ಬೆಂಗಳೂರು: ಸರ್ಕಾರ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರು (Anganawadi workers) ಸಿಡಿದೆದ್ದಿದ್ದಾರೆ. ನವೆಂಬರ್ 20ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣೆಯನ್ನು ನಡೆಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳಬೇಕೆಂದು ಬೇಡಿಕೆಯನ್ನು ಇಟ್ಟಿದ್ದಾರೆ.
ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ 2877 ಅಂಗನವಾಡಿ ಕೇಂದ್ರಗಳಿವೆ. ಈ ಕೇಂದ್ರಗಳಿಗೆ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
ಈ ಹುದ್ದೆಗಳಿಗೆ ಕಳೆದ 3-4 ವರ್ಷದಿಂದ ನೌಕರರನ್ನು ನೇಮಕ ಮಾಡಿಲ್ಲ. ಕಳೆದ ಮಾರ್ಚ್ 5 ರಂದು ಭೌತಿಕ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿತ್ತು. ಸಾಕಷ್ಟು ಮಂದಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಅರ್ಜಿ ಸಲ್ಲಿಸಿ 7 ತಿಂಗಳು ಕಳೆದರೂ ಇಲಾಖೆಯಿಂದ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ಬೇಡಿಕೆ ಈಡೇರಿಸುವಂತೆ ಧರಣಿಯನ್ನು ನಡೆಸುತ್ತಿದ್ದಾರೆ.
ಇಸ್ರೋದಿಂದ ವಿದ್ಯಾರ್ಥಿಗಳಿಗೆ ರೊಬೋಟಿಕ್ಸ್ ಚಾಲೆಂಜ್; ಗೆದ್ದವರಿಗೆ 5 ಲಕ್ಷ ರೂ.
ಬೆಂಗಳೂರು: ಚಂದ್ರನ ಮೇಲೆ ಚಂದ್ರಯಾನ -3 ವಿಕ್ರಮ್ ಯಶಸ್ವಿಯಾಗಿ ಇಳಿದ ನಂತರ ಇಸ್ರೋ ಸಂಸ್ಥೆ ಚಂದ್ರ ಮತ್ತು ಇತರ ಆಕಾಶಕಾಯಗಳಿಗೆ ಭವಿಷ್ಯದ ರೊಬೋಟಿಕ್ಸ್ ನಿರ್ಮಿಸಲು, ಹೆಚ್ಚಿನ ಕಾರ್ಯಾಚರಣೆಯನ್ನು ಅನ್ವೇಷಿಸಲು ಸಜ್ಜಾಗುತ್ತಿದೆ. ಇದಕ್ಕಾಗಿ ಇಸ್ರೋ ಸಂಸ್ಥೆ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶವೊಂದು (Robotics Challenge) ಕಲ್ಪಿಸಿದೆ.
ಹಾರ್ಡ್ ವೇರ್ ಮತ್ತು ಸಾಫ್ಟ್ ವೇರ್ ಅಂಶಗಳನ್ನು ಒಳಗೊಂಡ ಬಾಹ್ಯಾಕಾಶ ರೊಬೋಟ್ ಅನ್ನು ವಿನ್ಯಾಸಗೊಳಿಸಲು ವಿದ್ಯಾರ್ಥಿ ಸಮುದಾಯವನ್ನು ಆಹ್ವಾನಿಸಿದೆ. ನವೀನ ಆಲೋಚನೆಗಳನ್ನು ಪ್ರದರ್ಶಿಸಿದವರಿಗೆ ಬಹುಮಾನವನ್ನು ನೀಡುತ್ತಿದೆ. ಗೆದ್ದವರಿಗೆ 5 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.
ʻಬಾಹ್ಯಾಕಾಶ ರೊಬೋಟ್ ಅನ್ನು ನಿರ್ಮಿಸೋಣʼ ಎಂಬ ಅಡಿಬರಹದ ಮೂಲಕ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇಂದಿನಿಂದಲೇ (ನವೆಂಬರ್ 20) ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಡಿಸೆಂಬರ್ 15ಕ್ಕೆ ಮುಕ್ತವಾಗಲಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಮತ್ತು ವೃತ್ತಿಪರ ಜೀವನಕ್ಕೆ ನೆರವಾಗಲಿದೆ.
ಮೊದಲ ಬಹುಮಾನ 5 ಲಕ್ಷ ರೂ., ಎರಡನೇ ಬಹುಮಾನ ಪಡೆದವರಿಗೆ 3 ಲಕ್ಷ ರೂ. ಹಾಗೂ ತಲಾ ಒಂದು ಲಕ್ಷದ ಸಮಾಧಾನಕರ ಬಹುಮಾನ ನೀಡಲಾಗುತ್ತದೆ. 2024ರ ಆಗಸ್ಟ್‌ನಲ್ಲಿ ಬೆಂಗಳೂರಿನ ಯು.ಆರ್.ಎಸ್.ಸಿ. ಕ್ಯಾಂಪಸ್‌ನಲ್ಲಿ ರೊಬೋಟಿಕ್ ಚಾಲೆಂಜ್ ಡೇ ಆಯೋಜಿಸಲಾಗುತ್ತದೆ.
ISRO organises
— ISRO (@isro) November 13, 2023
ISRO Robotics Challenge-URSC 2024
(IRoC-U2024).
India's student community is invited to design and implement a Space Robot, encompassing both hardware and software aspects.
A springboard to showcase innovative ideas, receive rewards, and collaborate in… pic.twitter.com/T5Y0xACvgR
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