Anganawadi Workers: ನಾ ಕೊಡೆ ನೀ ಬಿಡೆ ಪರಿಸ್ಥಿತಿ; 7ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ - Vistara News

ಕರ್ನಾಟಕ

Anganawadi Workers: ನಾ ಕೊಡೆ ನೀ ಬಿಡೆ ಪರಿಸ್ಥಿತಿ; 7ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ

Anganawadi Workers: ವಾರ ಕಳೆದರೂ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ರಾಜ್ಯ ಸರ್ಕಾರ ವರ ನೀಡುತ್ತಿಲ್ಲ, ಇವರು ಬಿಡುತ್ತಿಲ್ಲ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ.

VISTARANEWS.COM


on

Anganwadi workers protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾನಾ ಬೇಡಿಕೆ ಈಡೇರಿಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ (Anganawadi Workers) ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ. ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಇಲ್ಲದೇ ಪರದಾಡುತ್ತಿದ್ದಾರೆ.

ಮೈ ಕೊರೆಯುವ ಚಳಿಯಲ್ಲಿ ರಸ್ತೆಯಲ್ಲೇ ಹಗಲು ರಾತ್ರಿಯೆನ್ನದೆ ಹೋರಾಟ ಮಾಡುತ್ತಿದ್ದು, ಹಲವರು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಊಟ, ತಿಂಡಿಗೂ ಮಹಿಳೆಯರ ಪರದಾಡುತ್ತಿದ್ದು, ವಾರ ಕಳೆದರೂ ಯಾವ ಜನಪ್ರತಿನಿಧಿಗಳು ಸುಳಿದಿಲ್ಲ. ಸರ್ಕಾರದ ನಡೆಗೆ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

10 ದಿನದೊಳಗೆ ಬೇಡಿಕೆ ಈಡೇರಿಸುವಂತೆ ಎಚ್ಚರಿಕೆ

ಭಾನುವಾರಕ್ಕೆ 7ನೇ ದಿನಕ್ಕೆ ಕಾರ್ಯಕರ್ತೆಯರ ಹೋರಾಟ ಕಾಲಿಟ್ಟಿದ್ದು, 10ದಿನದೊಳಗೆ ಬೇಡಿಕೆ ಈಡೇರಿಸಿ ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ. ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕಾಳಿದಾಸ ರಸ್ತೆ ಹಾಗೂ ಶೇಷಾದ್ರಿ ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ವಿರೋಧಿಸಲಾಗಿದೆ. ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಅಥವಾ ಯಾವುದೇ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸರ್ಕಾರ ಲಿಖಿತ ರೂಪದ ಆದೇಶ ನೀಡುವವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾರ್ಯಕರ್ತೆಯರ ಬೇಡಿಕೆಗಳೇನು?

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂ ಮಾಡಬೇಕು. ಜತೆಗೆ ರಾಷ್ಟ್ರೀಯ ಶಿಕ್ಷಣ ಯೋಜನೆಯಾದ NEP ಅನ್ನು ರಾಜ್ಯದಲ್ಲಿ ಜಾರಿ ಮಾಡಿದರೆ ಅಂಗನವಾಡಿ ಕಾರ್ಯಕರ್ತೆಯರಿಗೆ 31 ಸಾವಿರ ವೇತನ ನೀಡಿ ಶಾಲಾ ಶಿಕ್ಷಕರ ಸ್ಥಾನಮಾನ ನೀಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ತಕ್ಷಣ ಮೇಲ್ದರ್ಜೆಗೆ ಏರಿಸಬೇಕು.

ಇದನ್ನೂ ಓದಿ: Paper Leak: ಪ್ರಶ್ನೆ ಪತ್ರಿಕೆ ಸೋರಿಕೆ, ಗುಜರಾತ್ ಕಿರಿಯ ಗುಮಾಸ್ತ ಹುದ್ದೆ ಪರೀಕ್ಷೆ ರದ್ದು!

