Amit shah | ಹಳೇ ಮೈಸೂರು ಭಾಗದಲ್ಲಿ 30ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು: ಬಿಜೆಪಿ ನಾಯಕರಿಗೆ ಅಮಿತ್‌ ಶಾ ಸೂಚನೆ - Vistara News

ಕರ್ನಾಟಕ

Amit shah | ಹಳೇ ಮೈಸೂರು ಭಾಗದಲ್ಲಿ 30ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು: ಬಿಜೆಪಿ ನಾಯಕರಿಗೆ ಅಮಿತ್‌ ಶಾ ಸೂಚನೆ

Amit shah | ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸಬೇಕು. ನನಗೆ ಫಲಿತಾಂಶ ಅಷ್ಟೇ ಮುಖ್ಯ. ಮುಂದಿನ ಭೇಟಿಯಲ್ಲಿ ಬರೀ ಫಲಿತಾಂಶವನ್ನಷ್ಟೇ ಕೇಳುತ್ತೇನೆ ಎಂದು ನಾಯಕರಿಗೆ ಕೇಂದ್ರ ಸಚಿವ ಅಮಿತ್‌ ಶಾ ಖಡಕ್‌ ಸೂಚನೆ ನೀಡಿದ್ದಾರೆ.

VISTARANEWS.COM


on

Amit shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆ ಮಾಡುವ ಕುರಿತು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ (Amit shah) ನೇತೃತ್ವದಲ್ಲಿ ಶುಕ್ರವಾರ ಬಿಜೆಪಿ ನಾಯಕರ ಸಭೆ ನಡೆಯಿತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಬಿಜೆಪಿ ನಾಯಕರು ಚರ್ಚಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಮಾತನಾಡಿ, ಸರ್ಕಾರದ ಕಾರ್ಯಕ್ರಮಗಳು ಇನ್ನಷ್ಟು ಶೀಘ್ರವಾಗಿ ಜಾರಿಯಾಗಬೇಕು. ಒಂದು ತಿಂಗಳ ಒಳಗೆ ಎಲ್ಲವೂ ಸರಿ ಹೋಗಬೇಕು. ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸಬೇಕು. ಪಕ್ಷ ಮತ್ತು ಸರ್ಕಾರ ಸ್ಟ್ರೈಟ್ ರೂಟ್‌ನಲ್ಲಿ ಹೋಗಬೇಕು. ನನಗೆ ಫಲಿತಾಂಶ ಅಷ್ಟೇ ಮುಖ್ಯ. ಮುಂದಿನ ಭೇಟಿಯಲ್ಲಿ ಬರೀ ಫಲಿತಾಂಶವನ್ನಷ್ಟೇ ಕೇಳುತ್ತೇನೆ ಎಂದು ನಾಯಕರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಕಿತ್ತೂರು ಕರ್ನಾಟಕ, ಹೈದರಾಬಾದ್ ಕರ್ನಾಟಕ, ಬೆಂಗಳೂರು ಹಾಗೂ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತದೆ. ಆದರೆ ಹಳೇ ಮೈಸೂರು ಭಾಗದಲ್ಲಿ ಗೆಲ್ಲಲು ಆಗುತ್ತಿಲ್ಲ. ಈ ಭಾಗದ 9 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ 13 ಸ್ಥಾನ ಗೆದ್ದಿದ್ದೇವೆ. ಅದನ್ನು ೩೦ ಸ್ಥಾನ ದಾಟಿಸುವ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಬೇಕು. ಈ ಭಾಗದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ನಮ್ಮ ಮೊದಲ ವಿರೋಧಿ ಜೆಡಿಎಸ್ ಆಗಿದ್ದು, ಬಳಿಕ ಕಾಂಗ್ರೆಸ್ ಆಗಿದೆ. ಹೀಗಾಗಿ ಹೊಂದಾಣಿಕೆ ರಾಜಕೀಯ ಬಿಟ್ಟು, ಪಕ್ಷ ಕಟ್ಟಬೇಕು ಎಂದು ತಿಳಿಸಿದ್ದಾರೆ.

