ಬೆಂಗಳೂರು: ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಈಗಾಗಲೇ ವಿವಿಧ ರಾಜಕೀಯ ಪಕ್ಷಗಳಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರಮುಖ ನಾಯಕರು ಚುನಾವಣಾ ಪ್ರಚಾರ ಮಾಡುವುದರಿಂದ ರಾಜ್ಯದಲ್ಲಿ ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 21 ಮತ್ತು 22ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧೆಡೆ ಬಿಜೆಪಿ ರೋಡ್ ಶೋಗಳಲ್ಲಿ ಭಾಗಿಯಾಗಿ ಪ್ರಚಾರ ನಡೆಸಲಿದ್ದಾರೆ.
ದೇವನಹಳ್ಳಿ, ಜಯನಗರದಲ್ಲಿ ಅಮಿತ್ ಶಾ ಅವರು ರೋಡ್ ಶೋ ನಡೆಸುವ ಸಾಧ್ಯತೆ ಇದ್ದು, ನಂತರ ಬಳಿಕ ಶಿವಮೊಗ್ಗ ತೆರಳಲಿದ್ದಾರೆ ಎಂಬ ಮಾಹಿತಿ ಇದೆ. ಇದಾದ ಬಳಿಕ ಮತ್ತೊಮ್ಮೆ ಏಪ್ರಿಲ್ 24, 25ರಂದು ಕೂಡ ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಆಗಮಿಸಿದ್ದಾರೆ. ಅಗಲೂ ಕೂಡ ವಿವಿಧ ಕ್ಷೇತ್ರಗಳಲ್ಲಿ ರೋಡ್ ಶೋ ಮತ್ತು ಪ್ರಚಾರ ಮಾಡಲಿದ್ದಾರೆ.
ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಅಮಿತ್ ಶಾ ಸೇರಿ 40 ಸ್ಟಾರ್ ಪ್ರಚಾರಕರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರವೇ ಹುಬ್ಬಳ್ಳಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಹಾಗೆಯೇ ಬುಧವಾರವೂ ಪ್ರಚಾರ ನಡೆಸಿದ್ದಾರೆ. ಇದರ ಬೆನ್ನಲ್ಲೇ ಅಮಿತ್ ಶಾ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಏ.21ರಂದು ಬೆಂಗಳೂರಿಗೆ ಆಗಮಿಸುವ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ತಂಗಲಿದ್ದು, ನಂತರ ಎರಡು ದಿನಗಳಲ್ಲಿ ವಿವಿಧೆಡೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ | Karnataka Election 2023: ಕಾಂಗ್ರೆಸ್ ಅಂದರೆ ಕರಪ್ಷನ್, ಕಮಿಷನ್, ಕ್ರಿಮಿನಲೈಸೇಷನ್: ಗುಡುಗಿದ ಜೆ.ಪಿ. ನಡ್ಡಾ
ಬೊಮ್ಮಾಯಿ ಅವರದ್ದು ನಾಮ್‌ಕೆ ವಾಸ್ತೆ ಅಲ್ಲ, ಕಾಮ್‌ಕೆ ವಾಸ್ತೆ: ಕಿಚ್ಚ ಸುದೀಪ್
ಹಾವೇರಿ: ಮೊದಲ ಸಲ ನಿಮ್ಮ ಊರಿಗೆ ಬಂದಿದ್ದೇನೆ. ಕನಕದಾಸರು, ಶರೀಫರು ಹುಟ್ಟಿದ ಊರಲ್ಲಿ ಚುನಾವಣಾ ಕ್ಯಾಂಪೇನ್ ಮಾಡುತ್ತಿದ್ದೇನೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಿದವರು ನಮ್ಮ ಬಸವರಾಜ ಬೊಮ್ಮಾಯಿ ಮಾಮ. ಅವರದ್ದು ನಾಮ್‌ಕೆ ವಾಸ್ತೆ ಅಲ್ಲ, ಕಾಮ್‌ಕೆ ವಾಸ್ತೆ. ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಗೆಲ್ಲಿಸಬೇಕು ಎಂದು ಕಿಚ್ಚ ಸುದೀಪ್ ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಪರ ಬ್ಯಾಟ್ ಬೀಸಿದ್ದಾರೆ.
ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ಪರ ಬೃಹತ್ ರೋಡ್ ಶೋ ನಡೆಸಿದ ಬಳಿಕ ಏರ್ಪಡಿಸಲಾಗಿದ್ದ ಸಮಾವೇಶದಲ್ಲಿ ಮಾತನಾಡಿದ ಸುದೀಪ್, ಬೊಮ್ಮಾಯಿ ಅವರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಈಗ ಅವರು ಒಬ್ಬರೇ ಇಲ್ಲ, ಅವರ ಜತೆಗೆ ನಾನೂ ಇದೀನೆ. ನಾನು ಒಬ್ಬ ಭಾರತೀಯನಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ನಾನು ಸುಮ್ಮ ಸುಮ್ಮನೆ ಕ್ಯಾಂಪೇನ್‌ಗೆ ಇಳಿಯಲ್ಲ. ಎಲ್ಲಿ ಕೆಲಸ ಆಗುತ್ತದೆಯೋ ಅಂಥ ಕಡೆಗೆ ಮಾತ್ರವೇ ನಾನು ಬರುತ್ತೇನೆ ಎಂದು ಹೇಳಿದರು.