ಹೊಸಪೇಟೆ: ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕಲ್ ವಾಹನಗಳನ್ನು ಹಂತ ಹಂತವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಇದರ ಬೆನ್ನಲ್ಲೇ ದೇಶದ ವಿವಿಧೆಡೆ ಎಲೆಕ್ಟ್ರಿಕ್ ವಾಹನಗಳು ಬೆಂಕಿ ಹೊತ್ತಿ ಉರಿಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈಗ ವಿಜಯನಗರ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ (EV Fire) ಧಗಧಗನೆ ಹೊತ್ತಿ ಉರಿದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೋಡಿಹಳ್ಳಿಯ ಮನೆಯೊಂದರಲ್ಲಿ ಚಾರ್ಜ್‌ಗೆ ಹಾಕಿದ್ದಾಗ ಎಲೆಕ್ಟ್ರಿಕ್ ಸ್ಕೂಟರ್ (EV Fire) ಧಗಧಗ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಪತ್ರಕರ್ತ ಉಜ್ಜಿನಿ ರುದ್ರಪ್ಪ ಎಂಬುವರ ಬೈಕ್‌ಗೆ ಬೆಂಕಿ ತಗುಲಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕುಟುಂಬಸ್ಥರು ಭಯಭೀತರಾಗಿದ್ದಾರೆ. ಬೈಕ್ ಹೊತ್ತಿ ಉರಿದ ದೃಶ್ಯ ಕಂಡ ಗ್ರಾಮಸ್ಥರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಕೊಟ್ಟೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
೧೪೦೦ ಬೈಕ್ ವಾಪಸ್ ತರಿಸಿಕೊಂಡಿದ್ದ ಓಲಾ
ಎಲೆಕ್ಟ್ರಿಕ್ ವಾಹನಗಳಿಗೆ ಪದೇಪದೆ ಬೆಂಕಿ ಹೊತ್ತಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್‌ನಲ್ಲಿ ಓಲಾ ಕಂಪನಿ ತನ್ನ ೧೪೪೧ ಎಲೆಕ್ಟ್ರಿಕ್ ವಾಹನಗಳನ್ನು ವಾಪಸ್ ಪಡೆದುಕೊಂಡಿತ್ತು. ಅಲ್ಲದೆ, ಈಗಾಗಲೇ ಕೆಲವು ಕಂಪನಿಗಳಿಂದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | Family suicide: ಆತ್ಮಹತ್ಯೆ ಮಾಡಿಕೊಂಡ ಮಹೇಶ್ ಮೇಲೆ ಕೊಲೆ ದೂರು, ಅಂಬರೀಷ್ ಅಭಿಮಾನಿಯ ಆಘಾತಕಾರಿ ಸಾವು