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ನೀಡಿ ಪೆನ್‌ಷನ್ ಜಾರಿ ಮಾಡಬೇಕು. ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರೋಗ್ಯ ವಿಮೆಯಾದ ಇ.ಎಸ್.ಐ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

Namma Metro: ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲ 4 ಟರ್ಮಿನಲ್‌ಗಳಿಂದ ಕೊನೆಯ ರೈಲು ಸೇವೆ ರಾತ್ರಿ 11.55ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಶುಕ್ರವಾರ 11 ಗಂಟೆ ಇದ್ದ ಅವಧಿಯನ್ನು ವಿಸ್ತರಣೆ ಮಾಡಿ 12.35ಕ್ಕೆ (ಶನಿವಾರ) ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ.

VISTARANEWS.COM


on

on April 26 Namma Metro Service extended till late night
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ (Namma Metro) ವತಿಯಿಂದ ಅಂದು ಪ್ರಯಾಣಿಕರ ಅನುಕೂಲಕ್ಕಾಗಿ ತನ್ನ ಸೇವಾ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.

ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲ 4 ಟರ್ಮಿನಲ್‌ಗಳಿಂದ ಕೊನೆಯ ರೈಲು ಸೇವೆ ರಾತ್ರಿ 11.55ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಶುಕ್ರವಾರ 11 ಗಂಟೆ ಇದ್ದ ಅವಧಿಯನ್ನು ವಿಸ್ತರಣೆ ಮಾಡಿ 12.35ಕ್ಕೆ (ಶನಿವಾರ) ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ದಾವಣಗೆರೆ

Lok Sabha Election 2024: ಹರಿಹರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Lok Sabha Election 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಹರಿಹರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧೆಡೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚನೆ ನಡೆಸಿದರು.

VISTARANEWS.COM


on

Davanagere Lok Sabha constituency BJP candidate Gayatri Siddeshwar election campaign
Koo

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಹರಿಹರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧೆಡೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚನೆ (Lok Sabha Election 2024) ನಡೆಸಿದರು.

ಹರಿಹರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಗ್ಗಳಿ, ಕೊಂಡಜ್ಜಿ, ಬುಳ್ಳಾಪುರ, ಕೆಂಚನಹಳ್ಳಿ, ಹೊಟ್ಟಗೇನಹಳ್ಳಿ, ಕುರುಬರಹಳ್ಳಿ, ಸಾರಥಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಅವರು ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು.

ಇದನ್ನೂ ಓದಿ: Shubman Gill: ಶತಕದ ಐಪಿಎಲ್​ ಪಂದ್ಯವನ್ನಾಡಲು ಸಜ್ಜಾದ ಗಿಲ್​; ಸಾಧನೆ ಹೇಗಿದೆ?

ಈ ಸಂದರ್ಭದಲ್ಲಿ ಹರಿಹರ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಮುಖಂಡರಾದ ಹನಗಾವಡಿ ವೀರೇಶ್, ನಿಂಗರಾಜ್ ಸಿ.ಎಂ., ಅಶ್ವಿನಿ ಕೃಷ್ಣ, ಸುನಿತಾ, ಗೀತಮ್ಮ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Lok Sabha Election 2024: ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ರಾಜ್ಯ ಒಕ್ಕಲಿಗ ಸಂಘ; ಡಿಕೆಶಿಯನ್ನು ಸಿಎಂ ಮಾಡುವುದಾಗಿ ಶಪಥ

Lok Sabha Election 2024: ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಂಘಕ್ಕೆ ಅತಿ ಹೆಚ್ಚು ಕೊಡುಗೆ ನೀಡಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಹೇಳಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Lok sabha election 2024
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಒಕ್ಕಲಿಗರ ಸಂಘ ಬೆಂಬಲ ಸೂಚಿಸಿದೆ. ಬಿಜೆಪಿ, ಜೆಡಿಎಸ್‌ನಲ್ಲಿ ಒಕ್ಕಲಿಗರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿರುವ ಸಂಘದ ಮುಖಂಡರು, ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಅವರು ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಂಘಕ್ಕೆ ಅತಿ ಹೆಚ್ಚು ಕೊಡುಗೆ ನೀಡಿದೆ. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ಒಕ್ಕಲಿಗ ಸಮುದಾಯಕ್ಕೆ ಶೇ. 11 ಮೀಸಲಾತಿ ನೀಡಿದರು. ಕಾಲೇಜು ಕಟ್ಟಲು ಕಾಂಗ್ರೆಸ್ ಸರ್ಕಾರ ಬನಶಂಕರಿ ಯಲ್ಲಿ 9 ಎಕರೆ ಭೂಮಿ ನೀಡಿದೆ. ಈಗ ಡಿಕೆಶಿಯವರು ಒಕ್ಕಲಿಗ ಸಂಘದ ಮೆಡಿಕಲ್ ಕಾಲೇಜಿಗೆ ಕೋಟ್ಯಂತರ ಬಡ್ಡಿ ಹಣ ಮನ್ನಾ ಮಾಡಲು ಮುಂದಾಗಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ.

