After chikkaballapur, Moral policing reported in Chikkamagaluru Moral policing: ಚಿಕ್ಕಬಳ್ಳಾಪುರದ ಬಳಿಕ ಚಿಕ್ಕಮಗಳೂರು; ಮುಸ್ಲಿಂ ಯುವತಿ ಸ್ನೇಹ ಹೊಂದಿದ್ದ ಹಿಂದು ಯುವಕನಿಗೆ ಹಲ್ಲೆ Vistara News
Connect with us

ಕರ್ನಾಟಕ

Moral policing: ಚಿಕ್ಕಬಳ್ಳಾಪುರದ ಬಳಿಕ ಚಿಕ್ಕಮಗಳೂರು; ಮುಸ್ಲಿಂ ಯುವತಿ ಸ್ನೇಹ ಹೊಂದಿದ್ದ ಹಿಂದು ಯುವಕನಿಗೆ ಹಲ್ಲೆ

ಚಿಕ್ಕಮಗಳೂರಿನ ಬಣಕಲ್‌ ಪಟ್ಟಣದಲ್ಲಿ ಮುಸ್ಲಿಂ ಯುವತಿ ಜತೆ ಸ್ನೇಹಾಚಾರ ಹೊಂದಿದ್ದ ಕಾರಣಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದೆ. ಎರಡು ದಿನದಲ್ಲಿ ಇದು ಎರಡನೇ ಘಟನೆ. ಮೊದಲ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿತ್ತು.

VISTARANEWS.COM


on

After chikkaballapur Moral policing reported in Chikkamagaluru
ಹಲ್ಲೆಗೊಳಗಾದ ಅಜಿತ್‌
Koo

ಚಿಕ್ಕಮಗಳೂರು: ಚಿಕ್ಕಬಳ್ಳಾಪುರದಲ್ಲಿ ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಜತೆಯಾಗಿ ಚಾಟ್ಸ್‌ ತಿನ್ನಲು ಹೋದರೆಂಬ ಕಾರಣ ನೀಡಿ ನೈತಿಕ ಪೊಲೀಸ್‌ ಗಿರಿ (Moral policing) ನಡೆಸಿ, ಇಬ್ಬರಿಗೂ ಹಲ್ಲೆ ನಡೆಸಿದ ಘಟನೆಯ ಬೆನ್ನಿಗೇ ಇದೀಗ ಚಿಕ್ಕಮಗಳೂರಿನಲ್ಲಿ ಇಂತಹುದೇ ಘಟನೆಯೊಂದು ನಡೆದಿದೆ. ಹಿಂದು ಯುವಕನೊಬ್ಬ ಮುಸ್ಲಿಂ ಯುವತಿ ಜತೆ ಸ್ನೇಹದಿಂದಿದ್ದಾನೆ ಎಂಬ ಕಾರಣಕ್ಕಾಗಿ ಆತನ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ (Chikkamagaluru district) ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ (Banakal town) ಅಜಿತ್‌ ಎಂಬ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಈ ರೀತಿಯಾಗಿ ಹಲ್ಲೆ ಮಾಡಿದೆ. ಅಜಿತ್‌ ಅವರು ಮುಸ್ಲಿಂ ಯುವತಿಯ ಜೊತೆ ಸ್ನೇಹ ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.

ಅಜಿತ್‌ ಅವರು ಶುಕ್ರವಾರ ಮುಂಜಾನೆ ಉದ್ಯೋಗಕ್ಕೆಂದು ಹೋಗುತ್ತಿದ್ದಾಗ ಬಣಕಲ್‌ ಪಟ್ಟಣದಲ್ಲಿ ಅಡ್ಡಗಟ್ಟಿದ ಮುಸ್ಲಿಂ ಯುವಕ ತಂಡ ಅವರಿಗೆ ಮುಖ, ಎದೆ ಮತ್ತು ಕಾಲಿನ ಭಾಗಕ್ಕೆ ಹಲ್ಲೆ ಮಾಡಿದೆ. ಈ ವೇಳೆ ಬೀಟ್‌ ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಅವರನ್ನು ಬಿಡಿಸಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ವೈಯಕ್ತಿಕ ದ್ವೇಷದಿಂದ ನನ್ನ ಮೇಲೆ ಅನ್ಯ ಕೋಮಿನ ಯುವಕರ ತಂಡ ಹಲ್ಲೆ ಮಾಡಿದೆ ಎಂದು ಅಜಿತ್‌ ಅವರು ವಿಸ್ತಾರ ನ್ಯೂಸ್‌ಗೆ ತಿಳಿಸಿದ್ದಾರೆ. ಆದರೆ, ಯಾವ ವಿಚಾರಕ್ಕೆ ಎನ್ನುವುದನ್ನು ಅವರು ಸ್ಪಷ್ಟವಾಗಿ ತಿಳಿಸಿಲ್ಲ.

