ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ತರೂರು ಗೇಟ್ ಬಳಿ ಸ್ವಿಫ್ಟ್ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ(Accident) ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.
ಅವಿನಾಶ್ (28), ಪ್ರಣಂತಿ ಮೃತರು. ಸೌಮ್ಯ ಗಾಯಾಳು. ಶಿರಾ ತಾಲೂಕಿನ ಕಳ್ಳಂಬೆಳ್ಳ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿಗೆ ಶುಕ್ರವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ವಾಹನ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಗಾಯಾಳು ಮಹಿಳೆಯನ್ನು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | ಮಗುವಿನ ಕಿಡ್ನಾಪ್ಗೆ ದುಷ್ಕರ್ಮಿಗಳ ಯತ್ನ; ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಚಾವ್