Amit Shah Meeting: ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳನ್ನೂ ಗೆಲ್ಲಬೇಕು: ಬಿಜೆಪಿ ನಾಯಕರಿಗೆ ಅಮಿತ್‌ ಶಾ ಸೂಚನೆ - Vistara News

ಕರ್ನಾಟಕ

Amit Shah Meeting: ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳನ್ನೂ ಗೆಲ್ಲಬೇಕು: ಬಿಜೆಪಿ ನಾಯಕರಿಗೆ ಅಮಿತ್‌ ಶಾ ಸೂಚನೆ

Amit shah Meeting: ಬೆಳಗಾವಿಯಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವುದಕ್ಕೂ ಮೊದಲು ಆರ್‌ಎಸ್‌ಎಸ್‌ ನಾಯಕರ ಜತೆ ಅಮಿತ್‌ ಶಾ ಅವರು ರಹಸ್ಯ ಸಭೆ ನಡೆಸಿದ್ದಾರೆ.

VISTARANEWS.COM


on

Amit shah Meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು (Amit shah Meeting) ಬಿಜೆಪಿ ಮುಖಂಡರ ಸಭೆಯನ್ನು ಶನಿವಾರ ನಡೆಸಿದರು. ಸಭೆಯಲ್ಲಿ ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಬಿಜೆಪಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು, ಹಾಲಿ ಮಾಜಿ ಸಚಿವರು, ಸಂಸದರು, ಶಾಸಕರು, ಎಂಎಲ್‌ಸಿಗಳು ಹಾಗೂ ರಾಜ್ಯಸಭಾ ಸದಸ್ಯರು ಸೇರಿ ಹಲವರು ಭಾಗಿಯಾಗಿದ್ದರು.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣಾ ಅಂಗಡಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಸೇರಿ ಹಲವರು ಭಾಗಿಯಾಗಿದ್ದರು. ಎರಡು ದಿನಗಳ ರಾಜ್ಯ ಪ್ರವಾಸದ ಅಂತ್ಯದಲ್ಲಿ ಮಹತ್ವದ ಸಭೆ ನಡೆಸಿದ ಅಮಿತ್‌ ಶಾ ಅವರು, ಬೆಳಗಾವಿ ಸಾಂಬ್ರಾ ಏರ್‌ಪೋರ್ಟ್‌ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದರು.

#image_title

ಸಭೆಯ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಬೆಳಗಾವಿಯಲ್ಲಿ ಬಿಜೆಪಿ ಪರ ಅಲೆ ಇದೆ. ಬೆಳಗ್ಗೆಯಿಂದ ನಡೆದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ನನಗೆ ಸಮಾಧಾನ ಆಗಿದೆ, ತೃಪ್ತಿಯಾಗಿದೆ ಎಂಬ ಮಾತನ್ನು ಅಮಿತ್ ಶಾ ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ನಾವು ಪ್ರಯತ್ನ ಮಾಡಿದರೆ ಹದಿನೆಂಟಕ್ಕೆ ಹದಿನೆಂಟು ಸೀಟ್ ಗೆಲ್ಲಲು ಸಾಧ್ಯತೆ ಇದೆ. ಈಗ ಹದಿಮೂರು ಸೀಟ್ ಗೆದ್ದಿದ್ದು, ಎಲ್ಲರೂ ಪ್ರಯತ್ನ ಮಾಡಿ ಬೆಳಗಾವಿ ಎಲ್ಲ ಸೀಟ್‌ ಗೆಲ್ಲಬೇಕು ಎಂದು ಅಮಿತ್‌ ಶಾ ಹೇಳಿರುವುದಾಗಿ ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಕರ್ನಾಟಕದಲ್ಲಿ 140ಕ್ಕೂ ಹೆಚ್ಚು ಸೀಟ್ ಗೆಲ್ಲುವುದರ ಮೂಲಕ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾನು ಇನ್ನೊಮ್ಮೆ ಬೆಳಗಾವಿಗೆ ಬರುತ್ತೇನೆ, ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಒಟ್ಟಾಗಿ ಪ್ರಯತ್ನ ಮಾಡಿದರೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ನಡೆಸಲು ಕಷ್ಟ ಆಗಲ್ಲ. ಕಾಂಗ್ರೆಸ್‌ನವರು ನಾವೇ ಮುಖ್ಯಮಂತ್ರಿ ಅಂತ ತಿರುಕನ‌ ಕನಸು ಕಾಣುತ್ತಿದ್ದಾರೆ, ಅದ್ಯಾವುದು ನನಸು ಆಗಲ್ಲ. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಆ ದಿಕ್ಕಿನಲ್ಲಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕೆಂದು ಅಮಿತ್ ಶಾ ಅವರು ಸೂಚನೆ ಕೊಟ್ಟು ಹೋಗಿದ್ದಾರೆಂದು ಮಾಜಿ ಸಿಎಂ ತಿಳಿಸಿದರು.

