Site icon Vistara News

Agneepath | ಅಗ್ನಿಪಥ್ ಯೋಜನೆ ಕಿಚ್ಚು: ರಾಜ್ಯದಲ್ಲೂ ಹೈ ಅಲರ್ಟ್​​ ಆದ ರೈಲ್ವೇ ಪೊಲೀಸರು

agnipath protest

ಬೆಂಗಳೂರು : ದೇಶಾದ್ಯಂತ ಭಾರೀ ಕಿಚ್ಚು ಹೊತ್ತಿಸಿರುವ ಅಗ್ನಿಫಥ್ (Agneepath) ಯೋಜನೆ ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಈಗ ಈ ಯೋಜನೆ ವಿರೋಧಿಸಿ ರಾಜ್ಯದಲ್ಲೂ ಪ್ರತಿಭಟನೆ ಉಂಟಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಮಾಹಿತಿ ರೈಲ್ವೆ ಇಲಾಖೆಗೆ ತಲುಪಿದೆ. ಹೀಗಾಗಿ ನೈರುತ್ಯ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಆರ್​ಪಿಎಫ್​ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಭದ್ರತಾ ವಿಭಾಗದ ರೈಲ್ವೆ ಅಧಿಕಾರಿಗಳು ಆಯಾ ವಿಭಾಗದ ರೈಲ್ವೇ ಪೊಲೀಸರಿಗೆ ಅಲರ್ಟ್​​ ಆಗಿರುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿ‌ನ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ, ಬೈಯ್ಯಪ್ಪನಹಳ್ಳಿಯ ವಿಶ್ವೇಶ್ವರಯ್ಯ ರೈಲು ನಿಲ್ದಾಣ, ಯಶವಂತಪುರ,‌ ಕಂಟ್ಮೋನೆಂಟ್ ರೈಲು ನಿಲ್ದಾಣ, ಹುಬ್ಬಳಿ, ಶಿವಮೊಗ್ಗ, ಮಂಗಳೂರು, ಬೆಳಗಾವಿ, ಮೈಸೂರು ಹಾಗೂ ಬಳ್ಳಾರಿ ಸೇರಿದಂತೆ ಆಯಾ ಜಿಲ್ಲೆಯ‌‌ ಪ್ರಮುಖ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಇದನ್ನು ಓದಿ| Agnipath | ಅಗ್ನಿಪಥ್ ಯೋಜನೆಯಲ್ಲಿ ಉದ್ಯೋಗ ಭದ್ರತೆಯಿಲ್ಲವೆಂದು ಹಲವೆಡೆ ಪ್ರತಿಭಟನೆ, ರೈಲಿಗೆ ಬೆಂಕಿ

ಕೇವಲ ರೈಲ್ವೇ ನಿಲ್ದಾಣಗಳಲ್ಲಿ ಮಾತ್ರವಲ್ಲದೆ ರೈಲ್ವೆ ಹಳಿಗಳ ಮೇಲೆಯೂ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ರೈಲು ತಡೆ ಮಾಡುವ ಸಾಧ್ಯತೆ ಇರುವುದರಿಂದ ಟ್ರ್ಯಾಕ್‌ಗಳ ಮೇಲೂ ಹೆಚ್ಚು ಗಸ್ತು ತಿರುಗುವಂತೆ ಪೊಲೀಸರಿಗೆ ತಿಳಿಸಲಾಗಿದೆ.

ಪ್ರತಿಭಟನಾಕಾರರು ಪ್ರಯಾಣಿಕರ ಸೋಗಿನಲ್ಲಿ ರೈಲು ನಿಲ್ದಾಣಕ್ಕೆ ಆಗಮಿಸಿ ಪ್ರತಿಭಟಿಸುವ ಸಾಧ್ಯತೆ ಇದೆ. ಕಾನೂನು ಪ್ರಕಾರ ರೈಲ್ವೆ ನಿಲ್ದಾಣದಲ್ಲಿ ಅಥವಾ ರೈಲ್ವೆ ಹಳಿಗಳ ಮೇಲೆ ಪ್ರತಿಭಟನೆ, ಧರಣಿ ಅಥವಾ ರೈಲು ತಡೆಗೆ ಅವಕಶವಿಲ್ಲ. ಹೀಗಾಗಿ ಕೆಲ ಪ್ರತಿಭಟನಾಕಾರರು ಪ್ರಯಾಣಿಕರ ಸೋಗಿನಲ್ಲಿ ರೈಲು ನಿಲ್ದಾಣಕ್ಕೆ ಬಂದು ಪ್ರತಿಭಟಿಸುವ ಸಾಧ್ಯತೆ ಇದೆ. ಹೀಗಾಗಿ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿದ್ದು, ನಿಲ್ದಾಣದಲ್ಲಿ ಅನುಮಾನಸ್ಪದ ವ್ಯಕ್ತಿಗಳನ್ನ ಕಂಡು ಬಂದರೆ ಕೂಡಲೇ ವಶಕ್ಕೆ ಪಡೆಯುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನು ಓದಿ| Agnipath protest: ʻಅಗ್ನಿʼಕುಂಡವಾದ ಏಳು ರಾಜ್ಯಗಳು; ಬಿಹಾರ ಡಿಸಿಎಂ ಮನೆಗೆ ಬೆಂಕಿ, ತೆಲಂಗಾಣದಲ್ಲಿ ಫೈರಿಂಗ್‌

Exit mobile version