ಬೆಂಗಳೂರು : ಕಳಪೆ ಔಷಧ ಪೂರೈಸಿ ಗುತ್ತಿಗೆ ನಿಯಮ ಉಲ್ಲಂಘಿಸಿ ಕಪ್ಪು ಪಟ್ಟಿಗೆ ಸೇರಿದ್ದ ಕಂಪನಿಗೆ ಔಷಧ ಪೂರೈಕೆ ಟೆಂಡರ್ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ತಮಿಳುನಾಡು ಮೂಲದ ಶರವಣ ಶಿವಕುಮಾರ್ ನೇರವಾಗಿ ಸಿಎಂಗೆ ದೂರು ಸಲ್ಲಿಸಿದ್ದಾರೆ. ಕೋಟ್ಯಂತರ ರೂಪಾಯಿ ವಹಿವಾಟು ಇಲ್ಲದ ಕಂಪನಿಗಳಿಗೆ ಟೆಂಡರ್ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಚಿವ ಸುಧಾಕರ್ ಸೇರಿದಂತೆ ಇಲಾಖೆಯ ಅಧಿಕಾರಿಗಳ ಕೈವಾಡದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ | ಜಾನುವಾರು ಅಕ್ರಮ ಸಾಗಣೆ; ಮೂವರು ಆರೋಪಿಗಳು ಪೊಲೀಸರ ವಶಕ್ಕೆ
ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿ ಬ್ಲ್ಯಾಕ್ ಲಿಸ್ಟ್‌ಗೆ ಸೇರಿರುವ ಕಂಪನಿಗಳಿಗೆ ಟೆಂಡರ್ ನೀಡಲಾಗುತ್ತಿದ್ದು, ಲೋಕಾಯುಕ್ತಕ್ಕೂ ದೂರು ಸಲ್ಲಿಕೆ ಮಾಡಿರುವ ಬಗ್ಗೆ ಸಿಎಂಗೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.
ಇದನ್ನೂ ಓದಿ | ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ; ದಾಖಲೆ ಬಿಡುಗಡೆ ಮಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್