ಬೆಂಗಳೂರು: ಜಗತ್ತಿನ ಪ್ರತಿಷ್ಠಿತ ವೈಮಾನಿಕ ಪ್ರದರ್ಶನವಾಗಿರುವ ಏರೋ ಇಂಡಿಯಾ-2023ಕ್ಕೆ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಬೆಂಗಳೂರಲ್ಲಿ ಆಯೋಜಿಸಲಾಗಿರುವ ಈ ಏರೋ ಇಂಡಿಯಾ ಕೇವಲ ಒಂದು ಶೋ ಅಲ್ಲ. ಇದು ಹೊಸ ಭಾರತದ ಹೊಸ ಶಕ್ತಿಯಾಗಿದೆ. ಈ ಹಿಂದೆ ಕೇವಲ ಇದನ್ನು ಸಾಂಪ್ರದಾಯಿಕ ರೀತಿಯಲ್ಲಿ ನೋಡಲಾಗುತ್ತಿತ್ತು. ಆದರೆ, ಕಳೆದ 8- 9 ವರ್ಷಗಳಿಂದ ಈ ವೈಮಾನಿಕ ಪ್ರದರ್ಶನಕ್ಕೆ ಹೊಸ ಅರ್ಥವನ್ನೇ ಕಲ್ಪಿಸಲಾಗಿದೆ. ಇದೊಂದು ಅವಕಾಶಗಳ ವೇದಿಕೆಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
1996ರಿಂದ ಬೆಂಗಳೂರಿನ ಯಲಹಂಕ ಏರ್‌ಫೋರ್ಸ್ ಸ್ಟೇಶನ್‌ನಲ್ಲಿ ಇದನ್ನು ಆಯೋಜಿಸಲಾಗುತ್ತಿದೆ. (Aero India 2023) ಹಲವಾರು ದೇಶಗಳ ರಕ್ಷಣಾ ಸಚಿವರುಗಳು ಕೂಡ ಶೋದಲ್ಲಿ ಭಾಗವಹಿಸಸಿದ್ದಾರೆ. ಈ ಸಲದ ಏರ್ ಶೋ 14ನೇ ಆವೃತ್ತಿಯಾಗಿದೆ. ಬಾನಂಗಳದಲ್ಲಿ ಯುದ್ಧ ವಿಮಾನಗಳು, ಸೇನಾಪಡೆಯ ಹೆಲಿಕಾಪ್ಟರ್‌ಗಳ ರೋಚಕ ಹಾರಾಟವನ್ನು ಪ್ರದರ್ಶನ ಜನರು ವೀಕ್ಷಿಸುತ್ತಿದ್ದಾರೆ. ಏರ್ ಶೋ ಸಂದರ್ಭ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ, ವಾಹನಗಳ ಪಾರ್ಕಿಂಗ್, ತ್ಯಾಜ್ಯ ನಿರ್ವಹಣೆ ಇತ್ಯಾದಿ ಸೌಕರ್ಯಗಳನ್ನು ಬಿಬಿಎಂಪಿ ಕಲ್ಪಿಸಲಿದೆ.
ತೇಜಸ್ ಯುದ್ಧ ವಿಮಾನಗಳ ಪ್ರದರ್ಶನ ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ
ಬಾನಾಂಗಳದಲ್ಲಿ ಯುದ್ಧ ವಿಮಾನಗಳ ಚಿತ್ತಾರ ಶುರುವಾಗಿದೆ
ಬೆಂಗಳೂರಿನ ಯಲಂಹಕದಲ್ಲಿ ನಡೆಯುತ್ತಿರವ ಏರೋ ಇಂಡಿಯಾ 2023ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ
ಹೆಲಿಕಾಪ್ಟರ್‌ಗಳ ಮೂಲಕ ಪ್ರಧಾನಿಗೆ ಸ್ವಾಗತ ಕೋರಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