ಬೆಂಗಳೂರು: ಜಗತ್ತಿನ ಪ್ರತಿಷ್ಠಿತ ವೈಮಾನಿಕ ಪ್ರದರ್ಶನವಾಗಿರುವ ಏರೋ ಇಂಡಿಯಾ-2023ಕ್ಕೆ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಬೆಂಗಳೂರಲ್ಲಿ ಆಯೋಜಿಸಲಾಗಿರುವ ಈ ಏರೋ ಇಂಡಿಯಾ ಕೇವಲ ಒಂದು ಶೋ ಅಲ್ಲ. ಇದು ಹೊಸ ಭಾರತದ ಹೊಸ ಶಕ್ತಿಯಾಗಿದೆ. ಈ ಹಿಂದೆ ಕೇವಲ ಇದನ್ನು ಸಾಂಪ್ರದಾಯಿಕ ರೀತಿಯಲ್ಲಿ ನೋಡಲಾಗುತ್ತಿತ್ತು. ಆದರೆ, ಕಳೆದ 8- 9 ವರ್ಷಗಳಿಂದ ಈ ವೈಮಾನಿಕ ಪ್ರದರ್ಶನಕ್ಕೆ ಹೊಸ ಅರ್ಥವನ್ನೇ ಕಲ್ಪಿಸಲಾಗಿದೆ. ಇದೊಂದು ಅವಕಾಶಗಳ ವೇದಿಕೆಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
1996ರಿಂದ ಬೆಂಗಳೂರಿನ ಯಲಹಂಕ ಏರ್ಫೋರ್ಸ್ ಸ್ಟೇಶನ್ನಲ್ಲಿ ಇದನ್ನು ಆಯೋಜಿಸಲಾಗುತ್ತಿದೆ. (Aero India 2023) ಹಲವಾರು ದೇಶಗಳ ರಕ್ಷಣಾ ಸಚಿವರುಗಳು ಕೂಡ ಶೋದಲ್ಲಿ ಭಾಗವಹಿಸಸಿದ್ದಾರೆ. ಈ ಸಲದ ಏರ್ ಶೋ 14ನೇ ಆವೃತ್ತಿಯಾಗಿದೆ. ಬಾನಂಗಳದಲ್ಲಿ ಯುದ್ಧ ವಿಮಾನಗಳು, ಸೇನಾಪಡೆಯ ಹೆಲಿಕಾಪ್ಟರ್ಗಳ ರೋಚಕ ಹಾರಾಟವನ್ನು ಪ್ರದರ್ಶನ ಜನರು ವೀಕ್ಷಿಸುತ್ತಿದ್ದಾರೆ. ಏರ್ ಶೋ ಸಂದರ್ಭ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ, ವಾಹನಗಳ ಪಾರ್ಕಿಂಗ್, ತ್ಯಾಜ್ಯ ನಿರ್ವಹಣೆ ಇತ್ಯಾದಿ ಸೌಕರ್ಯಗಳನ್ನು ಬಿಬಿಎಂಪಿ ಕಲ್ಪಿಸಲಿದೆ.
ಬೆಂಗಳೂರಿನ ಯಲಹಂಕದ ವಾಯು ನೆಲೆಯಲ್ಲಿ ನಡೆಯಲಿರುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲು ನಗರದ ಮೇಖ್ರಿ ಸರ್ಕಲ್ ಹೆಡ್ ಕ್ವಾರ್ಟರ್ಸ್ ಕಮಾಂಡ್ ಸೆಂಟರ್ ನಿಂದ Mi 17 ಹೆಲಿಕಾಪ್ಟರ್ ನಲ್ಲಿ ಮೋದಿ ಅವರು ತೆರಳಿದ್ದಾರೆ.