Aero India 2023 : ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಸರತ್ತು; ಸುಖೋಯ್, ಪ್ರಚಂಡ, ತೇಜಸ್‌ ಸೃಷ್ಟಿಸಿದ ಚೆಲುವಿನ ಚಿತ್ತಾರ Vistara News
Connect with us

Aero India

Aero India 2023 : ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಸರತ್ತು; ಸುಖೋಯ್, ಪ್ರಚಂಡ, ತೇಜಸ್‌ ಸೃಷ್ಟಿಸಿದ ಚೆಲುವಿನ ಚಿತ್ತಾರ

ಬೆಂಗಳೂರಿನಲ್ಲಿ ಆರಂಭಗೊಂಡಿರುವ ಏರೋ ಇಂಡಿಯಾ 2023ಯಲ್ಲಿ ದೇಶದ ವಾಯುಪಡೆಯ ರಕ್ಷಣಾ ಶಕ್ತಿಯ ಪ್ರದರ್ಶನ ನಡೆಯಿತು. ಲೋಹದ ಹಕ್ಕಿಗಳ ಪ್ರದರ್ಶನ ಕಣ್ಮನ ಸೆಳೆಯಿತು.

VISTARANEWS.COM


on

Sooryakiran
ಬಾನಿನಲ್ಲಿ ತೆರೆದುಕೊಂಡ ಸೂರ್ಯಕಿರಣ ವೈಭವ
Koo

ಬೆಂಗಳೂರು: ಯಲಹಂಕದ ಏರ್‌ಫೋರ್ಸ್‌ ಸ್ಟೇಶನ್‌ನಲ್ಲಿ ಭಾನುವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆಗೊಂಡ ಏರೋ ಇಂಡಿಯಾ- 2023 ವೈಮಾನಿಕ ಪ್ರದರ್ಶನದಲ್ಲಿ ಸುಖೋಯ್‌ ೩೫, ಲಘು ಯುದ್ಧ ಹೆಲಿಕಾಪ್ಟರ್‌ ಪ್ರಚಂಡ, ಸೂರ್ಯಕಿರಣ್‌, ತೇಜಸ್‌, ಲಘು ಬಹೂಪಯೋಗಿ ಎಲ್‌ಯುಎಚ್‌ಗಳು ಆಗಸದಲ್ಲಿ ಆಕರ್ಷಕ ಕಸರತ್ತು ನಡೆಸಿ ರಂಜಿಸಿದವು.

ಪ್ರಧಾನಿ ಮೋದಿ ಅವರು ಸಾಹಸಿಕ ಪ್ರದರ್ಶನಗಳನ್ನು ವೀಕ್ಷಿಸಿ ಸಂಭ್ರಮಿಸಿದರು.

ಲಘು ಬಹೂಪಯೋಗಿ ಹೆಲಿಕಾಪ್ಟರ್‌

ಏನೇನು ಸ್ಪೆಷಲ್‌ ಪ್ರದರ್ಶನ?
ವಾಯುದಳದ ಮೂರು ಕಿರಣ್‌ ಎಂಕೆ-2 ಏರ್‌ಕ್ರಾಫ್ಟ್‌ಗಳು ಆಗಸದಲ್ಲಿ ಹಾರಾಡುತ್ತ ರಾಷ್ಟ್ರಧ್ವಜದ ತ್ರಿವರ್ಣ ರಂಗನ್ನು ರಚಿಸಲಿವೆ. ತ್ರಿವರ್ಣ ಧ್ವಜವನ್ನು ಹೊತ್ತ ಮೂರು ಮಿಗ್‌ 17 ವಿಮಾನಗಳು ಧ್ವಜ ರಚನೆಯನ್ನು ಪ್ರದರ್ಶಿಸಿದವು.

ಸೂರ್ಯಕಿರಣ್‌ ಮತ್ತು ತೇಜಸ್

ಐದು ಹೆಲಿಕಾಪ್ಟರ್‌ಗಳ ಮೂರು ತಂಡಗಳು (ಒಟ್ಟು 15 ಹೆಲಿಕಾಪ್ಟರ್‌ಗಳು) ವೀಕ್ಷಕರ ಎಡದಿಂದ ಬಲಕ್ಕೆ ಹಾಗೂ ಬಲದಿಂದ ಎಡಕ್ಕೆ ಹಾರಾಡಿ ವಿಶಿಷ್ಟ ರಚನೆಗಳನ್ನು ರೂಪಿಸಿದವು. ಇದರಲ್ಲಿ ಭಾಗವಹಿಸುವ ಹೆಲಿಕಾಪ್ಟರ್‌ಗಳು ಭೀಮ್‌, ದಕ್ಷ್‌, ರುದ್ರ, ಪ್ರಚಂಡ ಹಾಗೂ ರುದ್ರ.