ಸ್ಥಳೀಯ ಮಾಹಿತಿಯ ಪ್ರಕಾರ, ಅಜಿತ್‌ ಅವರು ಮುಸ್ಲಿಂ ಯುವತಿಯೊಬ್ಬರ ಜತೆ ವಿಶ್ವಾಸ, ಸ್ನೇಹಾಚಾರದಿಂದ ಮಾತನಾಡಿದ್ದನ್ನೇ ಗುರಿಯಾಗಿಟ್ಟುಕೊಂಡು ಈ ಹಲ್ಲೆ ನಡೆದಿದೆ. ಹಲ್ಲೆ ಮಾಡಿದ ಯುವಕರು ಅಲ್ಲಿಂದ ಪರಾರಿಯಾಗಿದ್ದು, ಬಣಕಲ್‌ ಪೊಲೀಸರು ಅವರನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲೂ ನಡೆದಿತ್ತು ನೈತಿಕ ಪೊಲೀಸ್‌ಗಿರಿ, ನಡೆದಿದೆ ಬಂಧನ

ಚಿಕ್ಕಬಳ್ಳಾಪುರ ನಗರದ (Chikkaballapura news) ಗೋಪಿಕಾ ಚಾಟ್ಸ್‌ಗೆ ಹಿಂದು ಹುಡುಗ ಮತ್ತು ಮುಸ್ಲಿಂ ಹುಡುಗಿ ಜತೆಯಾಗಿ ಬಂದಿದ್ದರು ಎಂಬ ಕಾರಣಕ್ಕೆ ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿ ಅವರಿಬ್ಬರ ಮೇಲೆ ಹಲ್ಲೆ ನಡೆಸಿದವರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ನಕ್ಕಲಕುಂಟೆ ನಿವಾಸಿಗಳಾದ ವಾಯಿದ್ (20) ಹಾಗೂ ಸದ್ದಾಂ (21) ಬಂಧಿತ ಆರೋಪಿಗಳು. ಇವರ ಜತೆಗಿದ್ದ ಇನ್ನೊಬ್ಬ ಆರೋಪಿ ಇಮ್ರಾನ್ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಎರಡು ದಿನಗಳ ಹಿಂದೆ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಅಲ್ಲಿನ ಹೋಟೆಲ್‌ ಒಂದಕ್ಕೆ ಬಂದಿದ್ದರು. ಆಕೆ ಬುರ್ಕಾ ಮತ್ತು ಹಿಜಾಬ್‌ ಧರಿಸಿಯೇ ಅಲ್ಲಿಗೆ ಆಗಮಿಸಿದ್ದಳು. ಇದನ್ನು ಅಲ್ಲಿನ ಸ್ಥಳೀಯ ಮುಸ್ಲಿಂ ಯುವಕರು ನೋಡಿದ್ದಾರೆ. ಮುಸ್ಲಿಂ ಯುವತಿಯ ಜತೆ ಬಂದಿರುವ ಹುಡುಗ ಹಿಂದೂನಾ ಮುಸ್ಲಿಮನಾ ಎಂದು ಅಲ್ಲಿದ್ದವರಿಗೆ ಕುತೂಹಲ ಮೂಡಿದೆ. ಅವರಿಬ್ಬರೂ ಒಳಗೆ ಹೋಗುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲೇ ಅವರ ಆಸುಪಾಸಿನಲ್ಲಿ ಠಳಾಯಿಸಿದ್ದಾರೆ. ಅವರಿಬ್ಬರೂ ಒಂದು ಟೇಬಲ್‌ಗೆ ಹೋಗಿ ಕುಳಿತಾಗ ಇಬ್ಬರು ಹುಡುಗರು ಬಂದು ಹುಡುಗಿಯ ಜತೆಗೆ ಇರುವವನು ಯಾವ ಧರ್ಮ ಎಂದು ದೃಢಪಡಿಸಿಕೊಂಡು ಬಂದು ಇಬ್ಬರ ಮೇಲೂ ಹಲ್ಲೆ ನಡೆಸಲಾಗಿತ್ತು. ಆ ಕ್ಷಣದಲ್ಲಿ ಕ್ಷಮೆ ಯಾಚಿಸಿದ ಯುವತಿ ಬಳಿಕ ಮನೆಯವರ ನೆರವಿನಿಂದ ಪೊಲೀಸರಿಗೆ ದೂರು ನೀಡಿದ್ದಳು.