ಅಮಿತ್‌ ಶಾ ಅವರ ಸೂಚನೆಗಳನ್ನು ಎಲ್ಲರೂ ಒಪ್ಪಿಕೊಂಡಿದ್ದೇವೆ. ರಾಜ್ಯದಲ್ಲಿ ಎಲ್ಲ ಕಡೆ ಅಮಿತ್ ಶಾ ಪ್ರವಾಸ ಮಾಡಲಿದ್ದಾರೆ. ನನಗೆ ಇನ್ನೊಂದು ತಿಂಗಳಾದರೆ ನನಗೆ 80 ವರ್ಷ ಮುಗಿಯುತ್ತದೆ. ಆದರೂ, ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ. ಹಗಲು ರಾತ್ರಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ನಮ್ಮೆಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಹೋಗುತ್ತೇವೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನಾಯಕತ್ವ ನಮಗಿದೆ. ಕಾಂಗ್ರೆಸ್‌ನವರಿಗೆ ಇಂತಹ ನಾಯಕತ್ವ ಎಲ್ಲಿದೆ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ನಿಶ್ಚಿತವಾಗಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅಮಿತ್‌ ಶಾ ಅವರಿಗೆ ವಿಶ್ವಾಸ ತುಂಬಿದ್ದೇವೆ. ಅವರು ಅದೇ ವಿಶ್ವಾಸದಲ್ಲೇ ದೆಹಲಿಗೆ ಹೋಗಿದ್ದಾರೆ ಎಂದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಭಿನ್ನಾಭಿಪ್ರಾಯ ವಿಚಾರ ಪ್ರತಿಕ್ರಿಯಿಸಿ, ಯಾವುದೇ ಭಿನ್ನಮತ, ಭಿನ್ನಾಭಿಪ್ರಾಯ ಇಲ್ಲ. ಒಂದೇ ತಾಯಿ ಮಕ್ಕಳಂತೆ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಯಡಿಯೂರಪ್ಪ ಅವರು ಹೇಳಿದ ಪ್ರತಿ ಶಬ್ದವೇ ನಮ್ಮ ಮಾತು. ಜಿಲ್ಲೆಯಲ್ಲಿ 15 ಕ್ಷೇತ್ರ ಗೆಲ್ಲಲು ಅಮಿತ್ ಶಾ ಸಲಹೆ ಕೊಟ್ಟಿದ್ದಾರೆ. ಅವರು ಹೇಳಿದಂತೆ ನಾವು ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ | Janasankalpa Yatre : ಜೆಡಿಎಸ್‌ಗೆ ನೀಡುವ ಪ್ರತಿ ಮತವೂ ಕಾಂಗ್ರೆಸನ್ನು ಗೆಲ್ಲಿಸುತ್ತದೆ: ಬಿಜೆಪಿಗೇ ಮತ ನೀಡಿ ಎಂದು ಕರೆ ನೀಡಿದ ಅಮಿತ್‌ ಶಾ

ಭಿನ್ನಮತ ಮರೆತು ಬೆಳಗಾವಿಯ ಎಲ್ಲ ನಾಯಕರು ಸಭೆಗೆ ಹಾಜರಾದ ಬಗ್ಗೆ ಉತ್ತರಿಸಿ, ನಮ್ಮ ಬಾಸ್ ಬಂದಾಗ ಆಬ್ಸೆಂಟ್ ಆಗಲು ಯಾರಿಗಾದರೂ ಧೈರ್ಯ ಇದೆಯಾ? ಅವರನ್ನು ನಂಬಿಯೇ ಪಕ್ಷಕ್ಕೆ ಬಂದಿದ್ದೇವೆ, ಅವರಿಂದ ಒಳ್ಳೆಯದಾಗುತ್ತದೆ. ಯಡಿಯೂರಪ್ಪ ಅವರು ಹೇಳಿದ ಮಾತೇ ನಮ್ಮ ಮಾತು. ಭಾನುವಾರ ಗೋಕಾಕ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಇದೆ ಎಂದು ಹೇಳಿದರು.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಬೆಳಗಾವಿಯಲ್ಲಿ ಪಕ್ಷದ ಪರ ಅಲೆ ಇದ್ದು, ಎಲ್ಲರೂ ಕೂಡಿ ಹೆಚ್ಚಿನ ಸೀಟ್ ಗೆಲ್ಲುವ ಪ್ರಯತ್ನ ಮಾಡಬೇಕೆಂದು ಅಮಿತ ಶಾ ಸೇರಿ ಪಕ್ಷದ ನಾಯಕರು ಆದೇಶ ಮಾಡಿದ್ದಾರೆ. ಆ ಪ್ರಕಾರ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಪಕ್ಷದ ಕೆಲಸ ಮಾಡುತ್ತೇವೆ. ಮೋದಿ, ಅಮಿತ್ ಶಾ ನಾಯಕತ್ವದಲ್ಲಿ ಎಲ್ಲರೂ ಕೂಡಿ ಪಕ್ಷ ಸಂಘಟನೆಗಾಗಿ ಶ್ರಮಿಸುತ್ತೇವೆ ಎಂದರು.

