Aero India
Aero India 2023: ಏರೋ ಇಂಡಿಯಾ 2023 ಹೊಸ ಭಾರತದ ಸಾಮರ್ಥ್ಯಕ್ಕೆ ಸಾಕ್ಷಿ- ಪ್ರಧಾನಿ ಮೋದಿ ಬಣ್ಣನೆ
Aero India 2023: ಜಗತ್ತಿನ ಪ್ರತಿಷ್ಠಿತ ವೈಮಾನಿಕ ಪ್ರದರ್ಶನ ಎನಿಸಿಕೊಂಡಿರುವ ಏರೋ ಇಂಡಿಯಾ ಹಲುವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವೀಕ್ಷಿಸಿದರು.
ಬೆಂಗಳೂರು: ಜಗತ್ತಿನ ಪ್ರತಿಷ್ಠಿತ ವೈಮಾನಿಕ ಪ್ರದರ್ಶನವಾಗಿರುವ ಏರೋ ಇಂಡಿಯಾ-2023ಕ್ಕೆ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಬೆಂಗಳೂರಲ್ಲಿ ಆಯೋಜಿಸಲಾಗಿರುವ ಈ ಏರೋ ಇಂಡಿಯಾ ಕೇವಲ ಒಂದು ಶೋ ಅಲ್ಲ. ಇದು ಹೊಸ ಭಾರತದ ಹೊಸ ಶಕ್ತಿಯಾಗಿದೆ. ಈ ಹಿಂದೆ ಕೇವಲ ಇದನ್ನು ಸಾಂಪ್ರದಾಯಿಕ ರೀತಿಯಲ್ಲಿ ನೋಡಲಾಗುತ್ತಿತ್ತು. ಆದರೆ, ಕಳೆದ 8- 9 ವರ್ಷಗಳಿಂದ ಈ ವೈಮಾನಿಕ ಪ್ರದರ್ಶನಕ್ಕೆ ಹೊಸ ಅರ್ಥವನ್ನೇ ಕಲ್ಪಿಸಲಾಗಿದೆ. ಇದೊಂದು ಅವಕಾಶಗಳ ವೇದಿಕೆಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
1996ರಿಂದ ಬೆಂಗಳೂರಿನ ಯಲಹಂಕ ಏರ್‌ಫೋರ್ಸ್ ಸ್ಟೇಶನ್‌ನಲ್ಲಿ ಇದನ್ನು ಆಯೋಜಿಸಲಾಗುತ್ತಿದೆ. (Aero India 2023) ಹಲವಾರು ದೇಶಗಳ ರಕ್ಷಣಾ ಸಚಿವರುಗಳು ಕೂಡ ಶೋದಲ್ಲಿ ಭಾಗವಹಿಸಸಿದ್ದಾರೆ. ಈ ಸಲದ ಏರ್ ಶೋ 14ನೇ ಆವೃತ್ತಿಯಾಗಿದೆ. ಬಾನಂಗಳದಲ್ಲಿ ಯುದ್ಧ ವಿಮಾನಗಳು, ಸೇನಾಪಡೆಯ ಹೆಲಿಕಾಪ್ಟರ್‌ಗಳ ರೋಚಕ ಹಾರಾಟವನ್ನು ಪ್ರದರ್ಶನ ಜನರು ವೀಕ್ಷಿಸುತ್ತಿದ್ದಾರೆ. ಏರ್ ಶೋ ಸಂದರ್ಭ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ, ವಾಹನಗಳ ಪಾರ್ಕಿಂಗ್, ತ್ಯಾಜ್ಯ ನಿರ್ವಹಣೆ ಇತ್ಯಾದಿ ಸೌಕರ್ಯಗಳನ್ನು ಬಿಬಿಎಂಪಿ ಕಲ್ಪಿಸಲಿದೆ.