ರೌಡಿಗಳ ಪಕ್ಷ ಸೇರ್ಪಡೆ ಬಗ್ಗೆ ಪ್ರಸ್ತಾಪಿಸಿ, ಪಕ್ಷ ಸೇರ್ಪಡೆ ವೇಳೆ ಪರಿಶೀಲನೆ ಮಾಡಿ ಕಾರ್ಯಕರ್ತರು, ನಾಯಕರನ್ನು ಸೇರಿಸಿಕೊಳ್ಳಬೇಕು. ಇನ್ನು ಮುಂದೆ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿ, ಜಿಲ್ಲಾ ಘಟಕಗಳ ಅಧ್ಯಕ್ಷರಿಂದ ಕ್ಷೇತ್ರವಾರು ರಾಜಕೀಯ ಚಿತ್ರಣದ ವರದಿ ಪಡೆದುಕೊಂಡರು.

ಒಳಮೈತ್ರಿಗೆ ಬ್ರೇಕ್ ಹಾಕಿ, ಸ್ವಾಭಿಮಾನದ ಮೇಲೆ ಪಕ್ಷ ಕಟ್ಟಲು ಸೂಚನೆ ನೀಡಬೇಕು ಎಂದು ಕೆಲ ನಾಯಕರು ಸಭೆಯಲ್ಲಿ ಪ್ರಸ್ತಾಪ ಇಟ್ಟಿದ್ದಾರೆ. ನಮಗೆ ಕಾಂಗ್ರೆಸ್‌ನಷ್ಟೇ ಜೆಡಿಎಸ್ ಕೂಡ ವಿರೋಧಿಯಾಗಿದೆ. ಹೀಗಾಗಿ ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳಬೇಕು. ಜೆಡಿಎಸ್ ನಾಯಕರ ಬಗ್ಗೆ ಸಾಫ್ಟ್ ಕರ್ನರ್ ಬೇಡ. ಈ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಅಮಿತ್ ಶಾಗೆ ಕೆಲ ನಾಯಕರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಅಮಿತ್‌ ಶಾ, ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸಬೇಕು. ಮೊದಲು ಬೂತ್ ಮಟ್ಟದಲ್ಲಿ ಜನರನ್ನು ತಲುಪಬೇಕು ಎಂದು ಸೂಚಿಸಿದರು.

ಕಂದಾಯ ಸಚಿವ ಆರ್‌.ಅಶೋಕ್ ಮಾತನಾಡಿ, ಅಮಿತ್ ಶಾ ಬಂದರೆ ಚುನಾವಣಾ ಕಾವು ಜಾಸ್ತಿ ಆಗುತ್ತದೆ. ಮೂರು ಗಂಟೆಗಳ ಕಾಲ ಹಳೆ ಮೈಸೂರು ಭಾಗದ ಬಗ್ಗೆ ಚರ್ಚೆ ಮಾಡಿದ್ದಾರೆ. ಶಾಸಕರು ಮತ್ತು ನಾಯಕರ ಬಳಿ ಮಾಹಿತಿ ಪಡೆದಿದ್ದಾರೆ. ಮುಂದಿನ ತಿಂಗಳು ಅಮಿತ್‌ ಶಾ ಎರಡು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಒಂದು ದಿನ ಹಳೇ ಮೈಸೂರು ಭಾಗ, ಮತ್ತೊಂದು ದಿನ ಉತ್ತರ ಕರ್ನಾಟಕದ ಕಡೆ ಪ್ರವಾಸ ಮಾಡುತ್ತಾರೆ ಎಂದು ತಿಳಿಸಿದರು.