ಸಮನ್ವಯತೆ ಕೊರತೆ ಬಗ್ಗೆ ಆರ್‌ಎಸ್‌ಎಸ್‌ ನಾಯಕರ ದೂರು

ಬಿಜೆಪಿ ನಾಯಕರ ಸಭೆಗೂ ಮುನ್ನ ಆರ್‌ಎಸ್ಎಸ್‌ನ 6 ಹಿರಿಯ ನಾಯಕರ ಜತೆ ಅಮಿತ್ ಶಾ ಅವರು ಯುಕೆ27 ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಪ್ರಾಂತದ ಆರ್‌ಎಸ್ಎಸ್ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಆರ್‌ಎಸ್ಎಸ್ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅತಿ ಹೆಚ್ಚು ಸೀಟ್ ಗೆಲ್ಲುವ ವಿಶ್ವಾಸ ಇದೆ. ಆದರೆ ನಾಯಕರಲ್ಲಿ ಒಗ್ಗಟ್ಟಿನ ಅಗತ್ಯವಿದೆ ಎಂಬುದು ಸಹ ಆರ್‌ಎಸ್ಎಸ್ ನಾಯಕರ ಅಭಿಪ್ರಾಯವಾಗಿದೆ. ಚುನಾವಣೆ ತಂತ್ರಗಾರಿಕೆ, ಮಾರ್ಗಸೂಚಿ ಹಾಗೂ ಆರ್‌ಎಸ್ಎಸ್ ಜತೆ ಪಕ್ಷದ ನಾಯಕರ ಸಮನ್ವಯತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೆಲ ನಾಯಕರ ಸಮನ್ವಯತೆ ಕೊರತೆ ಬಗ್ಗೆ ಅಮಿತ್ ಶಾ ಬಳಿ ಆರ್‌ಎಸ್ಎಸ್ ನಾಯಕರ ದೂರು ನೀಡಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Devegowda: ನಾನು ಇನ್ನೆರಡು ವರ್ಷ ಬದುಕಬಹುದು ಎಂದು ಕಣ್ಣೀರು ಹಾಕಿದ ದೇವೇಗೌಡರು

HD Devegowda: ನಾನು ಇನ್ನೆರಡು ವರ್ಷ ಬದುಕಬಹುದು… ನಾನು ಏನು ಮಾಡಬೇಕು ಅನ್ನೊದು ನಿತ್ಯ ಯೋಚನೆ ಮಾಡುತ್ತಿರುತ್ತೇನೆ ಎಂದು ದೊಡ್ಡಗೌಡರು ಕಣ್ಣೀರು ಹಾಕಿದ್ದಾರೆ.

VISTARANEWS.COM


on

HD Devegowda
Koo

ಹಾಸನ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (HD Devegowda) ಅವರು ಕಣ್ಣೀರು ಹಾಕಿರುವುದು ಕಂಡುಬಂದಿದೆ. ಜಿಲ್ಲೆಯ ಸಕಲೇಶಪುರ ಕಟ್ಟಾಯ ಹೋಬಳಿ ಸತ್ತಿಗರಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ, ನಾನು ಇನ್ನೆರಡು ವರ್ಷ ಬದುಕಬಹುದು… ನಾನು ಏನು ಮಾಡಬೇಕು ಅನ್ನೊದು ನಿತ್ಯ ಯೋಚನೆ ಮಾಡುತ್ತಿರುತ್ತೇನೆ ಎಂದು ದೊಡ್ಡಗೌಡರು ಕಣ್ಣೀರು ಹಾಕಿದ್ದಾರೆ.