Aero India
Aero india 2023 : ರಕ್ಷಣಾ ಇಲಾಖೆಯಿಂದ 32 ಕಂಪನಿಗಳ ಜತೆ ಒಪ್ಪಂದ
ಏರೋ ಇಂಡಿಯಾದಲ್ಲಿ (Aero india 2023) ರಕ್ಷಣಾ ವಲಯಕ್ಕೆ ಅಗತ್ಯಕ್ಕೆ ತಕ್ಕ ಹಾಗೆ ಒಂಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ (Aero india 2023) 35 ಕಂಪನಿಗಳ ಜತೆ ರಕ್ಷಣಾ ಇಲಾಖೆಯು ಒಪ್ಪಂದ ಮಾಡಿಕೊಂಡಿದೆ. ಬಂಧನ್ ಕಾರ್ಯಕ್ರಮದಡಿಯಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. 2,930.98 ಕೋಟಿ ರೂಪಾಯಿ ಮೊತ್ತದ ಒಪ್ಪಂದ ನಡೆದಿದೆ. ಕಾರ್ಯಕ್ರಮದಲ್ಲಿ ಒಟ್ಟು 266 ಕಂಪನಿಗಳು ಪಾಲ್ಗೊಂಡಿದ್ದವು.
ಒಪ್ಪಂದಗಳಿಗೆ ಸಹಿ ಹಾಕಿದ ಕಂಪನಿಗಳು
ಬೆಲಾಟೆಕ್ಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್-630 ಕೋಟಿ, ಏಡಿನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್-500 ಕೋಟಿ, ಫಿಕ್ಸಲ್ ಸ್ಪೇಸ್ ಇಂಡಿಯಾ ಪ್ರೈ.ಲಿ-300 ಕೋಟಿ, ಡೈನಾಮೆಟಿಕ್ ಟೆಕ್ನಾಲಜೀಸ್-250 ಕೋಟಿ, ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ &ಏರೋಸ್ಪೇಸ್ ಟೆಕ್ನಾಲಜೀಸ್ , TESCOM-100 ಕೋಟಿ, ಡೆಲ್ಪ್ಟ್ (ಜೆ.ಕೆ.ಪೇಪರ್ ಲಿ.)-100 ಕೋಟಿ, ನೆಕ್ಸ್ಟ್ ಬಿಗ್ ಇನೋವೇಷನ್ ಲ್ಯಾಬ್ಸ್ ಲಿ.-100 ಕೋಟಿ, SASMOS HET ಟೆಕ್ನಾಲಜಿಸ್ ಲಿ.-75 ಕೋಟಿ, MS ವೇವ್ಸ್ ಮಷಿನ್-50 ಕೋಟಿ, ಭೂಮಿ ಎನ್ ಟೆಕ್ ಇಕ್ವಿಪ್ ಮೆಂಟ್ಸ್ ಪ್ರೈ.ಲಿ-50 ಕೋಟಿ, ಏರೋ ಪ್ಲಾಟಿನ್ ಟೆಕ್ನಾಲಜಿಸ್ ಪ್ರೈ.ಲಿ-30 ಕೋಟಿ, ಕಾಸ್ಟ್ ಕ್ರಾಪ್ಟ್-30 ಕೋಟಿ, ಡಕಂ ಏರೋಸ್ಪೇಸ್ ಟೆಕ್ನಾಲಜೀಸ್ ಪ್ರೈ.ಲಿ-25 ಕೋಟಿ, ಎಲ್ಡಾಸ್ ಟೆಕ್ನಾಲಜಿ-23 ಕೋಟಿ, ಟೆಕ್ಸಲ್ ಎಂಜಿನಿಯರ್ಸ್-20 ಕೋಟಿ.