ಹೊಂದಾಣಿಕೆ ಪಾಲಿಟಿಕ್ಸ್ ಬೇಡ. ಹೊಂದಾಣಿಕೆ ಮಾಡಿಕೊಂಡರೆ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದಂತಾಗುತ್ತದೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ಗೂ ನಮಗೂ ಸಂಬಂಧವಿಲ್ಲ. ನಮ್ಮ ಜತೆ ಸಂಬಂಧ ಇದೆ ಅಂತ ಜೆಡಿಎಸ್ ಲಾಭ ಪಡೆಯಬಹುದು. ಇದರ ಬಗ್ಗೆ ನಿಮಗೆ ಸ್ಪಷ್ಟತೆ ಇರಲಿ. ಹಳೆ ಮೈಸೂರು ಭಾಗದಲ್ಲಿ 35ಕ್ಕೂ ಅಧಿಕ ಸ್ಥಾನ ಗೆಲ್ಲಬೇಕು. ಬೆಂಗಳೂರು ಭಾಗದಲ್ಲಿ 20 ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.

ಸಿ.ಟಿ.ರವಿ ಮಾತನಾಡಿ, ಬೆಂಗಳೂರು ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿಲ್ಲ. ಹೀಗಾಗಿ ಅಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಟಾಸ್ಕ್ ನಮ್ಮ ಮುಂದಿದೆ. ಗೆಲ್ಲುವುದಷ್ಟೇ ಮುಖ್ಯ, ಗೆಲುವಿಗಾಗಿ ತಂತ್ರಗಾರಿಕೆ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ | Congress Convention | ಭ್ರಷ್ಟಾಚಾರದಲ್ಲಿ ಮುಳುಗೇಳುತ್ತಿರುವ ಬಿಜೆಪಿ ಸರ್ಕಾರ ಕಿತ್ತೆಸೆಯಿರಿ: ಡಿ.ಕೆ.ಶಿವಕುಮಾರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

Prajwal Revanna Case: ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಹೀಗಾಗಿ ತನಿಖಾಧಿಕಾರಿಗಳ ಮನವಿಯನ್ನು ಕೋರ್ಟ್‌ ಪುರಸ್ಕರಿಸಿ, ಮಾಜಿ ಸಂಸದನನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಆತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಮತ್ತೆ 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಮನವಿಯನ್ನು ಪುರಸ್ಕರಿಸಿರುವ ಕೋರ್ಟ್, ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಸೂಚಿಸಿದೆ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಇದೀಗ ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲಿನಲ್ಲಿ ಎರಡು ದಿನ ಕಾಲ ಕಳೆದಿದ್ದರು. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು. ಮಂಗಳವಾರ ರಾತ್ರಿ ಜೈಲಿನಲ್ಲಿ ನೀಡಿದ್ದ ಮುದ್ದೆ, ಚಪಾತಿ, ಅನ್ನ, ಸಾಂಬರ್‌, ಊಟ ಮಾಡಿದ್ದ ಪ್ರಜ್ವಲ್, ಬೇಗನೇ ನಿದ್ರೆಗೆ ಜಾರಿದ್ದರು. ಇಂದು ಬೆಳಗ್ಗೆ 5 ಗಂಟೆಗೆ ನಿದ್ದೆಯಿಂದ ಎದ್ದು ವಾಕಿಂಗ್ ಮಾಡಿದ್ದರು.

ಕೆಲ ಹೊತ್ತು ವಾಕಿಂಗ್ ಮಾಡಿ ಜೈಲ್ ಸಿಬ್ಬಂದಿ ಕೊಟ್ಟ ಕಾಫಿ ಕುಡಿದ ಬಳಿಕ ದಿನ ಪತ್ರಿಕೆಗಳನ್ನು ಓದಿ ಹೊರಗಿನ ವಿದ್ಯಮಾನಗಳ ಕಡೆ ಕಣ್ಣಾಡಿಸಿದರು. ಮತ್ತೆ ಜೈಲಿನ ಮೆನುವಿನಂತೆ ಪ್ರಜ್ವಲ್‌ಗೆ ಅವಲಕ್ಕಿ ಉಪ್ಪಿಟ್ಟು ನೀಡಲಾಗಿದೆ. ಹೊರಗೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದ ಮಾಜಿ ಸಂಸದನಿಗೆ ಜೈಲುವಾಸದಲ್ಲಿ ಚಡಪಡಿಸುತ್ತಿರರುವುದು ಕಂಡುಬಂದಿದೆ.

