ಕರ್ನಾಟಕ
Karnataka Election 2023: ಬಿಟಿಎಂ ಲೇಔಟ್‌ನಲ್ಲಿ ಅಮಿತ್ ಶಾ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪರ ಮತಯಾಚನೆ
Amith Shah Road show: ಬಿಟಿಎಂ ಲೇಔಟ್‌ನಲ್ಲಿ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ರಸ್ತೆ ಪೂರ್ಣ ಕೇಸರಿಮಯವಾಗಿದ್ದು, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಪರ ಉದ್ಘೋಷಗಳು ಕೇಳಿಬಂದವು.
ಬೆಂಗಳೂರು: ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರೋಡ್ ಶೋ ಅವರು ಭರ್ಜರಿ ರೋಡ್ ಶೋ ನಡೆಸಿದ್ದು, ಮತಯಾಚನೆ ಮಾಡಿದ್ದಾರೆ.
ಬಿಟಿಎಂ ಲೇಔಟ್ ಕ್ಷೇತ್ರದ ಆಡುಗೋಡಿ ಸಿಗ್ನಲ್‌ನಿಂದ ರೋಡ್ ಶೋವನ್ನು ಪ್ರಾರಂಭಿಸಲಾಗಿತ್ತು. ಅಲ್ಲಿಂದ ಸಾಗಿದ ರೋಡ್ ಶೋ ಮಡಿವಾಳದಲ್ಲಿರುವ ಟೋಟಲ್ ಮಾಲ್‌ವರೆಗೆ ತಲುಪಿತು. ಈ ವೇಳೆ ಸಾರ್ವಜನಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದ್ದು, ಬಿಜೆಪಿ, ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಪರ ಜಯಘೋಷಗಳು ಕೇಳಿಬಂದವು.
ತೆರೆದ ವಾಹನದಲ್ಲಿ ರೋಡ್ ನಡೆಸಿದ ಅಮಿತ್ ಶಾ ಅವರು, ರಸ್ತೆಯ ಇಕ್ಕೆಲಗಳಲ್ಲಿ ತುಂಬಿದ್ದ ಜನಸಾಗರದ ನಡುವೆ ಸಾಗಿದರು. ರಸ್ತೆಯುದ್ದಕ್ಕೂ ಜನರತ್ತ ಕೈಬೀಸಿದರು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ಕ್ಷೇತ್ರದ ಅಭ್ಯರ್ಥಿ ಶ್ರೀಧರ ರೆಡ್ಡಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸಾಥ್ ನೀಡಿದರು.
ಇದನ್ನೂ ಓದಿ: Karnataka Election : ಚನ್ನಗಿರಿಯಲ್ಲಿ ಪಕ್ಷೇತರನಿಗೆ ಸಪೋರ್ಟ್; ಮಾಡಾಳು ಪುತ್ರನ ಜತೆ ಬಿಜೆಪಿ ಒಳ ಒಪ್ಪಂದ?
ಅಮಿತ್ ಶಾ ಮೇಲೆ ಪುಷ್ಪ ವೃಷ್ಟಿ
ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇಲೆ ಹೂಮಳೆಯನ್ನೇ ಸುರಿಸಲಾಯಿತು. ರೋಡ್ ಶೋ ವೇಳೆ ಅವರ ಮೇಲೆ ಹೂವನ್ನು ಬೀರಿದ ಸಾರ್ವಜನಿಕರು, ಬಿಜೆಪಿ, ಬಿಜೆಪಿ ಎಂದು ಉದ್ಘೋಷವನ್ನು ಕೂಗಿದರು. ಒಂದು ಹಂತದಲ್ಲಿ ಮೋದಿ ಮೋದಿ ಜಯಘೋಷವು ಮುಗಿಲು ಮುಟ್ಟಿತ್ತು. ಇನ್ನು ಹಲವು ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡವನ್ನು ಧರಿಸಿ ಗಮನ ಸೆಳೆದರು.
ರಸ್ತೆಯಲ್ಲ ಕೇಸರಿಮಯ
ಅಮಿತ್ ಶಾ ರೋಡ್ ಶೋ ವೇಳೆ ರಸ್ತೆಯುದ್ದಕ್ಕೂ ಕೇಸರಿ ಬಾವುಟಗಳು ರಾರಾಜಿಸಿದವು. ಕೇಸರಿ ಶಾಲುಗಳನ್ನು ಹಾಕಿಕೊಂಡಿದ್ದ ಕಾರ್ಯಕರ್ತರು ರಸ್ತೆಯಲ್ಲೆಡೆ ತುಂಬಿದ್ದರು. ಅಲ್ಲದೆ, ಕಲಾ ತಂಡಗಳೂ ಭಾಗಿಯಾಗಿದ್ದು, ಮೆರವಣಿಗೆಗೆ ಮೆರಗು ತಂದವು.