ಸೂರ್ಯಕಿರಣ್‌ ವೈಭವ

ಒಂದು LCA SPT ಏರ್‌ಕ್ರಾಫ್ಟ್‌, ಎರಡು ಹಿಂದೂಸ್ತಾನ್‌ ಟರ್ಬೋ ಟ್ರೇನರ್‌, ಎರಡು ಇಂಟರ್‌ಮೀಡಿಯೆಟ್‌ ಜೆಟ್‌ ಟ್ರೇನರ್‌, ಒಂದು HAWK ಹಾಗೂ ಒಂದು ಹಿಂದೂಸ್ತಾನ್‌- 228ಗಳು ಸೇರಿ ʼಗುರುಕುಲʼ ರಚನೆಯನ್ನು ಪ್ರದರ್ಶಿಸಿದವು.

ಸುಖೋಯ್‌ ಹಾರಾಟದ ಚೆಲುವು

EMBRAER-145 ಏರ್‌ಕ್ರಾಫ್ಟ್‌, ಎರಡು ಸುಖೋಯ್‌-30 ಹಾಗೂ ಎರಡು ಮಿಗ್‌-29ಗಳು ಸೇರಿ ʻನೇತ್ರʼ ರಚನೆಯನ್ನು ಪ್ರದರ್ಶಿಸಿದವು. ಒಂದು ಮಿಗ್‌, ಎರಡು ಜಾಗುವಾರ್, ಎರಡು ಮಿರಾಜ್‌, ಎರಡು ರಫೇಲ್‌ ವಿಮಾನಗಳು ಸೇರಿ ʼಅರ್ಜುನʼ ರಚನೆಯನ್ನು ತೋರಿಸಿದವು.

ಬಾನಲ್ಲಿ ತೆರೆದುಕೊಂಡ ಪ್ರಚಂಡ ಶಕ್ತಿ

ಭಾರತೀಯ ತಂತ್ರಜ್ಞಾನದ ಹಗುರ ಯುದ್ಧ ವಿಮಾನ ತೇಜಸ್‌ನ 9 ಏರ್‌ಕ್ರಾಫ್ಟ್‌ಗಳು ʼತೇಜಸ್‌ʼ ಸಂರಚನೆಯನ್ನು ತೋರಿಸಿದವು. ಭಾರತೀಯ ವೈಮಾನಿಕ ನೌಕಾದಳದ ವಿಮಾನ P8i- ಪೋಸಿಡಾನ್‌ ಹಾಗೂ ಎರಡು ಹಗುರ ಯುದ್ಧ ವಿಮಾನಗಳು ʼವರುಣʼ ರಚನೆಯನ್ನು ಕಾಣಿಸಿದವು. ಮೂರು ಸುಖೋಯ್‌-30 ವಿಮಾನಗಳು ʼತ್ರಿಶೂಲʼ ರಚನೆಯನ್ನು ತೋರಿಸಿದವು.

ಇದನ್ನೂ ಓದಿ : Aero India 2023: ಭಾರತದ ರಕ್ಷಣಾ ರಫ್ತು 2024ರಲ್ಲಿ 500 ಕೋಟಿ ಡಾಲರ್‌ ಗುರಿ: ಹೂಡಿಕೆದಾರರಿಗೆ ಸುವರ್ಣಾವಕಾಶ ಎಂದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

Aero India

Aero india 2023 : ರಕ್ಷಣಾ ಇಲಾಖೆಯಿಂದ 32 ಕಂಪನಿಗಳ ಜತೆ ಒಪ್ಪಂದ

ಏರೋ ಇಂಡಿಯಾದಲ್ಲಿ (Aero india 2023) ರಕ್ಷಣಾ ವಲಯಕ್ಕೆ ಅಗತ್ಯಕ್ಕೆ ತಕ್ಕ ಹಾಗೆ ಒಂಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.