ನಾನು ಹನಿ ನೀರಾವರಿ, ಟ್ರ್ಯಾಕ್ಟರ್, ಟಿಲ್ಲರ್‌ಗೆ ಸಬ್ಸಿಡಿ ಕೊಟ್ಟಿದ್ದೆ. ಚಿಕ್ಕಬಳ್ಳಾಪುರ ಸಭೆಯಲ್ಲಿ ನಮ್ಮ ರಾಜ್ಯದ ಕಾವೇರಿ ನೀರನ್ನು ನಮಗೆ ಕೊಡಲ್ಲ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಹೇಳುತ್ತಿದ್ದಾರೆ ಎಂದು ಮೋದಿಗೆ ಹೇಳಿದೆ. ನೀವು ಕೇವಲ ಹಾಸನ ಮಾತ್ರವಲ್ಲ ರಾಜ್ಯದ 28ಕ್ಕೆ 28 ಕ್ಷೇತ್ರ ಗೆಲ್ಲಿಸಬೇಕು, ಅಮೇಲೆ ನೋಡುತ್ತೀನಿ ಎಂದು ಹೇಳಿದರು.

ನಮ್ಮ ಗೌಡ ಬರ್ತಾನೆ ಏನಾದರೂ ಮಾಡುತ್ತಾನೆ ಅಂತ ಇಲ್ಲಿ 20 ಹಳ್ಳಿ ಜನ ಸೇರಿದ್ದೀರಿ. ನನ್ನ ಮನಸ್ಸಲ್ಲಿ ನೋವಿದೆ, ಮೋದಿ ಜೊತೆ ಕೂತು ಪೋಟೋ ತೆಗೆಸಿಕೊಳ್ಳುವುದಲ್ಲ. ನಿಮ್ಮನ್ನು ನೋಡಿದಾಗ ನನಗೆ ತುಂಬಾ ನೋವಿದೆ. ನಿಮ್ಮನ್ನು ಗೆಲ್ಲಿಸುತ್ತೇವೆ ಅಂತ ಬಂದಿರುವ ಪುಣ್ಯಾತ್ಮರು ನೀವು, ನಿಮಗೆ ಸಾಷ್ಟಾಂಗ ನಮಸ್ಕಾರ. ನಾನು ಇನ್ನೆರಡು ವರ್ಷ ಬದುಕಬಹುದು… ನಾನು ಏನು ಮಾಡಬೇಕು ಅನ್ನೊದು ನಿತ್ಯ ಯೋಚನೆ ಮಾಡುತ್ತಿರುತ್ತೇನೆ. ಮೋದಿಯವರು 400 ಸೀಟು ಪಕ್ಕ ಅಂತಾರೆ, ಅವರು ಪ್ರಧಾನ ಮಂತ್ರಿ ಆಗೋದು ನೂರಕ್ಕೆ ನೂರು ಸತ್ಯ ಎಂದು ಹೇಳಿದರು.

ಇದನ್ನೂ ಓದಿ | Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

ಮೋದಿ ಅವರ ಕೈಹಿಡಿದು ಕರೆಸುವ ಶಕ್ತಿ ಇದೆ. ಈ ಭಾಗದಲ್ಲಿ ನೀವು ಬದುಕಲು ಮಾರ್ಗ ಕಲ್ಪಿಸಿ ನನ್ನ ಕೊನೆ ಉಸಿರು ಎಳೆಯಬೇಕು ಅನ್ನೊ ಹಠ ಇದೆ. ನಾನು ಯಾವಾಗಲೋ ಸಾಯಬೇಕಿತ್ತು, ಆದರೆ ಬದುಕಿದೆ. ನನಗೆ ಮೂರು ವರ್ಷ ಕಿಡ್ನಿ ಫೇಲ್ ಆಗಿ ಮಣಿಪಾಲ್ ಆಸ್ಪತ್ರೆ ಲಿ ನನ್ನ ಅಳಿಯ ಡಾ ಮಂಜುನಾಥ್, ಡಾ. ಬಳ್ಳಾಲ್ ಮೂರು ವರ್ಷದಲ್ಲಿ ಬದುಕಿಸಿದರು. ನಿಮ್ಮ ನೋಡೋ ಸೌಭಾಗ್ಯ ಇತ್ತು ಅನಿಸುತ್ತೆ ಎಂದು ದೇವೇಗೌಡರು ಹೇಳಿದರು.

