ಬೆಂಗಳೂರು: ಆಡಳಿತ ಪಕ್ಷದ ಶಾಸಕರ ಬಳಿಕ ಈಗ ವಿಧಾನಸಭಾ ಚುನಾವಣೆ ಪರಾಜಿತ ಅಭ್ಯರ್ಥಿಗಳೂ, ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ನಾಯಕನ್ನು ಸಚಿವರು ಪರಿಣಿಸುತ್ತಿಲ್ಲ, ಮೊಬೈಲ್ ಕರೆಗೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ರಾಜ್ಯ ಬಿಜೆಪಿ ವರಿಷ್ಠರ ಮುಂದೆ ಅಳಲು ತೋಡಿಕೊಂಡಿದ್ದಾರೆ.
2022ರ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರು ಮತ್ತು ವಿಧಾನ ಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ರಾಜ್ಯ ಸಚಿವರ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ಕಾರ್ಯಕರ್ತರು ನಮ್ಮ ಬಳಿಯೂ ಬಂದು ಸಮಸ್ಯೆ ಹೇಳುತ್ತಾರೆ, ಅದಕ್ಕೆ ನಾವು ಏನೆಂದು ಸ್ಪಂದಿಸಬೇಕು? ಮಂತ್ರಿಗಳು ಬಂದು ನಮ್ಮ ವಿರೋಧಿಗಳ ಮನೆಯಲ್ಲೇ ಊಟ ಮಾಡಿಕೊಂಡು ಹೋಗುತ್ತಾರೆ. ಹೀಗಾದರೆ ನಾವು ಏನು ಮಾಡಬೇಕು ಎಂದು ಪ್ರಶ್ನಿಸಿರುವ ಪರಾಜಿತ ಅಭ್ಯರ್ಥಿಗಳು, ಕಾಂಗ್ರೆಸ್ ಒಳಜಗಳದ ಲಾಭ ಪಡೆದುಕೊಂಡು ಚುನಾವಣೆ ಗೆಲ್ಲುವ ಬಗ್ಗೆ ತಂತ್ರ ರೂಪಿಸಬೇಕು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ | Egg episode| ಆಪರೇಷನ್ ಕಮಲ ಶಾಸಕರಿಗಷ್ಟೇ ಅಲ್ಲ, ಪುಂಡರಿಗೂ ಇದ್ಯಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