ಇದನ್ನೂ ಓದಿ: Moral policing: ಹಿಂದು ಯುವಕನ ಜತೆ ಹೋಟೆಲ್‌ಗೆ ಹೋದ ಮುಸ್ಲಿಂ ಯುವತಿ; ಇಬ್ಬರ ಮೇಲೂ ಹಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Edited by

for tenants also to wrestlers protest and more news
Koo

1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್‌ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್‌ ಉಚಿತ ವಿದ್ಯುತ್‌ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್‌ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್‌ ಐಡಿಯನ್ನು ಆರ್‌ಆರ್‌ ಸಂಖ್ಯೆಯೊಂದಿಗೆ ಲಿಂಕ್‌ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್‌ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್‌ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್‌ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್‌ಜಾಯ್‌ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್‌ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Weather Report: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್‌ಜಾಯ್‌ ಸೈಕ್ಲೋನ್‌ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Wrestlers Protest: ಅನುರಾಗ್​ ಠಾಕೂರ್​ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ಭೂಷನ್​ ಸಿಂಗ್ ಶರಣ್​ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್​ ಪೂನಿಯಾ, ವಿನೇಶ್​ ಫೋಗಟ್​ ಮತ್ತು ಸಾಕ್ಷಿ ಮಲಿಕ್​ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್​ ಠಾಕೂರ್​ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್‌ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್‌ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. WTC Final 2023: ಆಡುವ ಬಳಗದಿಂದ ಅಶ್ವಿನ್​ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್‌ ಜತೆ ಪರಾರಿ!
ಭೋಪಾಲ್‌ನ 19 ವರ್ಷದ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್‌ಫ್ರೆಂಡ್‌ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

Shivamogga News: ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಪಕ್ಷವು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ನೀಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೆ ದೊರೆಯಬೇಕು ಎಂಬ ಅಭಿಲಾಷೆಯನ್ನು ಅವರು ಹೊಂದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಮಧು ಬಂಗಾರಪ್ಪ ತಿಳಿಸಿದ್ದಾರೆ.

VISTARANEWS.COM


on

Edited by

Anita Madhu Bangarappa was felicitated by Block Mahila Congress at soraba
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ಕಲ್ಯಾಣ ಮಂಟಪದಲ್ಲಿ ಬುಧವಾರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿತಾ ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಲಾಯಿತು.
Koo

ಸೊರಬ: ಕ್ಷೇತ್ರದಲ್ಲಿ ಮಹಿಳಾ (women) ಮತ್ತು ಯುವ ಮತದಾರರು (youth voters) ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಿದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ (Votes) ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಮಧು ಬಂಗಾರಪ್ಪ ತಿಳಿಸಿದರು.

ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ಕಲ್ಯಾಣ ಮಂಟಪದಲ್ಲಿ ಬುಧವಾರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Season Fashion: ಸೆಲೆಬ್ರೆಟಿ ಲುಕ್‌ಗಾಗಿ ಹೈ ಫ್ಯಾಷನ್‌ ಲೋಕಕ್ಕೆ ಬಂತು ಒನ್‌ ಶೋಲ್ಡರ್‌ ಡ್ರೆಸ್‌!

ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದ ಜನತೆ ಕೊಟ್ಟ ಮಾತಿನಂತೆ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿದ್ದಾರೆ, ಕ್ಷೇತ್ರದ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಪ್ರಚಾರದ ವೇಳೆ ಜನತೆ ಅನೇಕ ಸಮಸ್ಯೆಗಳನ್ನು ಸಹ ತಮ್ಮ ಗಮನಕ್ಕೆ ತಂದಿದ್ದರು. ಅವುಗಳನ್ನು ಪತಿ ಮಧು ಬಂಗಾರಪ್ಪ ಅವರಿಗೆ ತಿಳಿಸಿ, ಹಂತ-ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕೇಳಿಕೊಳ್ಳುತ್ತೇನೆ ಎಂದರು.