ನೀತಿವಂತ, ಗುಣವಂತ ಡಾ.ಮಂಜುನಾಥ್ ಅವರನ್ನು ಗೆಲ್ಲಿಸಿ: ದೇವೇಗೌಡ

ರಾಮನಗರ: ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಮೋದಿ ಭರವಸೆ ಕೊಟ್ಟಿದ್ದಾರೆ. ನಾನೂ ಅವರಿಗೆ ಒಂದು ಮಾತು ಕೊಟ್ಟಿದ್ದೇನೆ. ರಾಜ್ಯದಲ್ಲಿ 28 ಸ್ಥಾನ ಗೆದ್ದು ಕೊಡುವ ಮಾತು ಕೊಟ್ಟಿದ್ದೇನೆ. ಅದಕ್ಕಾಗಿ ಈ ವಯಸ್ಸಿನಲ್ಲೂ ರಾಜ್ಯಾದ್ಯಂತ ಪ್ರವಾಸ ಮಾಡ್ತಿದ್ದೇನೆ. ನೀವು 28 ಸ್ಥಾನಗಳನ್ನು ನೀಡಿದ್ರೆ ಮೋದಿ ಕೈಹಿಡಿದು ಮೇಕೆದಾಟಿಗೆ ಸಹಿ ಹಾಕಿಸ್ತೇನೆ. ನೀತಿವಂತ, ಗುಣವಂತ ಡಾ.ಮಂಜುನಾಥ್ ಅವರನ್ನು ಗೆಲ್ಲಿಸಿ. ಎಲ್ಲರಿಗೂ ಕೈ ಮುಗಿದು ಪ್ರಾರ್ಥನೆ ಮಾಡ್ತೇನೆ. 26ನೇ ತಾರೀಖು ಡಾ.ಮಂಜುನಾಥ್ ಅವರಿಗೆ ಮತಹಾಕಿ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮನವಿ ಮಾಡಿದರು.

ಹಾರೋಹಳ್ಳಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸಭೆಯಲ್ಲಿ ಮಾತನಾಡಿದ ಅವರು, ನನಗೆ ಕನಕಪುರ ಹೊಸದಲ್ಲ. ಈ ಹಿಂದೆ ನನ್ನ ವಿರುದ್ಧ ತೇಜಸ್ವಿನಿ ಎಂಬ ಹೆಣ್ಣುಮಗಳನ್ನು ನಿಲ್ಲಿಸಿ ಸೋಲಿಸಿದರು. ಮತ್ತೆ ಅದೇ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಪ್ರಧಾನಿ ಆಗಿದ್ದೆ. ನನ್ನನ್ನು ಪ್ರಧಾನಿ ಮಾಡಿದ್ದು ಇದೇ ಕ್ಷೇತ್ರದ ಮಹಾಜನತೆ. ದೇಶದಲ್ಲಿ ದೇವೇಗೌಡರು ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ ಎಂದು ಮಾತನಾಡುತ್ತಿದ್ದಾರೆ. ಡಾ.ಮಂಜುನಾಥ್ ನನ್ನ ಅಳಿಯ ಎನ್ನುವುದಕ್ಕಿಂತ ಜಯದೇವ ಆಸ್ಪತ್ರೆಯಲ್ಲಿ ಅಪಾರ ಸೇವೆ ಮಾಡಿದವರು. ಅವರು ಡೈರೆಕ್ಟರ್ ಆಗಿದ್ದಾಗ ಎ.ಹೆಚ್.ಪಟೇಲ್ ಸಿಎಂ ಆಗಿದ್ರು. ಆಗ ಬಂಧಿಖಾನೆ ಮಂತ್ರಿ ಆಗಿದ್ದ ಈ ಕ್ಷೇತ್ರದ ಮಹಾನುಭಾವ ಅವರ ಮೇಲೆ ತನಿಖೆ ಮಾಡಿಸಿದ್ದ. ಇವರ ಆರೋಗ್ಯ ಸೇವೆ ದೇಶದ ಗಮನ ಸೆಳೆದಿದೆ. ಅದಕ್ಕಾಗಿ ಮೋದಿ, ಅಮಿತ್ ಶಾ ಇವರ ಸೇವೆ ದೇಶಕ್ಕೆ ಬೇಕು ಅಂತ ಆಹ್ವಾನಿಸಿ, ಅವರನ್ನ ಬಿಜೆಪಿಯಿಂದ ನಿಲ್ಲಿಸಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಈಗ ಮಂಜುನಾಥ್ ಎನ್ನುವ ಹೆಸರಿನ ಮೂರು ಜನರನ್ನು ನಿಲ್ಲಿಸಿದ್ದಾರೆ. ಮಹಾನುಭಾವರು ಎಂತಾ ಬುದ್ಧಿ ಬಳಕೆ‌ ಮಾಡಿದ್ದಾರೆ. ಆದರೆ ಡಾ.ಮಂಜುನಾಥ್ ನಂಬರ್ 1 ಡಾಕ್ಟರ್. ಅವರ ಕ್ರಮಸಂಖ್ಯೆ ಕೂಡಾ ನಂಬರ್ ಒನ್. ನರೇಂದ್ರ ಮೋದಿ, ಅಮಿತ್ ಶಾ ಆಯ್ಕೆ ಮಾಡಿರುವ ವ್ಯಕ್ತಿ ಡಾ.ಮಂಜುನಾಥ್. ದೇಶದ ಸೇವೆ ಮಾಡುವ ಅವಕಾಶವನ್ನು ಅವರಿಗೆ ನೀಡಿ ಎಂದು ಹೇಳಿದರು.