VISTARANEWS.COM


on

Aero India
Koo

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ (Aero india 2023) 35 ಕಂಪನಿಗಳ ಜತೆ ರಕ್ಷಣಾ ಇಲಾಖೆಯು ಒಪ್ಪಂದ ಮಾಡಿಕೊಂಡಿದೆ. ಬಂಧನ್ ಕಾರ್ಯಕ್ರಮದಡಿಯಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. 2,930.98 ಕೋಟಿ ರೂಪಾಯಿ ಮೊತ್ತದ ಒಪ್ಪಂದ ನಡೆದಿದೆ. ಕಾರ್ಯಕ್ರಮದಲ್ಲಿ ಒಟ್ಟು 266 ಕಂಪನಿಗಳು ಪಾಲ್ಗೊಂಡಿದ್ದವು.

ಒಪ್ಪಂದಗಳಿಗೆ ಸಹಿ ಹಾಕಿದ ಕಂಪನಿಗಳು

ಬೆಲಾಟೆಕ್ಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್-630 ಕೋಟಿ, ಏಡಿನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್-500 ಕೋಟಿ, ಫಿಕ್ಸಲ್ ಸ್ಪೇಸ್ ಇಂಡಿಯಾ ಪ್ರೈ.ಲಿ-300 ಕೋಟಿ, ಡೈನಾಮೆಟಿಕ್ ಟೆಕ್ನಾಲಜೀಸ್-250 ಕೋಟಿ, ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ &ಏರೋಸ್ಪೇಸ್ ಟೆಕ್ನಾಲಜೀಸ್ , TESCOM-100 ಕೋಟಿ, ಡೆಲ್ಪ್ಟ್ (ಜೆ.ಕೆ.ಪೇಪರ್ ಲಿ.)-100 ಕೋಟಿ, ನೆಕ್ಸ್ಟ್ ಬಿಗ್ ಇನೋವೇಷನ್ ಲ್ಯಾಬ್ಸ್ ಲಿ.-100 ಕೋಟಿ, SASMOS HET ಟೆಕ್ನಾಲಜಿಸ್ ಲಿ.-75 ಕೋಟಿ, MS ವೇವ್ಸ್ ಮಷಿನ್-50 ಕೋಟಿ, ಭೂಮಿ ಎನ್ ಟೆಕ್ ಇಕ್ವಿಪ್ ಮೆಂಟ್ಸ್ ಪ್ರೈ.ಲಿ-50 ಕೋಟಿ, ಏರೋ ಪ್ಲಾಟಿನ್ ಟೆಕ್ನಾಲಜಿಸ್ ಪ್ರೈ.ಲಿ-30 ಕೋಟಿ, ಕಾಸ್ಟ್ ಕ್ರಾಪ್ಟ್-30 ಕೋಟಿ, ಡಕಂ ಏರೋಸ್ಪೇಸ್ ಟೆಕ್ನಾಲಜೀಸ್ ಪ್ರೈ.ಲಿ-25 ಕೋಟಿ, ಎಲ್ಡಾಸ್ ಟೆಕ್ನಾಲಜಿ-23 ಕೋಟಿ, ಟೆಕ್ಸಲ್ ಎಂಜಿನಿಯರ್ಸ್-20 ಕೋಟಿ.

ಇದನ್ನೂ ಓದಿ : Aero India 2023 : ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ, ನೂತನ F-35 ಯುದ್ಧ ವಿಮಾನ ಪ್ರದರ್ಶನ

