ಹಾವೇರಿ: ಶಿಗ್ಗಾಂವಿ ತಾಲೂಕಿನ ಬಂಕಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರೊಬ್ಬರು ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಈಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.
ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ಅವರು ಮನೆ ಪಾಠ ಹೇಳಿಕೊಡುವುದಾಗಿ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಾಲೇಜಿನ ವಿದ್ಯಾರ್ಥಿ ಆರೋಪ ಮಾಡಿದ್ದಾಳೆ. ಕಳೆದ ಒಂದೂವರೆ ವರ್ಷದಲ್ಲಿ ಏಳೆಂಟು ಬಾರಿ ಈ ರೀತಿ ಮಾಡಿದ್ದಾರೆ ಎನ್ನುವುದು ವಿದ್ಯಾರ್ಥಿನಿಯ ಆರೋಪ. ನಿಂಗಪ್ಪ ಅವರು ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ನಿಂಗಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ | ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ ಸೊಸೆ; ಗುಂಡು ಹಾರಿಸಿಕೊಂಡು ಜೀವ ಬಿಟ್ಟ ಮಾಜಿ ಸಚಿವ
ನಿರಂತರ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ. ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿರುವ ಆರೋಪ ಸಹ ಕೇಳಿಬಂದಿದೆ. ಕಲಕೋಟಿ ವಿರುದ್ಧ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದಲ್ಲಿ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ 76(2)(N) ಮತ್ತು 506 ಅಡಿ ದೂರು ದಾಖಲಾಗಿದೆ.
ಇದನ್ನೂ ಓದಿ | ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಸ್ಕ್, ಗಗನಸಖಿ ಬಾಯಿ ಮುಚ್ಚಿಸಲು 2.50 ಲಕ್ಷ ಡಾಲರ್ ಕೊಟ್ಟರೆ?