ಪಕ್ಷವು ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೆ ದೊರೆಯಬೇಕು ಎಂಬ ಅಭಿಲಾಷೆಯನ್ನು ಅವರು ಹೊಂದಿದ್ದಾರೆ. ಕ್ಷೇತ್ರದ ಅಭಿವೃದ್ಧಿಯು ಸೇರಿದಂತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವರು ಎಂದು ತಿಳಿಸಿದರು.

ಇದನ್ನೂ ಓದಿ: Congress Guarantee: ಫ್ರೀ ಕರೆಂಟ್‌ ನನಗೂ ಸಿಗುತ್ತಾ? ಅರ್ಜಿ ಸಲ್ಲಿಕೆ ಹೇಗೆ? ಬಾಡಿಗೆದಾರರಿಗೂ ಇದೆಯೆ?: ನಿಮ್ಮ 26 ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಸರ್ಕಾರವು ಸಹ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಕಾರ್ಡ್‌ನಲ್ಲಿನ ಅಂಶಗಳನ್ನು ಜಾರಿಗೆ ತರುತ್ತಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದು ಮತ್ತು ಆನವಟ್ಟಿ-ಸೊರಬ ಭಾಗದ ಯುವಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉತ್ಸಾಹ ಹೊಂದಿದ್ದಾರೆ. ತಾವು ಸಹ ಮಧು ಬಂಗಾರಪ್ಪ ಅವರ ಜತೆಗಿದ್ದು, ಕ್ಷೇತ್ರದ ಜನತೆಯೊಂದಿಗೆ ಸದಾ ಇರುತ್ತೇನೆ ಮತ್ತು ಜನತೆಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ ಮಾತನಾಡಿ, ಕ್ಷೇತ್ರದ ಮಹಿಳಾ ಮತದಾರರು ಒಗ್ಗಟ್ಟಿನಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಪ್ರಚಾರಕ್ಕೆ ಪಕ್ಷದ ಮುಖಂಡರು ಸಹಕಾರ ನೀಡಿದರು. ಮುಖ್ಯವಾಗಿ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿಯರಾದ ಸುಜಾತಾ ತಿಲಕ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಮತ್ತು ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಅವರು ಕೈ ಜೋಡಿಸಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಯಿತು.

ಮಹಿಳಾ ಮತದಾರರನ್ನು ನಮ್ಮತ್ತ ಸೆಳೆಯಲು ಸಹಕಾರಿಯಾಗಿದ್ದು, ಇದರ ಪರಿಣಾಮ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಜನತೆ ಸಾಕಷ್ಟು ನಿರೀಕ್ಷೆಯೊಂದಿಗೆ ಮತ ಚಲಾಯಿಸಿದ್ದಾರೆ. ಜನತೆಯ ನಿರೀಕ್ಷೆಗಳನ್ನು ಕ್ರಮೇಣವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿತಾ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಲಾಯಿತು.

ಇದನ್ನೂ ಓದಿ: Sugar Vs Salt: ಸಕ್ಕರೆ ಮತ್ತು ಉಪ್ಪು: ಕಿಡ್ನಿಗೆ ಯಾವುದು ಹಿತಕರ?