ಇದನ್ನೂ ಓದಿ : Aero India 2023 : ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ, ನೂತನ F-35 ಯುದ್ಧ ವಿಮಾನ ಪ್ರದರ್ಶನ
ವೈಭವ್ ಎಂಟರ್ ಪ್ರೈಸಸ್-20 ಕೋಟಿ, ಹಿಮಾನ್ಸಿ ಥರ್ಮಲ್ ಸೊಲ್ಯೂಷನ್ಸ್-16.28 ಕೋಟಿ, ಎವಿಟಮ್ ಟೆಕ್ನಾಲಜೀಸ್ -16 ಕೋಟಿ, ಆರವ ಏರೋಸ್ಪೇಸ್-16 ಕೋಟಿ, SST ಕಟಿಂಗ್ ಟೂಲ್ಸ್-15 ಕೋಟಿ, ಆಲ್ಟೀಸ್ ಏರೋಸ್ಪೇಸ್ ಪ್ರೈ.ಲಿ-15 ಕೋಟಿ, ಉದಯ್ ಎಂಟರ್ ಪ್ರೈಸಸ್-15 ಕೋಟಿ, ಸೋಮಾ ಆಟೋಮೇಶನ್-12 ಕೋಟಿ, IIGP ವಾಲ್ವ್ ಟೆಕ್ನಾಲಜೀಸ್ ಪ್ರೈ.ಲಿ-12 ಕೋಟಿ, ಲವೀರಾ ಟೆಕ್ನಾಲಜಿ ಪ್ರೈ.ಲಿ-11 ಕೋಟಿ, ಗರುಡ ಏರೋಟೆಕ್-10 ಕೋಟಿ, G S ಗಿಯರ್ಸ್ ಪ್ರೈ.ಲಿ-8 ಕೋಟಿ, ಇನ್ಫಿನಿಟಿ ಏರೋಟೆಕ್-7 ಕೋಟಿ, ಡಟಾಕ್ಯೂ ಸರ್ವೀಸಸ್ ಪ್ರೈ.ಲಿ-2.70 ಕೋಟಿ, ಬುರ್ಜಿ ಏರೋಸ್ಪೇಸ್-2 ಕೋಟಿ, ಜನರಸ್ ಏರೋಸ್ಪೇಸ್ & ಇನ್ಪಾರ್ಮೇಶನ್ ಟೆಕ್ನಾಲಜಿ ಪ್ರೈ.ಲಿ-320 ಕೋಟಿ, ಏಸೋನಾಟೆಕ್ ಮ್ಯಾನಿಫ್ಯಾಕ್ಚರಿಂಗ್ ಪ್ರೈ.ಲಿ-150 ಕೋಟಿ.
Aero India
Aero India 2023: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ
Aero India 2023: ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ದೇಶೀಯ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು: ರಕ್ಷಣಾ ವಲಯದಲ್ಲಿ (Aero India 2023) ಬಂಧನ್ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧವಾಗಿದ್ದು, ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65 ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಏರೋ ಇಂಡಿಯಾ 2023ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.
ರಕ್ಷಣೆ ಮತ್ತು ಏರೋಸ್ಪೇಸ್ ವಲಯವು ಸ್ಥಾಪಿತ ಕ್ಷೇತ್ರವಾಗಿದ್ದು, ಇದರಲ್ಲಿ ಅತ್ಯಂತ ಪರಿಣಿತರು ಮಾತ್ರ ಕೆಲಸವನ್ನು ಸಂಪೂರ್ಣಗೊಳಿಸಬಲ್ಲರು. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದೊಂದಿಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ವಲಯವು ತೆರೆದುಕೊಂಡಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬೇಡಿಕೆಯ ಶೇ.80 ರಷ್ಟನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಆದರೆ, ಈಗ ಪ್ರಧಾನಿಗಳ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ದೇಶದಲ್ಲಿಯೇ ತಯಾರಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ | Karnataka Budget: ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಬೇಕು ಪ್ರತ್ಯೇಕ ಅನುದಾನ: ಸಿಎಂಗೆ ಪ್ರೊ. ಎಂ.ಆರ್. ದೊರೆಸ್ವಾಮಿ ಪತ್ರ
ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ
ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲುದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲುದಾಗಿದೆ ಎಂದು ಹೇಳಿದರು.
