Site icon Vistara News

ದಾವಣಗೆರೆಯಲ್ಲಿ ಶನಿವಾರದಿಂದ ಲಿಂಗಾಯತರ ಶಕ್ತಿ ಪ್ರದರ್ಶನ; ಸಿಎಂಗೇ ಇಲ್ಲ ಆಹ್ವಾನ!

Shamanuru Shivashankarappa and siddaramaiah

ದಾವಣಗೆರೆ: ಜಾತಿ ಜನಗಣತಿ ಸ್ವೀಕಾರಕ್ಕೆ ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ವೀರಶೈವ ಲಿಂಗಾಯತ ನಾಯಕರು ಸೆಡ್ಡು ಹೊಡೆದಿದ್ದಾರೆ. ಡಿ.23 ಮತ್ತು 24ರಂದು ನಗರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ (Veerashaiva-Lingayat conference) ಆಯೋಜಿಸಿದ್ದು, ಈ ಮೂಲಕ ಲಿಂಗಾಯತರ ಶಕ್ತಿ ಪ್ರದರ್ಶನ ಮಾಡಲು ಲಿಂಗಾಯತ ಪಡೆ ನಿರ್ಧರಿಸಿದೆ.

ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು (Caste Census Report) ಯಾವ ಕಾರಣಕ್ಕೂ ಬಿಡುಗಡೆ ಮಾಡಬಾರದು ಎಂದು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಕಾಂಗ್ರೆಸ್‌ ಶಾಸಕ ಶಿವಶಂಕರಪ್ಪ ಅವರು, ಈ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯನವರಿಗೂ ಆಹ್ವಾನ ನೀಡಿಲ್ಲ. I ಸಮಾವೇಶಕ್ಕೆ 2 ರಿಂದ 3 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ | Caste Census : ಸಿಎಂ ಅಹಿಂದ ಸಮಾವೇಶಕ್ಕೆ ಶಾಮನೂರು ಲಿಂಗಾಯತ ಸಮಾವೇಶ ಠಕ್ಕರ್

ಇನ್ನು ಈ ಸಮಾವೇಶಕ್ಕೆ ಸಮುದಾಯದ 54 ಶಾಸಕರು ಪಕ್ಷತೀತವಾಗಿ ಬೆಂಬಲ ಸೂಚಿಸಿದ್ದು, ಸುಮಾರು 3000 ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಸೋರಿಕೆಯಾದ ಜಾತಿ ಗಣತಿ ವರದಿ ಪ್ರಕಾರ, ಲಿಂಗಾಯತರ ಜನಸಂಖ್ಯೆ ಇಳಿಕೆಯಾಗಿದೆ ಎಂಬುವುದು ಸಮುದಾಯದ ಮುನಿಸಿಗೆ ಪ್ರಮುಖ ಕಾರಣವಾಗಿದೆ. ಈ ವಿಚಾರ ಗೊತ್ತಿದ್ದರೂ ವರದಿ ಜಾರಿ ಮಾಡಲು ಮುಂದಾಗಿರುವುದರಿಂದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನೆ ಮಾಡಲು ಸಮಾವೇಶ ಆಯೋಜನೆಯಾಗುತ್ತಿದೆ ಎನ್ನಲಾಗಿದೆ.

ಕಾಂತರಾಜು ವರದಿಯನ್ನು ಬಿಡುಗಡೆ ಮಾಡಬಾರದು, ಹೊಸದಾಗಿ ಜಾತಿಗಣತಿ ಮಾಡಬೇಕು ಎಂದು ವೀರಶೈವ ಲಿಂಗಾಯತ ಶಾಸಕರ ನಿಯೋಗ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತ್ತು. ನಾವು ಜಾತಿ ಜನಗಣತಿಯ ವಿರೋಧಿಗಳಲ್ಲ ಎಂದು ಸಿಎಂ ಎದುರು ಸ್ಪಷ್ಟಪಡಿಸಿದ್ದ ನಿಯೋಗ, ಕಳೆದ 8 ವರ್ಷಗಳ ಹಿಂದೆ ನಡೆಸಲಾದ ಈ ಸಾಮಾಜಿಕ ಆರ್ಥಿಕ ಸಮೀಕ್ಷೆ ಹಲವು ವೈರುಧ್ಯ ಮತ್ತು ಲೋಪಗಳಿಂದ ಕೂಡಿದೆ. ಇದನ್ನು ಸರಿಪಡಿಸುವ ಅಗತ್ಯವಿದೆ ಎಂಬುದು ನಮ್ಮ ಅಭಿಪ್ರಾಯ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಮನವಿ ಮಾಡಿತ್ತು.

ಈ ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ಮಾಹಿತಿಯಲ್ಲೇ ದೋಷವಿದೆ ಎಂಬುದು ನಮ್ಮ ಮಹಾಸಭಾದ ಒಟ್ಟು ಅಭಿಪ್ರಾಯವಾಗಿದೆ. ಈಗಾಗಲೇ ರಾಜ್ಯದಲ್ಲಿ ನಡೆದಿರುವ ಸಾಮಾಜಿಕ ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ಹಳೆಯದಾಗಿದೆ. ಇದನ್ನು ಯಥಾವತ್ ಅಂಗೀಕರಿಸುವುದು ಸೂಕ್ತವಾಗಿರುವುದಿಲ್ಲ. ಈ ನಿಟ್ಟಿನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಸೇರಿಸಿ ಸಂಪೂರ್ಣ ವೈಜ್ಞಾನಿಕವಾಗಿ ಹೊಸದಾಗಿ ಜಾತಿ ಜನಗಣತಿ ನಡೆಸಿ ವಾಸ್ತವಾಂಶ ಆಧಾರಿತವಾಗಿ ಅಂಕಿ-ಅಂಶಗಳನ್ನು ದಾಖಲಿಸಿದರೆ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ನಿಯೋಗ ಕೋರಿತ್ತು.

ಇದನ್ನೂ ಓದಿ | Hijab Row‌: ಮತ್ತೆ ವಿವಾದದ ಕಿಡಿ ಹಚ್ಚಿದ ಹಿಜಾಬ್; ಸಿಎಂ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ

ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನವಿದೆಯೇ ಎಂಬ ಪ್ರಶ್ನೆಗೆ ಇತ್ತೀಚೆಗೆ ಉತ್ತರಿಸಿದ್ದ ಶಾಮನೂರು ಶಿವಶಂಕರಪ್ಪ ಅವರು, ಇದು ವೀರಶೈವ ಲಿಂಗಾಯತರ ಸಮಾವೇಶ, ಬೇರೆಯರಿಗೆಲ್ಲ ನಾವು ಕರೆಯೊಲ್ಲ ಎನ್ನುವ ಮೂಲಕ ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. 2 -3 ಲಕ್ಷ ಜನ ಸೇರಲಿದ್ದಾರೆ, ರಾಜ್ಯ, ನೆರೆರಾಜ್ಯಗಳಿಂದಲೂ ಸಮುದಾಯದ ಜನರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದರು.

Exit mobile version