ಮನಮೋಹನ್ ಸಿಂಗ್ ಅಧಿಕಾರ ಕಳೆದುಕೊಳ್ಳುವ ಕೊನೇ ಹಂತದಲ್ಲಿ ದೇಶ ಉದ್ದೇಶಿಸಿ ಭಾಷಣ ಮಾಡಿದ್ದರು. ಪ್ರಧಾನಿ ಮೋದಿ 10 ವರ್ಷದಲ್ಲಿ ದೇಶ ಅಭಿವೃದ್ಧಿ ಮಾಡಿದ್ದಾರೆ. ಅಂತವರಿಗೆ ಖಾಲಿ ಚೊಂಬು ತೋರಿಸ್ತಾರೆ. ನೀವು ಯಾರಿಗೆ ತೋರಿಡುತ್ತಿದ್ದೀರಿ? ಹುಡುಗಾಟಿಕೆ, ತಮಾಷೆನಾ… ನೀವು ನೀಡಿದ್ದ ಖಾಲಿ ಚೊಂಬನ್ನು ಅವರು ಅಕ್ಷಯ ಪಾತ್ರೆ ಮಾಡವ್ರೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ | S Jaishankar: ವಿದೇಶಾಂಗ ನೀತಿಯಲ್ಲೂ ಕಾಂಗ್ರೆಸ್‌ನಿಂದ ಮುಸ್ಲಿಂ ವೋಟ್‌ಬ್ಯಾಂಕ್‌ ರಾಜಕಾರಣ: ಸಚಿವ ಜೈಶಂಕರ್‌ ಆರೋಪ

ರಾಜ್ಯದಲ್ಲಿ ಇರೋ ಭ್ರಷ್ಟ ಸರ್ಕಾರವನ್ನು ತೆಗೆಯೋವರೆಗೂ ನಾನು ಕೂರೋದಿಲ್ಲ. ನೀವೆಲ್ಲ ಕೈ ಎತ್ತಿ ಡಾ.ಮಂಜುನಾಥ್ ಗೆಲ್ಲಿಸುತ್ತೇನೆ ಎಂದು ಶಕ್ತಿ ನೀಡಿ. ಡಾ.ಮಂಜುನಾಥ್ ಅತ್ಯಂತ ಅಧಿಕ ಮತಗಳಿಂದ ಗೆಲ್ಲಲು ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

Continue Reading

ಕರ್ನಾಟಕ

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Lok Sabha Election 2024: ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

VISTARANEWS.COM


on

Lok Sabha Election 2024 Only a guaranteed wave in Karnataka says Cm Siddaramaiah
Koo

ಚಿತ್ರದುರ್ಗ: ಚುನಾವಣೆ (Lok Sabha Election 2024) ಸಂದರ್ಭದಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ನೆನಪಾಗುತ್ತದೆ. ಕರ್ನಾಟಕ ರಾಜ್ಯ ಭೀಕರ ಬರಗಾಲವನ್ನು ಎದುರಿಸುತ್ತಿದೆ. ಪ್ರವಾಹ ಬಂದಾಗ, ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಕೇಳಲಿಲ್ಲ. ಈಗ ಮತ ಕೇಳಲು ನರೇಂದ್ರ ಮೋದಿ (PM Narendra Modi), ಅಮಿತ್ ಶಾ (Amit Shah) ಬಂದಿದ್ದಾರೆ. ಕರ್ನಾಟಕದಲ್ಲಿ ಮೋದಿ (Modi wave in Karnataka) ಅಲೆಯಿಲ್ಲ. ಏಕೆಂದರೆ ಅವರ ಸುಳ್ಳು ಜನರಿಗೆ ಅರ್ಥವಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿಗಳ ಅಲೆಯಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರು ಹಸೀ ಸುಳ್ಳು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹೊಂದಿದೆ. ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿದ್ದಾರೆ. ಹತ್ತು ವರ್ಷಗಳಲ್ಲಿ ದಲಿತರು, ಹಿಂದುಳಿದವರು, ಮಹಿಳೆಯರು, ಬಡವರ ಪರವಾಗಿ ಅವರು ಏನೂ ಮಾಡಿಲ್ಲ. ಆರ್ಥಿಕ ಶಕ್ತಿ ತುಂಬುವಲ್ಲಿ ವಿಫಲರಾಗಿದ್ದಾರೆ. 2014ರಲ್ಲಿ‌ ಮೋದಿಯವರು ಅನೇಕ ಭರವಸೆ ಕೊಟ್ಟಿದ್ದರು. ಆದರೆ ಯಾವುದನ್ನೂ ಈಡೇರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Lok Sabha Election 2024 Only a guaranteed wave in Karnataka says Cm Siddaramaiah

ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಂದಾಗಿದ್ದಾರೆ. ಸೋಲುವ ಭಯದಿಂದ ಈ ಇಬ್ಬರೂ ಒಂದಾಗಿದ್ದಾರೆ. ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಸೋಲುತ್ತೇವೆ ಎಂದು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಪೈಪೋಟಿ ಮೇಲೆ ಸುಳ್ಳು

ಈ ಮೊದಲು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹೇಳಿದ್ದರು. ಆದರೆ ಈಗ ಕೋಮುವಾದಿ ಬಿಜೆಪಿ ಪಕ್ಷದ ಜತೆಗೆ ಸೇರಿಕೊಂಡಿದ್ದಾರೆ. ಮನಮೋಹನ್ ಸಿಂಗ್ ಖಾಲಿ ಚೊಂಬು ಕೊಟ್ಟಿದ್ದರು, ಮೋದಿ ಅದನ್ನು ಅಕ್ಷಯ ಪಾತ್ರೆ ಮಾಡಿಟ್ಟಿದಾರೆ. ಮೋದಿ, ದೇವೇಗೌಡರು ಪೈಪೋಟಿ ಮೇಲೆ ಸುಳ್ಳು ಹೇಳುತ್ತಿದ್ದಾರೆ. ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ‌ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇದನ್ನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

ರೈತರ ಸಾಲ ಮನ್ನಾ ಮಾಡದ ಮೋದಿ

ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ

ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತಾರೆ ಎಂದು ಬಿಜೆಪಿಯವರು ಪ್ರಚಾರ ಮಾಡುತ್ತಿದ್ದಾರೆ. ನಾವು ಬಿಜೆಪಿಯವರು ಅಲ್ಲ, 2028ರವರೆಗೆ ನಮಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ನೀವು ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚು ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Continue Reading

ಉದ್ಯೋಗ

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Job Alert: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ (Revenue Department) ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4 (Job Alert).

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆನ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಬೆಂಗಳೂರು

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Murder case : ಅತಿಯಾದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿಸುತ್ತಿದ್ದ ಮಹಿಳೆಯನ್ನು ಕೊಂದು ಪರಾರಿ ಆಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 20 ಹುಡುಗರ ಸಹವಾಸ ಮಾಡಿದ್ದ ಮಹಿಳೆಯ ಹಿಸ್ವರಿ ಕೇಳಿ ಪೊಲೀಸರೇ ದಂಗಾಗಿದ್ದಾರೆ.

VISTARANEWS.COM


on

By

Murder case In Bengaluur
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ತನ್ನ ಮನೋಕಾಮನೆ ತಣಿಸಲು 48ರ ಮಹಿಳೆ, ಹುಡುಗರನ್ನು ಬಟ್ಟೆ ಬದಲಾಯಿಸುವಂತೆ ಬದಲಿಸುತ್ತಿದ್ದಳು. 20 ಹುಡುಗರ ಸಹವಾಸ ಹೊಂದಿದ್ದ ಆಕೆ ಅವರಿಗೆಲ್ಲ ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ ಹೆಸರು ಇಟ್ಟಿದ್ದಳು. ಆದರೆ ಕೊನೆಗೆ ಆಕೆಗೆ ಅದುವೇ ಮುಳುವಾಯಿತು. ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಗಣೇಶ ನಗರದಲ್ಲಿ ಒಂಟಿ ಮಹಿಳೆಯ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನ ಸ್ಥಿತಿಯಲ್ಲಿ ಬಿದ್ದಿತ್ತು. ಇದೀಗ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಹೇರೋಹಳ್ಳಿ ಮೂಲದ ನವೀನ್ ಎಂಬಾತನನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಮಹಿಳೆಯ ಕಾಮಕಥೆ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದಳು. ಇತ್ತ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್‌, ಕಾಲ್ ಗರ್ಲ್‌ಗಾಗಿ ಆ್ಯಪ್‌ಗಳನ್ನು ಬಳಕೆ ಮಾಡುವುದು, ಅವರ ಜತೆ ಚಾಟ್ ಮಾಡುವುದು ಮಾಡುತ್ತಿದ್ದ. ಈ ವೇಳೆ ಶೋಭಾಳ ಪರಿಚಯವಾಗಿತ್ತು. ಮೊದ ಮೊದಲು ನವೀನ್‌ಗೆ ಶೋಭಾಳ ಸಂಗ ಚೆನ್ನಾಗಿಯೇ ಇತ್ತು. ಆದರೆ ಶೋಭಾಳ ವಿಕೃತತೆ ಹೆಚ್ಚಾಗುತ್ತಲೇ ಹೋಗಿತ್ತು. ಪದೇಪದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದಳು. ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಸಿಟ್ಟಾದ ನವೀನ್‌ ಉಸಿರುಗಟ್ಟಿಸಿ ಕೊಂದು ಪರಾರಿ ಆಗಿದ್ದ.