ರಕ್ಷಣಾ ಕ್ಷೇತ್ರದಲ್ಲಿ ವಿಫುಲ ಅವಕಾಶ
ಉತ್ಪಾದನಾ ವಲಯದಲ್ಲಿ ಡೊಮೈನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿವೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ್ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೇವೆ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿಯಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ | Payment aggregator : ರಿಲಯನ್ಸ್, ಜೊಮ್ಯಾಟೊ ಸೇರಿ 32 ಕಂಪನಿಗಳಿಗೆ ಪೇಮೆಂಟ್ ಅಗ್ರಿಗೇಟರ್ ಲೈಸೆನ್ಸ್ ವಿತರಣೆ
32 ಒಪ್ಪಂದಗಳಿಗೆ ರಾಜ್ಯ ಸಹಿ
ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ಸಂಸ್ಥೆಗಳು ಶೇ.65 ಪಾಲನ್ನು ಪೂರೈಸುತ್ತಿದೆ. 2900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿವೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಹೇಳಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ, ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.
Aero India
Aero India 2023: ಏರೋಸ್ಪೇಸ್ ವಲಯದಲ್ಲಿ ಕರ್ನಾಟಕ ನಂ.1 ಆಗಲು ಅರ್ಹ: ಸಿಎಂ ಬೊಮ್ಮಾಯಿ
ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.
ಬೆಂಗಳೂರು: ಏರೋಸ್ಪೇಸ್ (Aero India 2023) ವಲಯದಲ್ಲಿ ಲಂಡನ್ ಮತ್ತು ಸಿಂಗಾಪುರದ ನಂತರ ಕರ್ನಾಟಕ ರಾಜ್ಯವಿದ್ದು, ಕರ್ನಾಟಕ ನಂ.1 ಸ್ಥಾನಕ್ಕೇರಲು ಎಲ್ಲ ಅರ್ಹತೆ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾತನಾಡಿ, ಬೆಂಗಳೂರು ಸತತ 14 ಬಾರಿ ಏರ್ ಶೋ ಏರ್ಪಡಿಸಿದೆ. ದೇಶದ ಯಾವುದೇ ರಾಜ್ಯ ಇಷ್ಟೊಂದು ಏರ್ ಶೋ ಏರ್ಪಡಿಸಿಲ್ಲ. ಈ ಬಾರಿ ಅತಿ ದೊಡ್ಡ ಶೋ, ಹೆಚ್ಚಿನ ಉದ್ಯಮಿಗಳು ಭಾಗವಹಿಸುತ್ತಿದ್ದು, ಹೆಚ್ಚಿನ ಪ್ರದರ್ಶನಗಳು ನಡೆಯುತ್ತಿದೆ ಎಂದರು.
ಬೆಂಗಳೂರಿನಲ್ಲಿ ಅಪಾರ ಅವಕಾಶಗಳು ಇವೆ. ಎಂಜಿನಿಯರ್‌ಗಳು, ತಂತ್ರಜ್ಞರ ನಿರಂತರ ಶ್ರಮದಿಂದ ಏರ್ ಶೋ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಹಿರಿಯರು 1960ರಲ್ಲಿ ಇಲ್ಲಿ ಬಂಡವಾಳ ಹೂಡುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ತಂತ್ರಜ್ಞಾನ ಸಾಕಷ್ಟು ಬದಲಾವಣೆ ತಂದಿದೆ. ರಾಜ್ಯದ ಅಧಿಕಾರಿಗಳು ಯಶಸ್ಬಿಯಾಗಿ ಏರ್ ಶೋ ಆಯೋಜನೆ ಮಾಡಿದ್ದಾರೆ ಎಂದು ಅಭಿನಂದಿಸಿದರು.