ಇದನ್ನೂ ಓದಿ | Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಜಾಮೀನು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ತೆಲುಗು ನಟಿ ಹೇಮಾಗೆ (Telugu actress Hema) ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ತೆಲುಗು ನಟಿ ಹೇಮಾಗೆ ಬೇಲ್ ಸಿಕ್ಕಿದೂ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಇದನ್ನೂ ಓದಿ | Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

Continue Reading

ಕರ್ನಾಟಕ

Rave Party: ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಜಾಮೀನು

Rave Party: ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ ಎಂದು ನಟಿ ಪರ ವಕೀಲ ವಾದ ಮಂಡಿಸಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಆಗಿದೆ.

VISTARANEWS.COM


on

Rave Party
Koo

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ತೆಲುಗು ನಟಿ ಹೇಮಾಗೆ (Telugu actress Hema) ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ತೆಲುಗು ನಟಿ ಹೇಮಾಗೆ ಬೇಲ್ ಸಿಕ್ಕಿದೂ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಇದನ್ನೂ ಓದಿ | Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ಲಾರಿಗೆ ತಲೆಯನ್ನು ಬಡಿದು ಸಿನಿಮಾ ಶೈಲಿಯಲ್ಲೇ ರೇಣುಕಾ ಸ್ವಾಮಿ ಕೊಲೆ ಮಾಡಿದ್ದ ದರ್ಶನ್ ಗ್ಯಾಂಗ್​!

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು.

Continue Reading

ಪ್ರಮುಖ ಸುದ್ದಿ

Actor Darshan: ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು; ದರ್ಶನ್ ವಿರುದ್ಧ ನಟಿ ರಮ್ಯಾ ಮತ್ತೊಂದು ಟ್ವೀಟ್‌!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಮಂಗಳವಾರ ರಿ ಟ್ವೀಟ್ ಮಾಡಿದ್ದ ಸ್ಯಾಂಡಲ್ ವುಡ್ ನಟಿ ರಮ್ಯಾ, ಇದೀಗ ಮತ್ತೊಂದು ಪೋಸ್ಟ್ ಹಂಚಿಕೊಂಡು, ನಟ ದರ್ಶನ್‌ ಸೇರಿ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯಗಳು ಎಲ್ಲೆಡೆ ಕೇಳಿಬರುತ್ತಿವೆ. ಈ ನಡುವೆ ನಟ ದರ್ಶನ್‌ಗೆ (Actor Darshan) ಜೀವಾವಧಿ ಶಿಕ್ಷೆಯಾಗಲಿ ಎಂಬ ಪೋಸ್ಟ್‌ನ ರಿ ಟ್ವೀಟ್‌ ಮಾಡಿದ್ದ ನಟಿ ರಮ್ಯಾ ಇದೀಗ, ಮತ್ತೊಂದು ಟ್ವೀಟ್‌ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕುಟುಂಬದ ಪರ ನಿಂತ ನಟಿ, ಪ್ರಕರಣದಲ್ಲೇ ಯಾರೇ ತಪ್ಪಿತಸ್ಥರಾದರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಮಂಗಳವಾರ ರಿ ಟ್ವೀಟ್ ಮಾಡಿದ್ದ ಸ್ಯಾಂಡಲ್ ವುಡ್ ನಟಿ ರಮ್ಯಾ, ಇದೀಗ ಮತ್ತೊಂದು ಪೋಸ್ಟ್ ರಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ರೇಣುಕಾ ಸ್ವಾಮಿ ತಂದೆ ದು:ಖದಲ್ಲಿರುವ ವಿಡಿಯೊವನ್ನು ಅಕ್ಷಯ್‌ ಅಕ್ಕಿ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡು, ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನು ನಟಿ ರಮ್ಯಾ ರಿ ಟ್ವೀಟ್‌ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಸಂದೇಶವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ನೆನ್ನೆ ಹಂಚಿಕೊಂಡಿದ್ದರು. ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು. ಎಂಬ ಪೋಸ್ಟ್‌ ಅನ್ನು ಕರ್ನಾಟಕ ಬಾಕ್ಸ್‌ ಆಫೀಸ್‌ ಖಾತೆಯಲ್ಲಿ ಟ್ವೀಟ್‌ ಮಾಡಲಾಗಿತ್ತು. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇದ್ದ ಪೋಸ್ಟ್‌ ಅನ್ನು ರಮ್ಯಾ ರಿ ಟ್ವೀಟ್‌ ಮಾಡಿದ್ದರು.