ಇನ್ನು ಇದು ಕಾಂಗ್ರೆಸ್ ಪ್ರೇರಿತ ಸುದ್ದಿಗೋಷ್ಠಿ ಎಂದು ಒಪ್ಪಿಕೊಂಡ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ, ದೇವೆಗೌಡರ ವಿರುದ್ಧ ಕಿಡಿ ಕಾರಿದರು. ಒಕ್ಕಲಿಗ ಸಮಾಜದ ಮತ್ತೊಂದು ಪೀಠವನ್ನು ಜೆಡಿಎಸ್ ಸ್ಥಾಪಿಸಿತು. ರಾಜಕೀಯವಾಗಿ ಎಚ್‌.ಎನ್. ನಂಜೇಗೌಡ. ಬೈರೇಗೌಡ, ನಾಗೇಗೌಡ, ಬಚ್ಚೇಗೌಡ. ನಟ ಅಂಬರೀಶ್ ಅವರನ್ನು ಪಕ್ಷದಿಂದ ಹೊರ ಹಾಕಿದ್ದ ಜೆಡಿಎಸ್. ಬಿಜೆಪಿ ಪಕ್ಷದಿಂದ ಕೂಡ ಒಕ್ಕಲಿಗ ಸಂಘಕ್ಕೆ ಯಾವುದೇ ಕೊಡುಗೆ ಇಲ್ಲ. ಸದಾನಂದ ಗೌಡರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದರು. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಶ್ರೀಗಂಧದ ಕಾವಲು ಒಕ್ಕಲಿಗ ಸಂಘದ ಜಾಗವನ್ನು ಬೇರೆಯವರಿಗೆ ಮಂಜೂರು ಮಾಡಿದರು ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ | Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

ಪ್ರೊ.ಕೃಷ್ಣೇಗೌಡ ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ನಾವು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ ಅವರು, ಈಗ ನಮ್ಮ ಜನಾಂಗ ನೋವು ಅನುಭವಿಸುತ್ತಿದೆ. ಮುಂದೆಯೂ ಈ ನೋವು ಅನುಭವಿಸುವುದು ಬೇಡ. ಆಗಾಗಿ ನಮ್ಮ ಜನಾಂಗದವರಿಗೆ ಕಣ್ಣು ತೆರೆಸಬೇಕು ಅಂತ ಸುದ್ದಿಗೋಷ್ಠಿ ಮಾಡಿದ್ದೇವೆ. ಅಪ್ಪ , ಮಕ್ಕಳಿಗೆ ಸಪೋರ್ಟ್ ಮಾಡಿ ನಮ್ಮ ಜನಾಂಗ ಮೋಸ ಹೋಗಿದೆ ಎಂದು ಕಣ್ಣೀರು ಹಾಕುತ್ತಿದ್ದೇವೆ. ಅವರ ಮೊಮ್ಮಗ ಬಿಟ್ಟರೆ ಬೇರೆ ಯಾರು ಅಭ್ಯರ್ಥಿ ಇಲ್ಲವಾ? ನಾನು ಕೂಡ ಪ್ರೋಫೆಸರ್‌. ಅವರು ಮೂರೂ ಕಡೆ ಸೋಲುತ್ತಾರೆ ಎಂದು ದೇವೇಗೌಡ ಕುಟುಂಬದ ವಿರುದ್ಧ ಕಿಡಿಕಾರಿದರು.