ಈ ವೇಳೆ ಜಿಪಂ ಮಾಜಿ ಸದಸ್ಯೆ ರಾಜೇಶ್ವರಿ ಗಣಪತಿ, ತಾಪಂ ಮಾಜಿ ಸದಸ್ಯೆ ಜ್ಯೋತಿ ನಾರಾಯಣಪ್ಪ, ಪುರಸಭೆ ಸದಸ್ಯೆ ಪ್ರೇಮಾ, ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷೆ ಶಿಲ್ಪಾ ಗಿರೀಶ್ ಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಸದಸ್ಯರಾದ ಸರಿತಾ, ಲಕ್ಷ್ಮೀ ರವಿ, ಶ್ರೀಮತಿ ಚಂದ್ರಕಾಂತ್, ಮಹಿಳಾ ಪ್ರಮುಖರಾದ ಮಂಜುಳಾ ಕೆರಿಯಪ್ಪ, ಲಕ್ಷ್ಮಮ್ಮ, ಶಕುಂತಲಾ ಪಿ. ಶೇಟ್, ಎಂ. ಲಲಿತಾ, ಮುಖಂಡರಾದ ಜಯಶೀಲಗೌಡ, ಸುನೀಲ್‌ಗೌಡ, ಎನ್.ಜಿ. ನಾಗರಾಜ್, ಪ್ರದೀಪ್ ಬಾಡದಬೈಲು, ಎಂ.ಪಿ. ರತ್ನಾಕರ, ರೇಣುಕಾಪ್ರಸಾದ್, ಮಾರ್ಯಪ್ಪ ಬೆನ್ನೂರು, ಗಣೇಶ್ ಮರಡಿ, ಧರ್ಮಪ್ಪ ದ್ಯಾವಾಸ, ಸುಧಾಕರ ನಾಯ್ಕ್, ಪ್ರಶಾಂತ್ ನಾಯ್ಕ್ ಸೇರಿದಂತೆ ಇತರರಿದ್ದರು.

Continue Reading

ಕರ್ನಾಟಕ

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Tumkur News: ಶಿರಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಶೀಘ್ರವಾಗಿ ವೈದ್ಯರ ಕೊರತೆಯನ್ನು ನೀಗಿಸಲು ಕ್ರಮವಹಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

VISTARANEWS.COM


on

Edited by

MLA TB Jayachandra visited Shira Public Hospital
ಶಿರಾದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ.ಜಯಚಂದ್ರ ಭೇಟಿ ನೀಡಿ, ಪರಿಶೀಲಿಸಿದರು.
Koo

ಶಿರಾ: ನಗರದ ಸಾರ್ವಜನಿಕ ಆಸ್ಪತ್ರೆಗೆ (Public Hospital) ಶಾಸಕ ಟಿ.ಬಿ.ಜಯಚಂದ್ರ ಭೇಟಿ (visit) ನೀಡಿ, ಪರಿಶೀಲಿಸಿ ರೋಗಿಗಳ ಸಮಸ್ಯೆಗಳನ್ನು (Patient problem) ಆಲಿಸಿದರು.

ಆಸ್ಪತ್ರೆಯಲ್ಲಿ ಅಗತ್ಯವಿರುವ ಔಷಧಗಳನ್ನು ತರಿಸಿಕೊಂಡು ರೋಗಿಗಳಿಗೆ ನೀಡಬೇಕು. ಹೊರಗೆ ತರುವಂತೆ ಚೀಟಿ ಬರೆಯುವುದನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Season Fashion: ಸೆಲೆಬ್ರೆಟಿ ಲುಕ್‌ಗಾಗಿ ಹೈ ಫ್ಯಾಷನ್‌ ಲೋಕಕ್ಕೆ ಬಂತು ಒನ್‌ ಶೋಲ್ಡರ್‌ ಡ್ರೆಸ್‌!

ಆಸ್ಪತ್ರೆಯಲ್ಲಿ ಸ್ಚಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ ಅವರು, ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಶೀಘ್ರವಾಗಿ ವೈದ್ಯರ ಕೊರತೆಯನ್ನು ನೀಗಿಸಲು ಕ್ರಮವಹಿಸುವುದಾಗಿ ಇದೇ ವೇಳೆ ತಿಳಿಸಿದರು.

ಶಿರಾ ಆಸ್ಪತ್ರೆಯಲ್ಲಿ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿದ್ದು ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಇತ್ತೀಚೆಗೆ ಯುವ ಜನತೆ ಹೃದಯದ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಆತಂಕವನ್ನು ಉಂಟು ಮಾಡುವ ವಿಷಯವಾಗಿದೆ ಎಂದ ಅವರು, ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಚಿಕಿತ್ಸಾ ಕೇಂದ್ರ ಮತ್ತು 30 ಹಾಸಿಗೆಯ ಆಸ್ಪತ್ರೆಯನ್ನು ನಗರದಲ್ಲಿ ತೆರೆಯಲು ಚಿಂತನೆ ನಡೆಸಿದ್ದು, ಶೀಘ್ರವಾಗಿ ಅನುಷ್ಠಾನಕ್ಕೆ ತರುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Sugar Vs Salt: ಸಕ್ಕರೆ ಮತ್ತು ಉಪ್ಪು: ಕಿಡ್ನಿಗೆ ಯಾವುದು ಹಿತಕರ?