ಫೋಟೋ ತೋರಿಸಿ ಹುಡುಗರಿಗೆ ಬ್ಲಾಕ್‌ಮೇಲ್‌

ಇನ್ನು ಶೋಭಾ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. 48ರ ಶೋಭಾಳಿಗೆ ಯುವಕರೆಂದರೆ ಹುಚ್ಚು ಅಂತೆ. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿರುವ ಶೋಭಾ, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಕಾಲ್‌ ಗರ್ಲ್‌ ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು.

ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೆ ಅಲ್ಲದೆ ಅವರೇನಾದರೂ ಬೇರೆಯವರನ್ನು ಮದುವೆ ಆಗಲು ಮುಂದಾದರೆ ಅದನ್ನು ತಪ್ಪಿಸುತ್ತಿದ್ದಳು. ನೀ ಮದುವೆ ಆಗಬಾರದು, ನಾನು ಕರೆದಾಗ ಬರಬೇಕು ಎಂದು ಧಮ್ಕಿ ಹಾಕುತ್ತಿದ್ದಳು. ಹೀಗೆ ನಾಲ್ವರು ಯುವಕರ ಮದುವೆಯನ್ನು ನಿಲ್ಲಿಸಿದ್ದಾಳೆ.

Murder Case
ಕೊಲೆಯಾದ ಶೋಭಾ ಹಾಗೂ ಆರೋಪಿ ನವೀನ್

ಒಳ್ಳೆ ಕುಟುಂಬದಿಂದ ಬಂದಿದ್ದ ನವೀನ್‌ನ ಹಿಂದೆ ಬಿದ್ದ ಶೋಭಾ ಕಾಟ ಕೊಟ್ಟಿದ್ದಳು. ಮನೆಗೆ ಕರೆದಾಗ
ಬಂದಿಲ್ಲ ಎಂದರೆ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ. ಆಕೆಗೆ ಹೆದರಿ ನವೀನ್‌ ಬಂದು ಹೋಗುತ್ತಿದ್ದ. ಇನ್ನೂ
ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bridge Collapse
ದೇಶ6 mins ago

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

dimond smuggling
ದೇಶ23 mins ago

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Tongue Reveals Health
ಆರೋಗ್ಯ24 mins ago

Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

HD Devegowda
ಕರ್ನಾಟಕ29 mins ago

HD Devegowda: ನಾನು ಇನ್ನೆರಡು ವರ್ಷ ಬದುಕಬಹುದು ಎಂದು ಕಣ್ಣೀರು ಹಾಕಿದ ದೇವೇಗೌಡರು

Lok Sabha Election 2024 Only a guaranteed wave in Karnataka says Cm Siddaramaiah
ಕರ್ನಾಟಕ36 mins ago

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Virat kohli
ಪ್ರಮುಖ ಸುದ್ದಿ51 mins ago

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

Job Alert
ಉದ್ಯೋಗ52 mins ago

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Murder case In Bengaluur
ಬೆಂಗಳೂರು53 mins ago

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Summer Hairstyles
ಫ್ಯಾಷನ್54 mins ago

Summer Hairstyles: ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

hardik pandya
ಕ್ರೀಡೆ54 mins ago

IPL 2024: ಹಾರ್ದಿಕ್​ ಪಾಂಡ್ಯ ನಿಜವಾಗಿಯೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರಾ?; ವಿಚಿತ್ರ ವರ್ತನೆಯ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