ವೈಭವ್ ಎಂಟರ್ ಪ್ರೈಸಸ್-20 ಕೋಟಿ, ಹಿಮಾನ್ಸಿ ಥರ್ಮಲ್ ಸೊಲ್ಯೂಷನ್ಸ್-16.28 ಕೋಟಿ, ಎವಿಟಮ್ ಟೆಕ್ನಾಲಜೀಸ್ -16 ಕೋಟಿ, ಆರವ ಏರೋಸ್ಪೇಸ್-16 ಕೋಟಿ, SST ಕಟಿಂಗ್ ಟೂಲ್ಸ್-15 ಕೋಟಿ, ಆಲ್ಟೀಸ್ ಏರೋಸ್ಪೇಸ್ ಪ್ರೈ.ಲಿ-15 ಕೋಟಿ, ಉದಯ್ ಎಂಟರ್ ಪ್ರೈಸಸ್-15 ಕೋಟಿ, ಸೋಮಾ ಆಟೋಮೇಶನ್-12 ಕೋಟಿ, IIGP ವಾಲ್ವ್ ಟೆಕ್ನಾಲಜೀಸ್ ಪ್ರೈ.ಲಿ-12 ಕೋಟಿ, ಲವೀರಾ ಟೆಕ್ನಾಲಜಿ ಪ್ರೈ.ಲಿ-11 ಕೋಟಿ, ಗರುಡ ಏರೋಟೆಕ್-10 ಕೋಟಿ, G S ಗಿಯರ್ಸ್ ಪ್ರೈ.ಲಿ-8 ಕೋಟಿ, ಇನ್ಫಿನಿಟಿ ಏರೋಟೆಕ್-7 ಕೋಟಿ, ಡಟಾಕ್ಯೂ ಸರ್ವೀಸಸ್ ಪ್ರೈ.ಲಿ-2.70 ಕೋಟಿ, ಬುರ್ಜಿ ಏರೋಸ್ಪೇಸ್-2 ಕೋಟಿ, ಜನರಸ್ ಏರೋಸ್ಪೇಸ್ & ಇನ್ಪಾರ್ಮೇಶನ್ ಟೆಕ್ನಾಲಜಿ ಪ್ರೈ.ಲಿ-320 ಕೋಟಿ, ಏಸೋನಾಟೆಕ್ ಮ್ಯಾನಿಫ್ಯಾಕ್ಚರಿಂಗ್ ಪ್ರೈ.ಲಿ-150 ಕೋಟಿ.

Continue Reading

Aero India

Aero India 2023: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Aero India 2023: ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ದೇಶೀಯ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Edited by

Approval for release of funds for various infrastructure projects in state cabinet meeting
Koo

ಬೆಂಗಳೂರು: ರಕ್ಷಣಾ ವಲಯದಲ್ಲಿ (Aero India 2023) ಬಂಧನ್‌ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧವಾಗಿದ್ದು, ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65 ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಏರೋ ಇಂಡಿಯಾ 2023ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ರಕ್ಷಣೆ ಮತ್ತು ಏರೋಸ್ಪೇಸ್ ವಲಯವು ಸ್ಥಾಪಿತ ಕ್ಷೇತ್ರವಾಗಿದ್ದು, ಇದರಲ್ಲಿ ಅತ್ಯಂತ ಪರಿಣಿತರು ಮಾತ್ರ ಕೆಲಸವನ್ನು ಸಂಪೂರ್ಣಗೊಳಿಸಬಲ್ಲರು. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದೊಂದಿಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ವಲಯವು ತೆರೆದುಕೊಂಡಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬೇಡಿಕೆಯ ಶೇ.80 ರಷ್ಟನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಆದರೆ, ಈಗ ಪ್ರಧಾನಿಗಳ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ದೇಶದಲ್ಲಿಯೇ ತಯಾರಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | Karnataka Budget: ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಬೇಕು ಪ್ರತ್ಯೇಕ ಅನುದಾನ: ಸಿಎಂಗೆ ಪ್ರೊ. ಎಂ.ಆರ್.‌ ದೊರೆಸ್ವಾಮಿ ಪತ್ರ

ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ

ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲುದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲುದಾಗಿದೆ ಎಂದು ಹೇಳಿದರು.

ರಕ್ಷಣಾ ಕ್ಷೇತ್ರದಲ್ಲಿ ವಿಫುಲ ಅವಕಾಶ

ಉತ್ಪಾದನಾ ವಲಯದಲ್ಲಿ ಡೊಮೈನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿವೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ್ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೇವೆ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿಯಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ | Payment aggregator : ರಿಲಯನ್ಸ್‌, ಜೊಮ್ಯಾಟೊ ಸೇರಿ 32 ಕಂಪನಿಗಳಿಗೆ ಪೇಮೆಂಟ್‌ ಅಗ್ರಿಗೇಟರ್‌ ಲೈಸೆನ್ಸ್ ವಿತರಣೆ

32 ಒಪ್ಪಂದಗಳಿಗೆ ರಾಜ್ಯ ಸಹಿ

ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ಸಂಸ್ಥೆಗಳು ಶೇ.65 ಪಾಲನ್ನು ಪೂರೈಸುತ್ತಿದೆ. 2900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿವೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಹೇಳಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ, ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

Continue Reading

Aero India

Aero India 2023: ಏರೋಸ್ಪೇಸ್ ವಲಯದಲ್ಲಿ ಕರ್ನಾಟಕ ನಂ.1 ಆಗಲು ಅರ್ಹ: ಸಿಎಂ ಬೊಮ್ಮಾಯಿ

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.