ನಮ್ಮ ರಾಜ್ಯ ಯುವ ಪ್ರತಿಭಾವಂತ ಉದ್ಯಮಿಗಳು, ತಂತ್ರಜ್ಞರು, ಉದ್ಯಮಗಳು ಬೆಳೆಯಲು ಕಾರಣರಾಗಿದ್ದಾರೆ. ಯುವ ಪ್ರತಿಭಾವಂತರು ಇರುವುದರಿಂದ ಏರೊ ಸ್ಪೇಸ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಏರೊಸ್ಪೇಸ್ ನೀತಿ ರಾಜ್ಯದಲ್ಲಿದ್ದು, ಸಣ್ಣ ಕೈಗಾರಿಕೆಗಳು ಹಾಗೂ ಬೃಹತ್ ಉದ್ಯಮಗಳಿಗೆ ಸೂಕ್ತ ಅವಕಾಶಗಳಿವೆ. ನಾವು ಶೇ.65 ರಷ್ಟು ರಕ್ಷಣಾ ಪರಿಕರ ಉತ್ಪಾದನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶೇ.70 ರಷ್ಟು ಉತ್ಪಾದನೆ ಮಾಡುತ್ತೇವೆ.
ಈಗಾಗಲೇ ಅನೇಕರು ಇಲ್ಲಿ ಬಂಡವಾಳ ಹೂಡಿದ್ದಾರೆ, ಇನ್ನು ಅನೇಕರು ಬಂಡವಾಳ ಹೂಡುವ ಇಚ್ಛೆ ಹೊಂದಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ | Sevalal Jayanthi: ಸಂತ ಸೇವಾಲಾಲ್ ಮಹಾಮಠ ಪ್ರತಿಷ್ಠಾನಕ್ಕೆ ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ
ಯುಎಸ್ ಕಾನ್ಸುಲೇಟ್ ರಾಯಭಾರಿ ಬೆಂಗಳೂರು ಏರೋ ಇಂಡಿಯಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಲ್ಲಿ ಉತ್ತಮ ಪರಿಸರ, ಆರ್ಥಿಕ ಪರಿಸ್ಥಿತಿಯಿದ್ದು, ನಮ್ಮ ಬೆಳವಣಿಗೆಯಲ್ಲಿ ನೀವು ಭಾಗಿದಾರರಾಗಿ ಎಂದು ಕರೆ ನೀಡಿದರು.
ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ ಹಾಜರಿದ್ದರು.
Aero India
Aero India 2023: ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಹೂಡಿಕೆದಾರರಿಗೆ ಸರ್ಕಾರ ಆಹ್ವಾನ
ಭಾರತದಲ್ಲಿ ರಕ್ಷಣಾ ವಲಯದ ಉದ್ದಿಮೆಗೆ ಸರ್ಕಾರ ಉತ್ತೇಜನ ಮುಂದುವರಿಸಲಿದೆ. ಇದು ದೇಶವನ್ನು ಸ್ವಾವಲಂಬಿಯಾಗಿಸುವುದಲ್ಲದೆ, ಉದ್ಯೋಗ ಸೃಷ್ಟಿಗೆ ಕೂಡ ಸಹಕಾರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Aero India 2023) ವಿವರಿಸಿದ್ದಾರೆ.
ಬೆಂಗಳೂರು: ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ತೆರೆಯುವಂತೆ ಜಾಗತಿಕ ಮಟ್ಟದ ಹೂಡಿಕೆದಾರರು, ಉದ್ಯಮಿಗಳು, ನಾನಾ ಉತ್ಪನ್ನಗಳ ಮೂಲ ಉತ್ಪಾದಕರಿಗೆ (Global original equipment manufactures) ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಹ್ವಾನಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ-ಇಂಡಿಯಾ ಏರ್ ಶೋದ (Aero India 2023) ನೇಪಥ್ಯದಲ್ಲಿ ಬಹು ರಾಷ್ಟ್ರೀಯ ಕಂಪನಿಗಳ ಸಿಇಒಗಳನ್ನು ಅವರು ಭೇಟಿಯಾದರು.
