೈಸುತ್ತಿದೆ. 2900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿವೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಹೇಳಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ, ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

Exit mobile version