ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಂಗಳವಾರ ರಾತ್ರಿ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.
ಬೊಮ್ಮನಹಳ್ಳಿಯ ಸ್ವಾಮಿ ವಿವೇಕಾನಂದ ಸರ್ಕಲ್‌ನಲ್ಲಿ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್ ಶೋಗೆ ಚಾಲನೆ ನೀಡಲಾಯಿತು. ವಿವೇಕಾನಂದ ಸರ್ಕಲ್ ಬಳಿಯಿಂದ ಸೇಂಟ್ ಫ್ರಾನ್ಸಿಸ್ ಸ್ಕೂಲ್‌ವರೆಗೆ ರೋಡ್ ಶೋ ನಡೆಯಿತು. ಸುಮಾರು 3 ಕಿಲೋಮೀಟರ್ ದೂರ ನಡೆದ ರೋಡ್ ಶೋ ವೀಕ್ಷಿಸಲು ಸಾವಿರಾರು ಜನರು ಆಗಮಿಸಿದ್ದರು. ರೋಡ್ ಶೋ ಹಿನ್ನೆಲೆ ಪ್ರಚಾರ ವಾಹನ ತೆರಳುವ ಮಾರ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಅಮಿತ್ ಶಾ ಅವರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಅಶೋಕ್, ಶಾಸಕರಾದ ಸತೀಶ್ ರೆಡ್ಡಿ, ಸಿ.ಕೆ ರಾಮಮೂರ್ತಿ ಸಾಥ್ ನೀಡಿದರು.
ಇದನ್ನೂ ಓದಿ | HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು
ರೋಡ್ ಶೋ ಉದ್ದಕ್ಕೂ ಪ್ರಧಾನಿ ಮೋದಿ, ಅಮಿತ್ ಶಾ ಪರ ಕಾರ್ಯಕರ್ತರಿಂದ ಘೋಷಣೆಗಳು ಮೊಳಗಿದವು. ಎಲ್ಲೆಲ್ಲೂ ಕೇಸರಿಯ ಕಂಪು, ರಸ್ತೆಯುದ್ದಕ್ಕೂ ಬಿಜೆಪಿ ಪಕ್ಷದ ಬಾವುಟಗಳು ಕಂಡುಬಂದವು.