ಬಳಿಕ ನಗರದ ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕ್ಷೇತ್ರದ ವ್ಯಾಪ್ತಿಯ ಹಲವಾರು ಮಾಹಿತಿ ವಿನಿಮಯ ಮಾಡಿಕೊಂಡರು.

Continue Reading

ಕರ್ನಾಟಕ

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

HD Devegowda: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್‌ ಅಬ್ದುಲ್ಲಾ ಅವರ ಕರ್ನಾಟಕ ಭೇಟಿ ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದೆ. ಬಿಜೆಪಿಯೇತರ ಸರ್ಕಾರ ರಚನೆಗಾಗಿ ನಾನಾ ಕಸರತ್ತುಗಳು ನಡೆಯುತ್ತಿರುವ ಮಧ್ಯೆಯೇ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

Edited by

Farooq Abdullah meets HD Devegowda
ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದ ಫಾರೂಕ್‌ ಅಬ್ದುಲ್ಲ
Koo

ಬೆಂಗಳೂರು: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್‌ ಅಬ್ದುಲ್ಲಾ (Farooq Abdullah) ಬುಧವಾರ (ಜೂನ್‌ 7) ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರು ಈ ಭೇಟಿ ನೀಡಿದ್ದಾರೆ ಎಂದು ಹೇಳಲಾಗಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳು ಇದರ ಹಿಂದೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಲೋಕಸಭಾ ಚುನಾವಣೆಯು ರಾಜ್ಯಗಳ ವಿಧಾನಸಭಾ ಚುನಾವಣೆಗಿಂತ ತುಸು ಭಿನ್ನ. ಇಲ್ಲಿ ಮತ ಹಾಕುವಾಗ ನಾನಾ ವಿಚಾರಗಳು ಪರಿಗಣಿಸಲ್ಪಡುತ್ತದೆ. ಅಲ್ಲದೆ, ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಹವಾ ಇದೆ. ಹೀಗಾಗಿ ಪ್ರತಿಪಕ್ಷಗಳು ಒಗ್ಗೂಡಿ ಹೋರಾಟ ನಡೆಸಬೇಕಿದೆ. ಇದಕ್ಕಾಗಿ ಬಿಜೆಪಿಯೇತರ ರಂಗ ರಚನೆಯ ಅವಶ್ಯಕತೆಯೂ ಇದೆ ಎಂಬುದು ಇತರ ರಾಜಕೀಯ ಪಕ್ಷಗಳ ಕೂಗಾಗಿದೆ. ಅದರ ಭಾಗವಾಗಿ ಈಗ ಫಾರೂಕ್‌ ಅಬ್ದುಲ್ಲಾ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಶುರುವಾಗಿದೆ ಒಗ್ಗಟ್ಟಿನ ಮಂತ್ರ

ಜೂನ್ 12ರಂದು ಬಿಹಾರದ ಪಟನಾದಲ್ಲಿ ವಿರೋಧ ಪಕ್ಷಗಳ ಸಭೆಯನ್ನು ಕರೆಯಲಾಗಿತ್ತು. ಜೆಡಿಯು ನಾಯಕ, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಈ ಸಭೆಯ ಮುಂದಾಳತ್ವವನ್ನು ವಹಿಸಿದ್ದರು. ಆದರೆ, ಈ ಸಭೆಗೆ ಜೆಡಿಎಸ್‌ ಅನ್ನು ಆಹ್ವಾನ ಮಾಡಿರಲಿಲ್ಲ. ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಕೆಲವು ಪ್ರಮುಖ ವಿರೋಧ ಪಕ್ಷದ ನಾಯಕರಿಗೆ ಸಭೆಗೆ ಬರಲು ಅಸಾಧ್ಯವಾಗಲಿರುವ ಕಾರಣ ಈ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈಗಾಗಲೇ ನಿತೀಶ್ ಕುಮಾರ್ ಅವರು ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಎಡಪಕ್ಷಗಳ ಹೊರತಾಗಿ ಹಲವಾರು ಪ್ರಾದೇಶಿಕ ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: MLC Election: ಕಾಂಗ್ರೆಸ್‌ ಸರ್ಕಾರಕ್ಕೆ 3ನೇ ಸವಾಲು: 3 ಪರಿಷತ್‌ ಸ್ಥಾನಕ್ಕೆ 19 ಆಕಾಂಕ್ಷಿಗಳು, ನಾಲ್ಕೈದು ಬಣಗಳು!

