Site icon Vistara News

Amit Shah | ಜನರಿಗೆ ನ್ಯಾಯ ಕೊಡದ ಜೆಡಿಎಸ್-ಕಾಂಗ್ರೆಸ್: ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ ಎಂದ ಸಿಎಂ ಬಸವರಾಜ ಬೊಮ್ಮಾಯಿ

bdget-session-budget session will start from february tenth

ಬೆಂಗಳೂರು: ಕರ್ನಾಟಕದೆಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023ರಲ್ಲಿ ಅದು ಸುನಾಮಿಯಾಗಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಡ್ಯದ ಎಂ.ಸಿ. ರಸ್ತೆ, ಪ್ರವಾಸಿ ಮಂದಿರ ಹತ್ತಿರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಬಿಜೆಪಿ “ಜನಸಂಕಲ್ಪ ಸಮಾವೇಶ”ದಲ್ಲಿ ಮಾತನಾಡಿದರು.

ಮೋದಿ ಅವರ ನೇತೃತ್ವದಲ್ಲಿ ಭಾರತವು ವಿಶ್ವಮಾನ್ಯ ರಾಷ್ಟ್ರವಾಗಿದೆ. ಭಾರತದ ಕಾಶ್ಮೀರದ ಸಮಸ್ಯೆ, ನಕ್ಸಲೈಟ್ ಸಮಸ್ಯೆ ಸೇರಿ ಎಲ್ಲ ಸಮಸ್ಯೆಗಳನ್ನೂ ಅಮಿತ್ ಶಾ ಅವರು ಬಗೆಹರಿಸಿದ್ದಾರೆ. ಅಮಿತ್ ಶಾ ಅವರ ನೇತೃತ್ವದಲ್ಲಿ ಚುನಾವಣಾ ತಂತ್ರಗಾರಿಕೆಗೆ ಸದಾ ಯಶಸ್ಸು ಸಿಕ್ಕಿದೆ. 2023ರ ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ.

ಕಾಂಗ್ರೆಸ್- ಜೆಡಿಎಸ್ ಈ ಭಾಗಕ್ಕೆ ನ್ಯಾಯ ಕೊಟ್ಟಿಲ್ಲ. ಜನರು ಈ ಪಕ್ಷಗಳ ಬಗ್ಗೆ ಬೇಸತ್ತಿದ್ದಾರೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಪಡೆಯಲಿದೆ. ಈ ಭಾಗದ ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ಕಾಯಕಲ್ಪ ನೀಡಲಿದೆ. ಮೈಶುಗರ್ ಕಾರ್ಖಾನೆಯನ್ನು ಸರ್ಕಾರವೇ ಮತ್ತೆ ಪ್ರಾರಂಭಿಸಿದೆ. ರೈತರು, ಕಬ್ಬು ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬಿದ್ದೇವೆ. ಕಾರ್ಖಾನೆಯಲ್ಲಿ ಮುಂದೆ ಎಥೆನಾಲ್ ತೆಗೆಯಲಿದ್ದೇವೆ.

ಎಥೆನಾಲ್ ಇಲ್ಲದ ಕಾರ್ಖಾನೆಗಳಲ್ಲೂ ಕಬ್ಬು ಪ್ರತಿ ಟನ್‍ಗೆ 100 ರೂ. ಹೆಚ್ಚಳ ಮಾಡುವ ಆದೇಶ ಹೊರಡಿಸಿದ್ದೇನೆ. ಯೋಗ್ಯ ಬೆಲೆ ಕೊಟ್ಟು ಬಂದಿದ್ದೇನೆ. ಮಾತು ಕೊಟ್ಟಂತೆ ನಡೆಯುವ ಸರಕಾರ ನಮ್ಮದು. ಇಡೀ ಕರ್ನಾಟಕದ ಅಭಿವೃದ್ಧಿ ನಮ್ಮ ಸಂಕಲ್ಪ ಎಂದು ತಿಳಿಸಿದರು.

ರೈತ ವಿದ್ಯಾನಿಧಿಯಿಂದ 10 ಲಕ್ಷ ಕುಟುಂಬಗಳಿಗೆ ಪ್ರಯೋಜನವಾಗಿದೆ. ಗ್ರಾಮೀಣ ಕರಕುಶಲಕರ್ಮಿಗಳಿಗೆ ನೆರವಾಗಿದ್ದೇವೆ. ಸ್ತ್ರೀಶಕ್ತಿ ಸಂಘಗಳಿಗೆ ಸ್ವಾವಲಂಬನೆಗೆ ನೆರವು ಕೊಟ್ಟಿದ್ದೇವೆ. ಕಾಂಗ್ರೆಸ್ಸಿಗರ ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಲಭಿಸುವುದಿಲ್ಲ.

ಮೀಸಲಾತಿ ಹೆಚ್ಚಿಸಿ ನಾವು ಸಾಮಾಜಿಕ ನ್ಯಾಯ ಕೊಟ್ಟಿದ್ದೇವೆ. ಸಕಾರಾತ್ಮಕ, ಸಾಮರಸ್ಯ, ಅಭಿವೃದ್ಧಿಗಾಗಿ ನಾವು ಶ್ರಮಿಸಿದ್ದೇವೆ. ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಅಭಿವೃದ್ಧಿಶೂನ್ಯ ಕಪ್ಪು ಬಿಳುಪು ಸಿನಿಮಾ ನೋಡಿದ್ದೀರಿ ಎಂದ ಅವರು, ಬಿಜೆಪಿ ಈ ಭಾಗದ ಕರ್ನಾಟಕವನ್ನು ಸುವರ್ಣ ಕರ್ನಾಟಕ ಮಾಡಲಿದೆ. ನಮಗೆ ಆಶೀರ್ವಾದ ಮಾಡಿ. ನಿಮ್ಮ ವಿಶ್ವಾಸಕ್ಕೆ ಚ್ಯುತಿ ಆಗದಂತೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಮಾತನಾಡಿ, ಮಂಡ್ಯದಲ್ಲಿ ಪರಿವರ್ತನೆ ಆಗಿದೆ. ಮುಂದಿನ ಚುನಾವಣೆಯಲ್ಲಿ 7ಕ್ಕೆ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕಣ್ಣೀರಿನ ರಾಜಕೀಯ ನಿಂತು ಅಭಿವೃದ್ಧಿಯ ರಾಜಕೀಯ ಇಲ್ಲಿ ಆರಂಭವಾಗಲಿದೆ. ಶ್ರಮಜೀವಿಗಳು, ರೈತರ ಹೆಸರಿನಲ್ಲಿ ಇಲ್ಲಿ ರಾಜಕೀಯ ಮಾಡಿದ್ದರು. ಆದರೆ, ಮಣ್ಣಿನ ಮಗ ಯಡಿಯೂರಪ್ಪ ಅವರು ರೈತರಿಗೆ ನೆರವು ಒದಗಿಸಿದವರು ಎಂದು ವಿವರಿಸಿದರು.

ಇದನ್ನೂ ಓದಿ | Amit Shah | ನಾಟಕ ಮಾಡೋರಿಗೆ, ಕಣ್ಣೀರು ಸುರಿಸೋರಿಗೆ ಪಾಠ ಕಲಿಸಿ: ಜೆಡಿಎಸ್‌ ವಿರುದ್ಧ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

Exit mobile version