ಜಾಗತಿಕ ಉತ್ಪಾದಕರು ಭಾರತದಲ್ಲಿ ಜಂಟಿಯಾಗಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬಹುದು. ಇಲ್ಲಿಂದಲೇ ಜಗತ್ತಿಗೆ ರಫ್ತು ಮಾಡಬಹುದು ಎಂದು ಅವರು ಆಹ್ವಾನಿಸಿದರು. ಜನರಲ್ ಆಟೋಮಿಕ್ಸ್, ಬೋಯಿಂಗ್, ಎಂಬ್ರೇರ್, ರಾಫೆಲ್ ಅಡ್ವಾನ್ಸ್‌ಡ್ ಡಿಫೆನ್ಸ್ ಸಿಸ್ಟಮ್ಸ್ ಸೇರಿದಂತೆ ಹಲವಾರು ಕಂಪನಿಗಳ ಮುಖ್ಯಸ್ಥರು ಈ ಸಂದರ್ಭ ಸಭೆಯಲ್ಲಿ ಭಾಗವಹಿಸಿದ್ದರು.
ಉದ್ದಿಮೆ ಸ್ಥಾಪಿಸುವವರಿಗೆ ಭೂಮಿ, ಮೂಲಸೌಕರ್ಯಕ್ಕೆ ತಗಲುವ ವೆಚ್ಚ, ಸರ್ಕಾರದ ರೀತಿ-ನೀತಿ, ಉತ್ತೇಜನ, ಮಾನವ ಸಂಪನ್ಮೂಲದ ಲಭ್ಯತೆ, ದೇಶೀಯ ರಕ್ಷಣಾ ವಲಯದ ಮಾರುಕಟ್ಟೆಯ ವಿವರಗಳನ್ನು ಸಚಿವರು ನೀಡಿದರು.
ಭಾರತವು ರಕ್ಷಣಾ ವಲಯದ ಉತ್ಪಾದನೆಯನ್ನು ಉತ್ತೇಜಿಸುತ್ತೆ. ಭಾರತ ಈ ವಲಯದಲ್ಲಿ ಸ್ವಾವಲಂಬಿಯಾಗಲು ಹಾಗೂ ಉದ್ಯೋಗ ಸೃಷ್ಟಿಗೆ ಇದು ಮಹತ್ತರ ಪಾತ್ರ ವಹಿಸಲಿದೆ ಎಂದರು. ರಕ್ಷಣಾ ಉದ್ಯಮ ಕಾರಿಡಾರ್‌ಗಳ ಸ್ಥಾಪನೆಗೆ ಉತ್ತರಪ್ರದೇಶ ಮತ್ತು ತಮಿಳುನಾಡು ಸರ್ಕಾರಗಳು ಘೋಷಿಸಿರುವ ಇನ್ಸೆಂಟಿವ್‌ಗಳನ್ನೂ ಸಚಿವರು ಪ್ರಸ್ತಾಪಿಸಿದರು.
ಸ್ವದೇಶಿ ಎಲ್‌ಸಿಎ ಎಂಜಿನ್ ಉತ್ಪಾದನೆಗೆ ಸಿದ್ಧತೆ: ಭಾರತವು ಶೀಘ್ರದಲ್ಲಿಯೇ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ಎಂಜಿನ್‌ಗಳನ್ನು ತಯಾರಿಸಲಿದೆ ಎಂದು (light combat aircraft engine) ಡಿಆರ್ ಡಿಒ ಮುಖ್ಯಸ್ಥ ಸಮೀರ್ ಕಾಮತ್ ತಿಳಿಸಿದ್ದಾರೆ.
-
ವೈರಲ್ ನ್ಯೂಸ್15 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
ಸುವಚನ5 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ13 hours ago
Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ
-
ಕರ್ನಾಟಕ20 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
South Cinema17 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
-
ಬಾಲಿವುಡ್21 hours ago
Rashmika Mandanna: ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್ನಲ್ಲೇ ನಾಚಿ ನೀರಾದ ರಶ್ಮಿಕಾ!
-
ತಂತ್ರಜ್ಞಾನ17 hours ago
Apple Iphone : ಐಫೋನ್ ಬಳಕೆದಾರರೇ ಇಲ್ಲಿ ಕೇಳಿ; ನಿಮಗೊಂದು ಸೆಕ್ಯುರಿಟಿ ಅಲರ್ಟ್ ಕೊಟ್ಟಿದೆ ಕೇಂದ್ರ ಸರ್ಕಾರ
-
ದೇಶ12 hours ago
Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್