Site icon Vistara News

Amit Shah: ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ; ಅಮಿತ್ ಶಾ ಸಂತಸ

Amit shah

ಮೈಸೂರು: ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖೆ ತೆರೆಯಲು ಶ್ರೀಗಳು ನಿರ್ಧರಿಸಿರುವುದು ಅಭಿನಂದನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನೆರವೇರಿದ ಬೆನ್ನಲ್ಲೇ ಇಲ್ಲಿನ ಸುತ್ತೂರು ಶ್ರೀಗಳು, ಅಯೋಧ್ಯೆಯಲ್ಲಿ ತಮ್ಮ ಶಾಖಾ ಮಠ ತೆರೆಯುವುದಾಗಿ ಹೇಳಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮೈಸೂರಿನ ಆದಿ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ನಂತರ ಬಾಲ ಶ್ರೀರಾಮನ ವಿಗ್ರಹ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಅಮಿತ್ ಶಾ ಅವರು ಸನ್ಮಾನಿಸಿದ್ದಾರೆ.

ಇದನ್ನೂ ಓದಿ | Amit Shah: ಲೋಕಸಭೆಗೆ ಬಿಜೆಪಿ ಟಿಕೆಟ್‌; ಫೆ. 20-21ಕ್ಕೆ ಮಹತ್ವದ ಸಭೆ ನಡೆಸಲು ಅಮಿತ್‌ ಶಾ ನಿರ್ಧಾರ!

ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಪ್ರತಾಪ ಸಿಂಹ, ಬಿಜೆಪಿ ಜಿಲ್ಲಾಧ್ಯಕ್ಷರಾದ ಎಲ್. ನಾಗೇಂದ್ರ, ಎಲ್.ಆರ್. ಮಹದೇವಸ್ವಾಮಿ ಮತ್ತಿತರರು ಜತೆಗಿದ್ದರು.

ಚಾಮುಂಡೇಶ್ವರಿ ಆಶೀರ್ವಾದ ಪಡೆದ ಅಮಿತ್‌ ಶಾ; ಲೋಕಸಭೆಗೆ ರಣಕಹಳೆ ಊದಿದ ಚಾಣಕ್ಯ!

ಮೈಸೂರು/ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದು, ದಕ್ಷಿಣ ರಾಜ್ಯಗಳತ್ತ ಬಿಜೆಪಿ ಹೈಕಮಾಂಡ್ (BJP high command) ದೃಷ್ಟಿ ನೆಟ್ಟಿದೆ. ಅದರಲ್ಲೂ ಬಿಜೆಪಿಯ ಭದ್ರಕೋಟೆ ಕರ್ನಾಟಕದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠ ಮಾಡುವ ನಿಟ್ಟಿನಲ್ಲಿ ಅವಿರತ ಶ್ರಮ ಹಾಕುತ್ತಿದೆ. ಇದರ ಭಾಗವಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಂಬರ್‌ 2 ನಾಯಕ, ರಾಜಕೀಯ ಚಾಣಕ್ಯ ಖ್ಯಾತಿಯ ಅಮಿತ್‌ ಶಾ (Amit Shah) ಅವರು ವಿಧಾನಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವ (Suttur Jatra Mahotsava in Mysuru) ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಚಾಮುಂಡೇಶ್ವರಿ ದೇವಿ (Chamundeshwari Devi) ದರ್ಶನ ಪಡೆದ ಅಮಿತ್ ಶಾ, ಅಲ್ಲಿಂದಲೇ ಚುನಾವಣಾ ರಣಕಹಳೆ ಊದಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್‌ ಶಾ ಅವರು ಪಕ್ಷದ ಕೋರ್‌ ಕಮಿಟಿ ಸಭೆಯನ್ನು ಬಿಜೆಪಿ ನಾಯಕರೊಂದಿಗೆ ನಡೆಸಿದ್ದಾರೆ. ಇದಕ್ಕೂ ಮೊದಲು ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಗೆದ್ದು ಬರುವಂತೆ ಆಶೀರ್ವಾದ ಮಾಡುವಂತೆ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದಾದ ಬಳಿಕ ಬಿಜೆಪಿ ಕೋರ್‌ ಕಮಿಟಿಗೆ ಮುಂದಾಗಿದ್ದ ಅಮಿತ್‌ ಶಾ, ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜತೆ ಒನ್‌ ಟು ಒನ್‌ ಮೀಟಿಂಗ್‌ ಮಾಡಿದ್ದಾರೆ. ಬಳಿಕ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

ಇದನ್ನೂ ಓದಿ | Rajya Sabha Ticket: ನಾರಾಯಣಸಾ ಭಾಂಡಗೆ ಬಿಜೆಪಿ ರಾಜ್ಯಸಭಾ ಅಭ್ಯರ್ಥಿ; ಸೋಮಣ್ಣ ಲಾಬಿಗೆ ಮಣಿಯದ ಹೈಕಮಾಂಡ್!

ಸುತ್ತೂರು ಮಠದ ಮೂಲಕ ಲಿಂಗಾಯತ ಮತದಾರರನ್ನು ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌ ಮಾಡಿರುವ ಅಮಿತ್‌ ಶಾ, ತಮ್ಮ ಭಾಷಣದಲ್ಲಿ ಸುತ್ತೂರು ಮಠವನ್ನು ಹಾಡಿಹೊಗಳಿದ್ದಾರೆ. ಅಲ್ಲದೆ, ಶ್ರೀಮಠದ ಕೊಡುಗೆಯನ್ನು ಕೊಂಡಾಡಿದ್ದಾರೆ. ಇದರ ಜತೆಗೆ ಬಸವಣ್ಣ ಅವರನ್ನು ಸ್ಮರಿಸುವ ಮೂಲಕ ತಾವು ಸಹ ಬಸವ ತತ್ವದ ಮೇಲೆ ನಂಬಿಕೆ ಇಟ್ಟಿರುವುದಾಗಿ ಹೇಳಿದ್ದಾರೆ. ಬಿಜೆಪಿ ಸದಾ ಲಿಂಗಾಯತ ಸಮುದಾಯದ ಜತೆಗೆ ಇರುತ್ತದೆ ಎಂಬ ಸಂದೇಶವನ್ನು ಈ ಸಮಾವೇಶದ ಮೂಲಕ ರವಾನೆ ಮಾಡಿದ್ದಾರೆ. ಹೀಗಾಗಿ ಲಿಂಗಾಯತ ಮತ ಬ್ಯಾಂಕ್‌ ಅನ್ನು ಮತ್ತಷ್ಟು ಗಟ್ಟಿ ಮಾಡುವ ನಿಟ್ಟಿನಲ್ಲಿ ಶಾ ಪ್ರಯತ್ನ ಮಾಡಿದ್ದಾರೆ.

Exit mobile version