Continue Reading

Lok Sabha Election 2024

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿ ಸರ್ವೆ; ಹೆಚ್ಚಿದ್ದರೆ ವಶಕ್ಕೆ;‌ ಕೇಂದ್ರ ಸಚಿವರ ಎಚ್ಚರಿಕೆ

Lok Sabha Election 2024: ಕೆಲವರು ತಮ್ಮ ಜೀವನಾದಾಯಕ್ಕಾಗಿ 2 ಮನೆಗಳನ್ನು ಮಾಡಿಕೊಂಡಿರುತ್ತಾರೆ. ಒಂದರಲ್ಲಿ ಅವರು ವಾಸವಿದ್ದು, ಮತ್ತೊಂದನ್ನು ಬಾಡಿಗೆಗೆ ನೀಡಿ ಜೀವನ ನಡೆಸುತ್ತಿರುತ್ತಾರೆ. ಇದು ಅವರಿಗೆ ಶಾಶ್ವತವಾಗಿ ಬರುವ ಆದಾಯ ಮೂಲವಾಗಿರುತ್ತದೆ. ಆದರೆ, ಈ ಕಾಂಗ್ರೆಸ್‌ ಈಗ ಏನು ಮಾಡಲು ಹೊರಟಿದೆ? ಅಂತಹ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರವನ್ನು ಮಾಡಿದೆ. ಈ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಪ್ರಲ್ಹಾದ್‌ ಜೋಶಿ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Lok Sabha Election 2024 Congress comes to power it will survey and grab property says Pralhad Joshi
Koo

ಹುಬ್ಬಳ್ಳಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ಪ್ರಣಾಳಿಕೆಯನ್ನು ಹೊರಬಿಟ್ಟಿದೆ. ಅಲ್ಲದೆ, ಆ ಪಕ್ಷದ ನಾಯಕರು ಸರ್ವೆಗಳ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆ ಪಕ್ಷದವರು ಈಗಾಗಲೇ ನಿಮ್ಮ ಆಸ್ತಿ ಮೇಲೆ ಕಣ್ಣಿಟ್ಟಿದ್ದಾರೆ. ನಿಮ್ಮ ಆಸ್ತಿಯನ್ನು ಕಸಿದುಕೊಳ್ಳಲು ಹುನ್ನಾರ ಮಾಡುತ್ತಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ವರ್ಗದ ಜನರ ಆಸ್ತಿ ಕಸಿದುಕೊಳ್ಳುವ ಹುನ್ನಾರ ಇದೆ ಎಂಬುದು ಅದರ ಪ್ರಣಾಳಿಕೆಯಲ್ಲಿ (Co)ngress Manifesto ಕಾಣಿಸುತ್ತಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ (Pralhad Joshi) ಗಂಭೀರ ಆರೋಪವನ್ನು ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನರ ಆಸ್ತಿ ಸರ್ವೇ ಮಾಡುವುದಾಗಿ ಹೇಳಿದೆ. ಅಂದರೆ, ಯಾರಲ್ಲಿ 2 ಮನೆ, 2 ವಾಹನ ಇರುವುದೋ ಅವರಿಂದ ಒಂದೊಂದು ಕಸಿದುಕೊಳ್ಳುವ ಸಂಚು ಅದು ಎಂದು ಬಣ್ಣಿಸಿದರು.

ಈ ಕಾಂಗ್ರೆಸ್‌ ಈಗ ಏನು ಮಾಡಲು ಹೊರಟಿದೆ?

ಕೆಲವರು ತಮ್ಮ ಜೀವನಾದಾಯಕ್ಕಾಗಿ 2 ಮನೆಗಳನ್ನು ಮಾಡಿಕೊಂಡಿರುತ್ತಾರೆ. ಒಂದರಲ್ಲಿ ಅವರು ವಾಸವಿದ್ದು, ಮತ್ತೊಂದನ್ನು ಬಾಡಿಗೆಗೆ ನೀಡಿ ಜೀವನ ನಡೆಸುತ್ತಿರುತ್ತಾರೆ. ಇದು ಅವರಿಗೆ ಶಾಶ್ವತವಾಗಿ ಬರುವ ಆದಾಯ ಮೂಲವಾಗಿರುತ್ತದೆ. ಆದರೆ, ಈ ಕಾಂಗ್ರೆಸ್‌ ಈಗ ಏನು ಮಾಡಲು ಹೊರಟಿದೆ? ಅಂತಹ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರವನ್ನು ಮಾಡಿದೆ. ಈ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಪ್ರಲ್ಹಾದ್‌ ಜೋಶಿ ಎಚ್ಚರಿಕೆ ನೀಡಿದರು.