ಇದನ್ನು ಓದಿ | Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದರು. ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ರಿ ಟ್ವೀಟ್‌ ಮಾಡಿ ಪರೋಕ್ಷವಾಗಿ ದರ್ಶನ್‌ ವಿರುದ್ಧ ಕಠಿಣ ಕ್ರಮವಾಗಲಿ ಎಂದು ಹೇಳಿದ್ದಾರೆ.

Continue Reading

ಮಳೆ

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

Rain News : ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರೆ ಇತ್ತ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನಲ್ಲಿ ಹಲವೆಡೆ ಬುಧವಾರ (Karnataka Weather Forecast) ಅಬ್ಬರಿಸಲಿದೆ. ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಹಲವೆಡೆ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಬೆಂಗಳೂರಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಯೆಲ್ಲೋ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು

ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಪ್ರಮುಖ ಸುದ್ದಿ6 mins ago

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

Paris Olympics 2024
ಕ್ರೀಡೆ6 mins ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಜತೆಯಾಗಿ ಆಡಲಿದ್ದಾರೆ ನಡಾಲ್-ಅಲ್ಕರಾಜ್‌

Munnar Tour
ಲೈಫ್‌ಸ್ಟೈಲ್20 mins ago

Munnar Tour: ಮುನ್ನಾರ್‌ನ ಈ 5 ರಮಣೀಯ ಸ್ಥಳಗಳನ್ನು ನೋಡಲೇಬೇಕು!

Naseeruddin Shah
ರಾಜಕೀಯ27 mins ago

Naseeruddin Shah: ಮೋದಿ ಮುಸ್ಲಿಮರ ಟೋಪಿ ಧರಿಸಬೇಕೆಂದ ನಾಸಿರುದ್ದೀನ್ ಶಾ! ನಿಮ್ಮ ಅಭಿಪ್ರಾಯವೇನು?

New Chief Ministers
ದೇಶ42 mins ago

ಒಡಿಶಾಗೆ ಬಿಜೆಪಿಯ ಮೋಹನ್‌ ಚರಣ್‌ ಮಾಝಿ, ಅರುಣಾಚಲಕ್ಕೆ ಪೆಮಾ ಖಂಡು ಸಿಎಂ; ಖಂಡು ನಾಳೆ ಪದಗ್ರಹಣ

VIP Security
Latest47 mins ago

VIP Security: ಬ್ಲ್ಯಾಕ್‌ ಕ್ಯಾಟ್‌ ಕಮಾಂಡೊಗಳಿಗಿನ್ನು ವಿಐಪಿಗಳನ್ನು ಕಾಯೋ ಕೆಲಸ ಇಲ್ಲ!

IPL 2025
ಕ್ರೀಡೆ51 mins ago

IPL 2025: ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯ ಏರಿಕೆ; ಕಪ್​ ಗೆಲ್ಲದಿದ್ದರೂ ಆರ್​ಸಿಬಿ ಪ್ರಾಬಲ್ಯ

Rave Party
ಕರ್ನಾಟಕ52 mins ago

Rave Party: ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಜಾಮೀನು

Actor Darshan
ಪ್ರಮುಖ ಸುದ್ದಿ2 hours ago

Actor Darshan: ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು; ದರ್ಶನ್ ವಿರುದ್ಧ ನಟಿ ರಮ್ಯಾ ಮತ್ತೊಂದು ಟ್ವೀಟ್‌!

Tamilisai Soundararajan
ದೇಶ2 hours ago

Tamilisai Soundararajan: ವೇದಿಕೆ ಮೇಲೆಯೇ ತಮಿಳ್‌ಸಾಯಿಗೆ ಅಮಿತ್‌ ಶಾ ಭರ್ಜರಿ ಕ್ಲಾಸ್;‌ ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