ಅಲ್ಲದೆ, ಕಾಂಗ್ರೆಸ್ ಪಕ್ಷದಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಎನ್‌ಸಿಪಿಯ ಶರದ್ ಪವಾರ್ ಸೇರಿದಂತೆ ಅನೇಕ ಪಕ್ಷಗಳ ನಾಯಕರೊಂದಿಗೆ ಅವರು ಪ್ರತ್ಯೇಕ ಸಭೆಗಳನ್ನು ಸಹ ನಿತೀಶ್‌ ಕುಮಾರ್‌ ನಡೆಸಿದ್ದಾರೆ. ಈಗ ಬಿಜೆಪಿಯೇತ ಸರ್ಕಾರ ರಚನೆಯಾಗಬೇಕು, ಆ ಪಕ್ಷವನ್ನು ಎಲ್ಲರೂ ಒಗ್ಗಟ್ಟಾಗಿ ಮಣಿಸಬೇಕು ಎಂಬ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಫಾರುಕ್‌ ಅಬ್ದುಲ್ಲ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿಯೇತರ ರಾಜಕೀಯ ಪಕ್ಷಗಳ ಸಂಘಟನೆ ಬಗ್ಗೆ ಪ್ರಸ್ತಾಪವನ್ನು ಮಾಡಿದ್ದಾರೆ. ಜತೆಗೆ ಬಿಜೆಪಿ ದೇಶ ವಿಭಜನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಅವರು, ಆ ಸರ್ಕಾರದ ಜತೆ ಕೈಜೋಡಿಸದಂತೆಯೂ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಎಲ್ಲವೂ ಸರಿಹೋಗಲಿದೆ: ಫಾರುಕ್‌ ಅಬ್ದುಲ್ಲಾ

ಎಚ್.ಡಿ. ದೇವೇಗೌಡರನ್ನು ಪದ್ಮನಾಭನಗರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಬಿಜೆಪಿಯೇತರ ರಾಜಕೀಯ ಪಕ್ಷಗಳ ರಂಗ ರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. “ನಾನು ಎಲ್ಲರಿಗೆ ಸಲಹೆ ನೀಡುತ್ತೇನೆ. ಭಾರತ ವಿವಿಧತೆಯಲ್ಲಿ ಏಕತೆ ಇರುವ ದೇಶವಾಗಿದೆ. ದೇಶವನ್ನು ರಕ್ಷಣೆ ಮಾಡಬೇಕಿದೆ. 2024ರ ಲೋಕಸಭಾ ಚುನಾವಣಾ ದೃಷ್ಟಿಯಿಂದ ವಿರೋಧ ಪಕ್ಷಗಳು ಒಂದಾಗುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಜೂನ್‌ 12ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆದಿರುವ ಸಭೆಗೆ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಏಕೆ ಆಹ್ವಾನಿಸಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಫಾರೂಕ್‌ ಅಬ್ದುಲ್ಲಾ, ಈ ಸಭೆ ಬಹಳ ಮುಖ್ಯವಾಗಿದೆ. ನಿಧಾನವಾಗಿ ಎಲ್ಲ ದಾರಿಯೂ ಸಿಗುತ್ತದೆ. ಒಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋಗುವುದು ಬಹಳ ಮುಖ್ಯವಾದ ವಿಚಾರವಾಗಿದೆ ಎಂದು ಹೇಳಿದರು.