ಬಿಜೆಪಿ ಗೆದ್ದೇ ಗೆಲ್ಲುತ್ತದೆ: ಶ್ರೀಧರ್ ರೆಡ್ಡಿ
ಈ ವೇಳೆ ಮಾತನಾಡಿದ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀಧರ್ ರೆಡ್ಡಿ, ಈ ಕ್ಷೇತ್ರದಲ್ಲಿ ಜನರು ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ. ಈ ಭಾರಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಇನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುವ ಪ್ರಸ್ತಾಪ ಮಾಡಿರುವ ಬಗ್ಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿರುವ ಶ್ರೀಧರ್ ರೆಡ್ಡಿ, ಬಜರಂಗದಳ ಆಗಲಿ ಯಾವುದೇ ಸಂಘಟನೆಯನ್ನೇ ಆಗಲಿ ಕಾಂಗ್ರೆಸ್ ಏನೂ ಮಾಡಲು ಆಗುವುದಿಲ್ಲ ಎಂದು ಹೇಳಿದರು.
ಅಮಿತ್ ಶಾ ರೋಡ್ ಶೋ ವಿಡಿಯೊ ಇಲ್ಲಿದೆ
ಇದನ್ನೂ ಓದಿ: ಬ್ರಾಹ್ಮಣರು ಯಾರೂ ಭಾರತದವರಲ್ಲ, ಅವರನ್ನು ಇಲ್ಲಿಂದ ಓಡಿಸೋಣ; ವಿವಾದ ಸೃಷ್ಟಿಸಿದ ಆರ್ಜೆಡಿ ನಾಯಕ
ನಮ್ಮ ಬಿಟಿಎಂ ಲೇಔಟ್ ಕ್ಷೇತ್ರದಲ್ಲಿಯೂ ಸಹ ಬಿಜೆಪಿ ಪರ ಅಲೆ ಇದ್ದು, ಜನರು ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಕಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ನನ್ನ ಗೆಲುವು ನೂರಕ್ಕೆ ನೂರು ನಿಶ್ಚಿತ ಎಂದು ಶ್ರೀಧರ ರೆಡ್ಡಿ ಹೇಳಿದರು.
ಕರ್ನಾಟಕ
Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ
Ramalinga Reddy: ರಾಜ್ಯ ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಲಾಗಿದೆ.
ಬೆಂಗಳೂರು: ಸಾರಿಗೆ ಇಲಾಖೆಯ 4 ಸಾರಿಗೆ ನಿಗಮಗಳಿಗೆ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕವಾಗಿದ್ದಾರೆ. ಸಾರಿಗೆ ಇಲಾಖೆ ಅಧೀನದಲ್ಲಿರುವ ಬಿಎಂಟಿಸಿ, ಕೆಎಸ್ಆರ್‌ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಿ ಸಾರಿಗೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು
ಸಾಮಾನ್ಯವಾಗಿ ನಾಲ್ಕು ನಿಗಮಗಳಿಗೆ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕವಾಗುತ್ತಿತ್ತು. ಆದರೆ, ಈ ಬಾರಿ ಪ್ರತ್ಯೇಕವಾಗಿ ಅಧ್ಯಕ್ಷರನ್ನು ನೇಮಿಸದೆ ಸಚಿವ ರಾಮಲಿಂಗಾರೆಡ್ಡಿ ಅವರಿಗೇ ನಾಲ್ಕೂ ನಿಗಮಗಳ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕ
Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು
Hosakerehalli Lake: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಹೊಸಕೆರೆಹಳ್ಳಿ ಕೆರೆಯ (Hosakerehalli Lake) ಮಧ್ಯೆ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಿದ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ರಮ ಕೈಗೊಳ್ಳಲು ಸೂಚಿಸಿದ ಬೆನ್ನಲ್ಲೇ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಕೆ.ಲಕ್ಷ್ಮೀಸಾಗರ್ ಆದೇಶ ಹೊರಡಿಸಿದ್ದಾರೆ.
ಘನತ್ಯಾಜ್ಯ ವಿಭಾಗದ ಇಇ ಎಚ್.ಎಸ್.ಮೇಘ ಹಾಗೂ ಎಇ ಶಿಲ್ಪ ಅಮಾನತುಗೊಂಡ ಅಧಿಕಾರಿಗಳು. ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರಾದ ಅಧಿಕಾರಿಗಳು, ಎಂಜಿನಿಯರ್‌ಗಳನ್ನು ಸೋಮವಾರ (ಜೂನ್ 5) ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಹೀಗಾಗಿ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ಇದನ್ನೂ ಓದಿ | ಗ್ಲೋಬಲ್ ಬೆಂಗಳೂರು ಮಾಡಲು ಸಲಹಾ ಸಮಿತಿ; ಇದು ಡಿಕೆಶಿ ಮಾಸ್ಟರ್ ಪ್ಲ್ಯಾನ್!
ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸೋಮವಾರ ಮಧ್ಯಾಹ್ನ ಸಭೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಪ್ರಶ್ನಿಸಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.
ಕರ್ನಾಟಕ
Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Koppal News: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಕೊಪ್ಪಳ: ರಾಯಚೂರು ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಒಬ್ಬ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಜಿಲ್ಲೆಯಲ್ಲಿ (Koppal News) ನಡೆದಿದೆ. ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಹೊನ್ನಮ್ಮ ಶಿವಪ್ಪ (65) ಮೃತ ಮಹಿಳೆ. ಬಸರಿಹಾಳ ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಭೇದಿಯಿಂದ ಹಲವು ಜನರು ಬಳಲುತ್ತಿದ್ದರು. ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆಯಾಗಿದೆ ಸ್ಥಳೀಯರು ಆರೋಪಿಸಿದ್ದಾರೆ. ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಿದ ಆರೋಪ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಟಯರ್ ಸಿಡಿದು ಪಲ್ಟಿ ಹೊಡೆದ ಕಾರು; ಐವರಿಗೆ ಗಾಯ
ಮಂಡ್ಯ: ಟಯರ್ ಸಿಡಿದು ಕಾರು ಪಲ್ಟಿಯಾಗಿದ್ದರಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಚಿಕ್ಕಮಂಡ್ಯ ಬಳಿ ಸೋಮವಾರ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಮೂಲದ ಅರ್ಜುನ್, ಮಂಜುನಾಥ್ ಜಿ.ಅಡಿಗ, ಶ್ರೀಕಾಂತ್, ಕೃಷ್ಣ, ಮೂರ್ತಿ ಗಾಯಗೊಂಡವರು.
ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಚಿಕ್ಕಮಂಡ್ಯ ಸಮೀಪಿಸುತ್ತಿದ್ದಂತೆ ಕಾರಿನ ಟಯರ್ ಸ್ಫೋಟಗೊಂಡಿದೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಕರ್ನಾಟಕ
World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ
World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಶಿವಮೊಗ್ಗ: ಪರಿಸರ ದಿನಾಚರಣೆ ನಿಮಿತ್ತ ವಿಸ್ತಾರ ನ್ಯೂಸ್ ಹಮ್ಮಿಕೊಂಡಿದ್ದ ಅಭಿಯಾನಕ್ಕೆ (World Environment Day) ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿದೆ. ನಗರ ವ್ಯಾಪ್ತಿಯ 11 ಕಿ.ಮೀ. ಉದ್ದದ ಕಾಲುವೆಯ ಎರಡೂ ಬದಿಗಳಲ್ಲಿ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಚಾಲನೆ ನೀಡಿದರು.
ನಿರ್ಮಲ ತುಂಗಾ ಅಭಿಯಾನ ತಂಡ, ಪರ್ಯಾವರಣ ಸಂರಕ್ಷಣೆ, ಸರ್ಜಿ ಫೌಂಡೇಶನ್, ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಡಳಿತ, ತುಂಗಾ ಮೇಲ್ದಂಡೆ ಯೋಜನೆ, ಅರಣ್ಯ ಇಲಾಖೆ ಸಹಯೋಗ ನೀಡಿದ್ದು, ನಗರದ ಪರಿಸರ ಪ್ರೇಮಿಗಳು ಪರಿಸರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.
ಆರ್‌ಎಸ್‌ಎಸ್ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ಜಿಲ್ಲಾ ಸಂಘಚಾಲಕ ರಂಗನಾಥ, ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ದಿನೇಶ್ ಶೇಟ್, ತ್ಯಾಗರಾಜ ಮಿತ್ಯಾಂತ, ಬಾಲಕೃಷ್ಣ ನಾಯ್ಡು, ಗೊ.ಕೃ. ಭಾಗವತ್, ರಂಗಭೂಮಿ ಮಂಜು, ನಾಗಭೂಷಣ್ ಸ್ವಾಮಿ, ಕುಮಾರಿಪ್ರಣಮ್ಯ, ಪ್ರಣೀತಾ, ಮುಂತಾದವರು ಇದ್ದರು.
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ16 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ14 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ18 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ10 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ16 hours ago
ಕಲಬುರಗಿಯಲ್ಲಿ ಚಂಡಿಕಾ ಹೋಮದ ಬೆಂಕಿಯಲ್ಲಿ ಕಾಣಿಸಿಕೊಂಡ ದುರ್ಗಾ ದೇವಿ!; ಇಲ್ಲಿದೆ ನೋಡಿ ಫೋಟೊ