Site icon Vistara News

Karnataka Election 2023: ಮೋದಿ, ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ: ಸಿಎಂ ಬೊಮ್ಮಾಯಿ

7 union minister denied ticket to Rajya Sabha Elections by BJP

ಹುಬ್ಬಳ್ಳಿ: ರಾಜ್ಯದಲ್ಲಿ ಈಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯವಾಗುವುದರಲ್ಲಿ ನಮಗೆ ಯಾವುದೇ ಸಂಶಯವಿಲ್ಲ. ಅಮಿತ್ ಶಾ ಅವರು ಚುನಾವಣಾ (Karnataka Election 2023) ವಿಚಾರವಾಗಿ ಕೆಲ‌ವು ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಪ್ರಧಾನಿಯಿಂದ ಹಿಡಿದು ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ. ಕೆಲವು ಕಾರ್ಯಕ್ರಮಗಳು ಹಿಂದೆಮುಂದೆ ಆಗುತ್ತಿದ್ದು, ಇಂದು (ಮಂಗಳವಾರ) ರಾತ್ರಿ ಆ ಬಗ್ಗೆ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಮಿತ್ ಶಾ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮೋದಿ, ಅಮಿತ್‌ ಶಾ ಅವರು ರಾಜ್ಯಕ್ಕೆ ಈಗಾಗಲೇ ಭೇಟಿ ನೀಡುತ್ತಲಿದ್ದು, ಎಲ್ಲ ಕಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಇನ್ನು ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೂ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹ ನೋಡಿದರೆ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಒಂದು ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೂ ನೀಡಲಾಗಿದೆ. ನನ್ನ ಮೇಲೆ‌ ಮಾಡಿರುವ ಆರೋಪದ ಕುರಿತು ಸಿದ್ದರಾಮಯ್ಯ ಸಾಬೀತು ಮಾಡಲಿ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್ ಆಗಿದೆ. ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್ ಆಗಿದ್ದರಿಂದ ಅವರು ಈ ಬಗ್ಗೆ ಮಾತನಾಡೋದು ಹಾಸ್ಯಾಸ್ಪದವಾಗಿ ಕಾಣಿಸುತ್ತದೆ. ಅವರ ಪಕ್ಷದ ಎಷ್ಟು ಜನ ನಾಯಕರು ಜೈಲಿಗೆ ಹೋಗಿದ್ದಾರೆ. ಬೇಲ್‌ ಮೇಲೆ ಹೊರಗೆ ಬಂದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಿಎಂ ಕುಟುಕಿದರು.

ಇದನ್ನೂ ಓದಿ: Karnataka Election 2023: ಡಬಲ್‌ ಎಂಜಿನ್‌ ಎಂದರೆ 80 ಪರ್ಸೆಂಟ್‌ ಕಮಿಷನ್ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

ಹುಬ್ಬಳ್ಳಿ-ಧಾರವಾಡ ಕೆಂದ್ರ ಕ್ಷೇತ್ರ ಬಿಜೆಪಿ ಪಾಲು: ಬೆಲ್ಲದ್

ಹುಬ್ಬಳ್ಳಿ‌-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಹಳ ತಂತ್ರಗಾರಿಕೆಯನ್ನು ಹೆಣೆಯುವ ಅವಶ್ಯಕತೆಯಿಲ್ಲ. ಈಗಾಗಲೇ ಜನರು ಡಿಸೈಡ್ ಮಾಡಿದ್ದಾರೆ. ಬಿಜೆಪಿಯನ್ನು ದೊಡ್ಡ ಪ್ರಮಾಣದಲ್ಲಿ ಆಯ್ಕೆ ಮಾಡುತ್ತಾರೆ. ಐವತ್ತು ವರ್ಷದ ಇತಿಹಾಸದಲ್ಲಿ ಕೇವಲ ಒಂಭತ್ತು ತಿಂಗಳು ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಮಾಡಿ ಮನೆಗೆ ಕಳಿಸಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಪಕ್ಷದ ಹಕೀಕತ್ತು ಏನೆಂಬುದು ಕರ್ನಾಟಕದ ಜನರಿಗೆ ಗೊತ್ತಿದೆ. ಜಗದೀಶ್‌ ಶೆಟ್ಟರ್ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಮೂವತ್ತೈದು ಸಾವಿರ ಲೀಡ್‌ನಿಂದ ಮಹೇಶ್ ಟೆಂಗಿನಕಾಯಿ ಗೆಲ್ಲುತ್ತಾರೆ. ಈ ಬಗ್ಗೆ ಅಮಿತ್ ಶಾ ಕೂಡ ಹೇಳಿದ್ದಾರೆ. ನನಗೆ ಬೇರೆ ಬೇರೆ ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಳ್ಳಲು ಹೇಳಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

Exit mobile version