Site icon Vistara News

Amit shah | ಬೆಂಗಳೂರಿನ ಆದಿಚುಂಚನಗಿರಿ ಮಠಕ್ಕೆ ಅಮಿತ್‌ ಶಾ ಭೇಟಿ; ಸಿಎಂ ಬೊಮ್ಮಾಯಿ ಸೇರಿ ಹಲವು ಸಚಿವರು ಸಾಥ್

Amit shah

ಬೆಂಗಳೂರು: ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು, ಸೌಹಾರ್ದ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಆರಗ ಜ್ಞಾನೇಂದ್ರ, ಎಸ್‌.ಟಿ.ಸೋಮಶೇಖರ್, ಆರ್‌.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಅಮಿತ್ ಶಾಗೆ (Amit shah) ಸಾಥ್ ನೀಡಿದರು.

ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಅಮಿತ್‌ ಶಾ ಸನ್ಮಾನಿಸಿದರು. ನಂತರ ಸ್ವಾಮೀಜಿ, ಕೇಂದ್ರ ಸಚಿವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಮಾಡಿದರು. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಬಿಜೆಪಿ ಪಕ್ಷದ ಸಭೆಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಅವರು ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿಯ ಬೂತ್‌ ವಿಜಯಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ | Amit Shah | ಬಿಜೆಪಿಯವರು ಭಾರತ್‌ ಮಾತಾಕಿ ಜೈ ಅಂದ್ರೆ, ಕಾಂಗ್ರೆಸ್‌ನವರು ಸೋನಿಯಾ ಮಾತಾಕಿ ಜೈ ಅಂತಾರೆ: ಸಿಎಂ ಬೊಮ್ಮಾಯಿ

Exit mobile version