ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿ ಐಜಿಪಿ) ಅಲೋಕ್ ಮೋಹನ್ (Alok Mohan) ಅವರನ್ನು ನೇಮಿಸಲಾಗಿದೆ. ಡಿಜಿಪಿಯಾಗಿದ್ದ ಪ್ರವೀಣ್ ಸೂದ್ (Praveen Sood) ಅವರನ್ನು ಸಿಬಿಐ ನಿರ್ದೇಶಕರನ್ನಾಗಿ (CBI director) ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಖಾಲಿಯಾದ ಹುದ್ದೆಗೆ ಅಲೋಕ್ ಮೋಹನ್ ಅವರನ್ನು ನೇಮಿಸಲಾಗಿದೆ.
ಕೇಂದ್ರೀಯ ತನಿಖಾ ಮಂಡಳಿಯ ನಿರ್ದೇಶಕರಾಗಿ ನೇಮಕಗೊಂಡಿರುವ ಪ್ರವೀಣ್ ಸೂದ್ ಅವರನ್ನು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ವಿಭಾಗ ರಾಜ್ಯ ಸೇವೆಯಿಂದ ಮೇ 22ರಿಂದ ಅನ್ವಯವಾಗುವಂತೆ ತೆರವುಗೊಳಿಸಿದೆ. ಹೀಗಾಗಿ ಈ ಹುದ್ದೆಗೆ ಡಾ. ಅಲೋಕ್ ಮೋಹನ್ ಅವರನ್ನು ನೇಮಿಸಲಾಗಿದೆ.
ಬಿಹಾರ ಮೂಲದ ಡಾ. ಅಲೋಕ್ ಮೋಹನ್, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಸೇವಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಯ ಮೊದಲ ಆಯ್ಕೆಯಾಗಿದ್ದರು. ಪ್ರಸಕ್ತ ಅವರು ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದರು.
ಅಲೋಕ್ ಮೋಹನ್ ಅವರು ನಡೆದು ಬಂದ ದಾರಿ
ವೃತ್ತಿಜೀವನದ ಮೂರು ದಶಕಗಳಿಗೂ ಹೆಚ್ಚು ಅವಧಿಯಲ್ಲಿ, ಅವರು ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಸವಾಲಿನ ಮತ್ತು ನಿರ್ಣಾಯಕ ಕಾರ್ಯಯೋಜನೆಗಳಲ್ಲಿ ಉನ್ನತ ನಿರ್ವಹಣಾ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಅವರು ಮೂರು ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ: ರೂರ್ಕಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಯಿಂದ ‘ಆನರ್ಸ್’ ಜೊತೆಗೆ ವಿಜ್ಞಾನದ ಮಾಸ್ಟರ್ (M.Sc.); ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಫಿಲಾಸಫಿ (M. ಫಿಲ್) ಮತ್ತು ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್, ಹಾರ್ವರ್ಡ್ ವಿಶ್ವವಿದ್ಯಾಲಯ, USA ಮತ್ತು ಲೀ ಕ್ವಾನ್ ಯೂ (LKY) ಸ್ಕೂಲ್ ಆಫ್ ಪಬ್ಲಿಕ್ ಪಾಲಿಸಿ, ಸಿಂಗಾಪುರ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನಿರ್ವಹಣೆಯಲ್ಲಿ ಮಾಸ್ಟರ್ (MPM). ಅವರು ತಮ್ಮ ಎಂಪಿಎಂ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ‘ಲೀ ಕುವಾನ್ ಯೂ ಫೆಲೋಶಿಪ್’ ಅನ್ನು ಪಡೆದಿದ್ದಾರೆ.