VISTARANEWS.COM


on

Edited by

CM Basavaraj Bommai says Karnataka deserves to be no.1 in aerospace sector:
Koo

ಬೆಂಗಳೂರು: ಏರೋಸ್ಪೇಸ್ (Aero India 2023) ವಲಯದಲ್ಲಿ ಲಂಡನ್ ಮತ್ತು ಸಿಂಗಾಪುರದ ನಂತರ ಕರ್ನಾಟಕ ರಾಜ್ಯವಿದ್ದು, ಕರ್ನಾಟಕ ನಂ.1 ಸ್ಥಾನಕ್ಕೇರಲು ಎಲ್ಲ ಅರ್ಹತೆ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾತನಾಡಿ, ಬೆಂಗಳೂರು ಸತತ 14 ಬಾರಿ ಏರ್ ಶೋ ಏರ್ಪಡಿಸಿದೆ. ದೇಶದ ಯಾವುದೇ ರಾಜ್ಯ ಇಷ್ಟೊಂದು ಏರ್ ಶೋ ಏರ್ಪಡಿಸಿಲ್ಲ. ಈ ಬಾರಿ ಅತಿ ದೊಡ್ಡ ಶೋ, ಹೆಚ್ಚಿನ ಉದ್ಯಮಿಗಳು ಭಾಗವಹಿಸುತ್ತಿದ್ದು, ಹೆಚ್ಚಿನ ಪ್ರದರ್ಶನಗಳು ನಡೆಯುತ್ತಿದೆ ಎಂದರು.

ಬೆಂಗಳೂರಿನಲ್ಲಿ ಅಪಾರ ಅವಕಾಶಗಳು ಇವೆ. ಎಂಜಿನಿಯರ್‌ಗಳು, ತಂತ್ರಜ್ಞರ ನಿರಂತರ ಶ್ರಮದಿಂದ ಏರ್ ಶೋ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಹಿರಿಯರು 1960ರಲ್ಲಿ ಇಲ್ಲಿ ಬಂಡವಾಳ ಹೂಡುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ತಂತ್ರಜ್ಞಾನ ಸಾಕಷ್ಟು ಬದಲಾವಣೆ ತಂದಿದೆ. ರಾಜ್ಯದ ಅಧಿಕಾರಿಗಳು ಯಶಸ್ಬಿಯಾಗಿ ಏರ್ ಶೋ ಆಯೋಜನೆ ಮಾಡಿದ್ದಾರೆ ಎಂದು ಅಭಿನಂದಿಸಿದರು.‌

ನಮ್ಮ ರಾಜ್ಯ ಯುವ ಪ್ರತಿಭಾವಂತ ಉದ್ಯಮಿಗಳು, ತಂತ್ರಜ್ಞರು, ಉದ್ಯಮಗಳು ಬೆಳೆಯಲು ಕಾರಣರಾಗಿದ್ದಾರೆ. ಯುವ ಪ್ರತಿಭಾವಂತರು ಇರುವುದರಿಂದ ಏರೊ ಸ್ಪೇಸ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಏರೊಸ್ಪೇಸ್ ನೀತಿ ರಾಜ್ಯದಲ್ಲಿದ್ದು, ಸಣ್ಣ ಕೈಗಾರಿಕೆಗಳು ಹಾಗೂ ಬೃಹತ್ ಉದ್ಯಮಗಳಿಗೆ ಸೂಕ್ತ ಅವಕಾಶಗಳಿವೆ. ನಾವು ಶೇ.65 ರಷ್ಟು ರಕ್ಷಣಾ ಪರಿಕರ ಉತ್ಪಾದನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶೇ.70 ರಷ್ಟು ಉತ್ಪಾದನೆ ಮಾಡುತ್ತೇವೆ.
ಈಗಾಗಲೇ ಅನೇಕರು ಇಲ್ಲಿ ಬಂಡವಾಳ ಹೂಡಿದ್ದಾರೆ, ಇನ್ನು ಅನೇಕರು ಬಂಡವಾಳ ಹೂಡುವ ಇಚ್ಛೆ ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Sevalal Jayanthi: ಸಂತ ಸೇವಾಲಾಲ್‌ ಮಹಾಮಠ ಪ್ರತಿಷ್ಠಾನಕ್ಕೆ ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

ಯುಎಸ್ ಕಾನ್ಸುಲೇಟ್ ರಾಯಭಾರಿ ಬೆಂಗಳೂರು ಏರೋ ಇಂಡಿಯಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಲ್ಲಿ ಉತ್ತಮ ಪರಿಸರ, ಆರ್ಥಿಕ ಪರಿಸ್ಥಿತಿಯಿದ್ದು, ನಮ್ಮ ಬೆಳವಣಿಗೆಯಲ್ಲಿ ನೀವು ಭಾಗಿದಾರರಾಗಿ ಎಂದು ಕರೆ ನೀಡಿದರು.

ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ ಹಾಜರಿದ್ದರು.

Continue Reading

Aero India

Aero India 2023: ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಹೂಡಿಕೆದಾರರಿಗೆ ಸರ್ಕಾರ ಆಹ್ವಾನ

ಭಾರತದಲ್ಲಿ ರಕ್ಷಣಾ ವಲಯದ ಉದ್ದಿಮೆಗೆ ಸರ್ಕಾರ ಉತ್ತೇಜನ ಮುಂದುವರಿಸಲಿದೆ. ಇದು ದೇಶವನ್ನು ಸ್ವಾವಲಂಬಿಯಾಗಿಸುವುದಲ್ಲದೆ, ಉದ್ಯೋಗ ಸೃಷ್ಟಿಗೆ ಕೂಡ ಸಹಕಾರಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Aero India 2023) ವಿವರಿಸಿದ್ದಾರೆ.

VISTARANEWS.COM


on

Edited by

rajanath singh
Koo

ಬೆಂಗಳೂರು: ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ತೆರೆಯುವಂತೆ ಜಾಗತಿಕ ಮಟ್ಟದ ಹೂಡಿಕೆದಾರರು, ಉದ್ಯಮಿಗಳು, ನಾನಾ ಉತ್ಪನ್ನಗಳ ಮೂಲ ಉತ್ಪಾದಕರಿಗೆ (Global original equipment manufactures) ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಹ್ವಾನಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ-ಇಂಡಿಯಾ ಏರ್‌ ಶೋದ (Aero India 2023) ನೇಪಥ್ಯದಲ್ಲಿ ಬಹು ರಾಷ್ಟ್ರೀಯ ಕಂಪನಿಗಳ ಸಿಇಒಗಳನ್ನು ಅವರು ಭೇಟಿಯಾದರು.

ಜಾಗತಿಕ ಉತ್ಪಾದಕರು ಭಾರತದಲ್ಲಿ ಜಂಟಿಯಾಗಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬಹುದು. ಇಲ್ಲಿಂದಲೇ ಜಗತ್ತಿಗೆ ರಫ್ತು ಮಾಡಬಹುದು ಎಂದು ಅವರು ಆಹ್ವಾನಿಸಿದರು. ಜನರಲ್‌ ಆಟೋಮಿಕ್ಸ್‌, ಬೋಯಿಂಗ್‌, ಎಂಬ್ರೇರ್‌, ರಾಫೆಲ್‌ ಅಡ್ವಾನ್ಸ್‌ಡ್‌ ಡಿಫೆನ್ಸ್‌ ಸಿಸ್ಟಮ್ಸ್‌ ಸೇರಿದಂತೆ ಹಲವಾರು ಕಂಪನಿಗಳ ಮುಖ್ಯಸ್ಥರು ಈ ಸಂದರ್ಭ ಸಭೆಯಲ್ಲಿ ಭಾಗವಹಿಸಿದ್ದರು.

ಉದ್ದಿಮೆ ಸ್ಥಾಪಿಸುವವರಿಗೆ ಭೂಮಿ, ಮೂಲಸೌಕರ್ಯಕ್ಕೆ ತಗಲುವ ವೆಚ್ಚ, ಸರ್ಕಾರದ ರೀತಿ-ನೀತಿ, ಉತ್ತೇಜನ, ಮಾನವ ಸಂಪನ್ಮೂಲದ ಲಭ್ಯತೆ, ದೇಶೀಯ ರಕ್ಷಣಾ ವಲಯದ ಮಾರುಕಟ್ಟೆಯ ವಿವರಗಳನ್ನು ಸಚಿವರು ನೀಡಿದರು.