ಕಾಶ್ಮೀರಿ ಫೈಲ್ಸ್, ಕೇರಳ ಫೈಲ್ಸ್ ಸಿನಿಮಾಗಳಂತಹ ಸಿನಿಮಾಗಳು ದೇಶವನ್ನು ವಿಭಜನೆ ಮಾಡುವುದಕ್ಕೆ ಮಾಡಿರುವ ಚಿತ್ರಗಳಾಗಿವೆ. ಭಾರತದ ವಿಭಜನೆ ಮಾಡುವ ಇಂತಹ ಚಿತ್ರಗಳಿಂದ ಸಂವಿಧಾನವೂ ವಿಭಜನೆ ಆಗುತ್ತದೆ. ಹಿಂದು, ಮುಸ್ಲಿಂ ಇರಲಿ, ಯಾವುದೇ ಸಮಾಜ, ರಾಜ್ಯಗಳೇ ಆಗಿರಲಿ, ಈ ರೀತಿಯ ಚಿತ್ರಗಳು ದೇಶಕ್ಕೆ ಮಾರಕ ಎಂದು ಫಾರೂಕ್‌ ಅಬ್ದುಲ್ಲಾ ಅಭಿಪ್ರಾಯಪಟ್ಟರು.

ಸೌಹಾರ್ದಯುತ ಭೇಟಿ: ಎಚ್‌ಡಿ ಕುಮಾರಸ್ವಾಮಿ

ಫಾರುಕ್ ಅಬ್ದುಲ್ಲಾ ಅವರು ನಮ್ಮ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಅಷ್ಟೇ. ಗೌಡರ ಆರೋಗ್ಯ ವಿಚಾರಿಸಲು ಬಂದಿದ್ದರು. ಪ್ರಧಾನಿ ಆಗಿದ್ದಾಗ ಕಾಶ್ಮೀರಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ಅವರು ಸ್ಮರಿಸಿಕೊಂಡಿದ್ದಾರೆ. ದೇಶದ ಹಿತದೃಷ್ಟಿಯಿಂದ ಒಳ್ಳೆಯ ವಾತಾವರಣ ಬೇಕು ಎಂಬುದು ಅವರ ಅಭಿಪ್ರಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

Farooq Abdullah meets Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಫಾರೂಕ್‌ ಅಬ್ದುಲ್ಲಾ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಫಾರೂಕ್‌

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು (Siddaramaiah) ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಫಾರೂಕ್‌ ಅಬ್ದುಲ್ಲಾ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು ಇತರರಿದ್ದರು. ಈ ವೇಳೆ ಸಿದ್ದರಾಮಯ್ಯ ಅವರ ಜತೆ ಫಾರೂಕ್‌ ಕೆಲವು ಸಮಯ ಮಾತುಕತೆ ನಡೆಸಿದ್ದಾರೆ. ಆದರೆ, ಮಾತುಕತೆಯ ವಿಷಯ ಇನ್ನೂ ಬಹಿರಂಗಗೊಂಡಿಲ್ಲ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

Continue Reading
Advertisement
for tenants also to wrestlers protest and more news
ಕರ್ನಾಟಕ9 seconds ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ13 mins ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ15 mins ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ26 mins ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ35 mins ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

BJP lose in karnataka
ಕರ್ನಾಟಕ36 mins ago

BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

Kolhapur Protest
ದೇಶ44 mins ago

ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

U S Ambassador Eric Garcetti with Indian students
ದೇಶ49 mins ago

Student Visa Day: ಉನ್ನತ ಶಿಕ್ಷಣಕ್ಕೆ ಅಮೆರಿಕ ವೀಸಾ; 3,500 ಭಾರತೀಯ ವಿದ್ಯಾರ್ಥಿಗಳ ಸಂದರ್ಶನ

Leopard Attack
ಕರ್ನಾಟಕ1 hour ago

Leopard Attack: ಮಾಲೀಕನ ಕೊಲ್ಲಲು ಬಂದ ಚಿರತೆಯನ್ನು ಕೊಂಬಿನಿಂದ ತಿವಿದು ಓಡಿಸಿದ ಹಸು!

HDFC Officer Viral Video
ದೇಶ1 hour ago

Viral Video: ಟಾರ್ಗೆಟ್‌ ರೀಚ್‌ ಆಗದ್ದಕ್ಕೆ ಸಹೋದ್ಯೋಗಿಗೆ ಬೈದ ಎಚ್‌ಡಿಎಫ್‌ಸಿ ಅಧಿಕಾರಿ ಸಸ್ಪೆಂಡ್

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

N Chaluvarayaswamy about Congress guarantee
ಕರ್ನಾಟಕ7 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ15 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ3 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

ಟ್ರೆಂಡಿಂಗ್‌

error: Content is protected !!