ಬೆಂಗಳೂರು: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ (Prajwal Revanna) ಅನರ್ಹಗೊಂಡ ಬೆನ್ನಲ್ಲೇ ಶಾಸಕ ಎಚ್.ಡಿ. ರೇವಣ್ಣ (HD Revanna) ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಚುನಾವಣಾ ಅಕ್ರಮಕ್ಕೆ (Election malpractices) ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಅವರಿಗೆ ಈಗ ಹೈಕೋರ್ಟ್ ಸಮನ್ಸ್ (High Court summons) ಜಾರಿ ಮಾಡಿದೆ.
ಹೊಳೆನರಸೀಪುರ ಶಾಸಕರಾಗಿರುವ ಎಚ್.ಡಿ. ರೇವಣ್ಣ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ಸೋಮವಾರ (ಸೆಪ್ಟೆಂಬರ್ 4) ರಂದು ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸಿತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನಿಂದ ಮತ್ತೊಂದು ಸಮನ್ಸ್ ಜಾರಿ (Issuing summons) ಮಾಡಿದೆ.
ನೋಟಿಸ್ ಸ್ವೀಕರಿಸದೆ, ವಿಚಾರಣೆಗೂ ಹಾಜರಾಗದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ನೀಡಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಮತ್ತೊಂದು ಸಮನ್ಸ್ ಜಾರಿಗೊಳಿಸಲು ಆದೇಶಿಸಿರುವ ಹೈಕೋರ್ಟ್, ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಅವರು ಜೆಡಿಎಸ್ ಸ್ಪರ್ಧಿ ಎಚ್.ಡಿ. ರೇವಣ್ಣ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಈ ತಕಾರರು ಅರ್ಜಿಯ ವಿಚಾರಣೆಯು ಸೋಮವಾರ (ಸೆಪ್ಟೆಂಬರ್ 4) ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ, ಶಾಸಕ ಎಚ್.ಡಿ. ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶವನ್ನು ಹೊರಡಿಸಿದೆ.
ತಕರಾರು ಅರ್ಜಿಯಲ್ಲಿ ಏನಿತ್ತು?
ಚುನಾವಣೆಯಲ್ಲಿ ಅಕ್ರಮ ಮಾಡಿ ಎಚ್.ಡಿ. ರೇವಣ್ಣ ಗೆದ್ದಿದ್ದಾರೆ. ಅಲ್ಲದೆ, 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಅವರು ಸಹ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಕೋರ್ಟ್ ಅಸಿಂಧುಗೊಳಿಸಬೇಕು ಎಂದು ಕೋರ್ಟ್ಗೆ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು, ಈಗ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: Shakti Scheme : ಸರ್ಕಾರಿ ಬಸ್ ಮೆಟ್ಟಿಲಿಗೆ ನಮಸ್ಕರಿಸಿದ್ದ ಮಹಿಳೆಯ ಜತೆ ಸಿದ್ದರಾಮಯ್ಯ ಅನಿರೀಕ್ಷಿತ ಭೇಟಿ
ಅನರ್ಹಗೊಂಡಿರುವ ಪ್ರಜ್ವಲ್ ರೇವಣ್ಣ
ಲೋಕಸಭೆಗೆ ಸ್ಪರ್ಧೆ ಮಾಡುವಾಗ ಸಲ್ಲಿಸಿದ್ದ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಈಚೆಗೆ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಈ ಪ್ರಕರಣದ ಬೆನ್ನಲ್ಲೇ ಈಗ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೆ ಸಮನ್ಸ್ ನೀಡಿದೆ. ಅವರಿಗೂ ಅನರ್ಹತೆಯ ಭೀತಿ ಎದುರಾಗಿದೆ.