ಭಾರತವು ರಕ್ಷಣಾ ವಲಯದ ಉತ್ಪಾದನೆಯನ್ನು ಉತ್ತೇಜಿಸುತ್ತೆ. ಭಾರತ ಈ ವಲಯದಲ್ಲಿ ಸ್ವಾವಲಂಬಿಯಾಗಲು ಹಾಗೂ ಉದ್ಯೋಗ ಸೃಷ್ಟಿಗೆ ಇದು ಮಹತ್ತರ ಪಾತ್ರ ವಹಿಸಲಿದೆ ಎಂದರು. ರಕ್ಷಣಾ ಉದ್ಯಮ ಕಾರಿಡಾರ್‌ಗಳ ಸ್ಥಾಪನೆಗೆ ಉತ್ತರಪ್ರದೇಶ ಮತ್ತು ತಮಿಳುನಾಡು ಸರ್ಕಾರಗಳು ಘೋಷಿಸಿರುವ ಇನ್ಸೆಂಟಿವ್‌ಗಳನ್ನೂ ಸಚಿವರು ಪ್ರಸ್ತಾಪಿಸಿದರು.

ಸ್ವದೇಶಿ ಎಲ್‌ಸಿಎ ಎಂಜಿನ್‌ ಉತ್ಪಾದನೆಗೆ ಸಿದ್ಧತೆ: ಭಾರತವು ಶೀಘ್ರದಲ್ಲಿಯೇ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ಎಂಜಿನ್‌ಗಳನ್ನು ತಯಾರಿಸಲಿದೆ ಎಂದು (light combat aircraft engine) ಡಿಆರ್‌ ಡಿಒ ಮುಖ್ಯಸ್ಥ ಸಮೀರ್ ಕಾಮತ್‌ ತಿಳಿಸಿದ್ದಾರೆ.

Continue Reading
Advertisement
Sudha Murty
ಕರ್ನಾಟಕ9 mins ago

Sudha Murty: ಅಮೆರಿಕದಲ್ಲಿ ಕಾರ್ಯಕ್ರಮ ಎಂದು ಸುಧಾ ಮೂರ್ತಿ ಹೆಸರಲ್ಲಿ ವಂಚನೆ; ಇಬ್ಬರ ವಿರುದ್ಧ ಕೇಸ್‌

Cauvery water Dispute
ಕರ್ನಾಟಕ22 mins ago

Cauvery Dispute : ಸಮರ್ಥವಾಗಿ ವಾದ ಮಾಡದೆ ನಮಗೆ ಸೋಲಾಯಿತೇ? ಆರೋಪದಲ್ಲಿ ನಿಜವೆಷ್ಟು? ಸುಳ್ಳೆಷ್ಟು?

Bus Accident In Raichur
ಕರ್ನಾಟಕ38 mins ago

Bus Accident: ನಿಂತಿದ್ದ ಲಾರಿಗೆ ಸಾರಿಗೆ ಬಸ್‌ ಡಿಕ್ಕಿ; 32 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

DUSU Election Result
ದೇಶ1 hour ago

DUSU Election: ದೆಹಲಿ ವಿವಿಯಲ್ಲಿ ಎಬಿವಿಪಿ ದರ್ಬಾರ್;‌ ಚುನಾವಣೆಯಲ್ಲಿ ಭಾರಿ ಗೆಲುವು, ದೇಶ ಮೊದಲು ಎಂದ ಬಿಜೆಪಿ

fruits and cold cough
ಆರೋಗ್ಯ2 hours ago

Health Tips: ಶೀತ, ನೆಗಡಿಯಾದಾಗ ಈ ಎಲ್ಲ ಹಣ್ಣುಗಳಿಂದ ದೂರವಿರುವುದು ಒಳ್ಳೆಯದು!

new kannada book yabli
ಕಲೆ/ಸಾಹಿತ್ಯ2 hours ago

Sunday Read: ಹೊಸ ಪುಸ್ತಕ: ಯಾಬ್ಲಿ: ಯಥಾಪ್ರಕಾರ

cryptocurrency fraud
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: ಅಳಿವಿನ ಅಂಚಿನಲ್ಲಿ ಝಣ ಝಣ ಕಾಂಚಾಣ!

pak human right
ಕ್ರಿಕೆಟ್3 hours ago

ವಿಸ್ತಾರ ಸಂಪಾದಕೀಯ: ಮಾನವ ಹಕ್ಕುಗಳ ಪ್ರಶ್ನೆ; ಪಾಕ್‌ ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Sphoorti Salu
ಸುವಚನ4 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

ಟ್ರೆಂಡಿಂಗ್‌