ಸರ್ವೇ ಬಗ್ಗೆ ಹೇಳುತ್ತಿರುವುದು ಇದಕ್ಕೇ

ಬಡವರಿಗೆ ಏನು ಬೇಕೋ ಅದನ್ನು ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಕಾಂಗ್ರೆಸ್ ಆ ನೆಪದಲ್ಲಿ ಎಲ್ಲ ವರ್ಗದವರನ್ನು ಟಾರ್ಗೆಟ್ ಮಾಡುತ್ತಿದೆ. ಹೀಗಾಗಿಯೇ ಸರ್ವೆಗಳ ಬಗ್ಗೆ ಮಾತನಾಡುತ್ತಿದೆ. ಇದನ್ನು ಎಲ್ಲರೂ ಸೂಕ್ಷ್ಮವಾಗಿ ಗಮನಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

ಒಳಿತು ಮಾಡಬೇಕೆಂಬ ಮನಸ್ಸಿಲ್ಲ

ಕಾಂಗ್ರೆಸ್ ಪಕ್ಷಕ್ಕೆ ದೇಶಕ್ಕೆ, ಬಡವರಿಗೆ ನಿಜವಾಗಿ ಒಳಿತು ಮಾಡಬೇಕೆಂಬ ಮನಸ್ಸಿಲ್ಲ. ತುಷ್ಟೀಕರಣದ ಪರಾಕಾಷ್ಠೆ ತಲುಪಿದ್ದಾರೆ. ಜನರು ಎಚ್ಚರದಿಂದ ಇರಬೇಕು. ಹೀಗಾಗಿ ಮತದಾನ ಮಾಡುವಾಗ ಜಾಗ್ರತೆ ಇರಲಿ ಎಂದು ಸಚಿವ ಪ್ರಲ್ಹಾದ ಜೋಶಿ ಕಿವಿಮಾತು ಹೇಳಿದರು.

ದೇಶವನ್ನು ಮಾವೋವಾದಿ ವ್ಯವಸ್ಥೆಗೆ ನೂಕಲು ಹೊರಟಿದೆ ಕಾಂಗ್ರೆಸ್

ಕಾಂಗ್ರೆಸ್ ಪಕ್ಷವು ಈ ದೇಶವನ್ನು ಒಂದು ರೀತಿ ಮಾವೋವಾದಿ ವ್ಯವಸ್ಥೆಗೆ ನೂಕಲು ಹೊರಟಂತಿದೆ. ಆ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ಆ ನಾಯಕರ ಭಾಷಣ ಕೇಳಿದರೆ ಇದು ಸ್ಪಷ್ಟವಾಗುತ್ತಿದೆ. ಮಾವೋವಾದಿ ಜಗತ್ತಿನಲ್ಲೇ ವಿಫಲತೆ ಕಂಡಿದೆ. ಆದರೆ, ಕಾಂಗ್ರೆಸ್ ಪಕ್ಷವು ಭಾರತದಲ್ಲಿ ಅದನ್ನು ತರಲು ಹೊರಟಂತಿದೆ. ಜನ ಎಚ್ಚರದಿಂದ ಇರಬೇಕು. ಇಂತಹ ಯೋಚನೆ ಮಾಡುವ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಸಚಿವ ಜೋಶಿ ಕರೆ ಕೊಟ್ಟರು.

Continue Reading
Advertisement
on April 26 Namma Metro Service extended till late night
Lok Sabha Election 20244 mins ago

Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

Davanagere Lok Sabha constituency BJP candidate Gayatri Siddeshwar election campaign
ದಾವಣಗೆರೆ5 mins ago

Lok Sabha Election 2024: ಹರಿಹರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Lok sabha election 2024
ಕರ್ನಾಟಕ10 mins ago

Lok Sabha Election 2024: ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ರಾಜ್ಯ ಒಕ್ಕಲಿಗ ಸಂಘ; ಡಿಕೆಶಿಯನ್ನು ಸಿಎಂ ಮಾಡುವುದಾಗಿ ಶಪಥ

Top 10 Puddings
ಆಹಾರ/ಅಡುಗೆ13 mins ago

Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

Nitin Gadkari
ದೇಶ21 mins ago

Nitin Gadkari: ಚುನಾವಣೆ ಪ್ರಚಾರದ ವೇಳೆ ದಿಢೀರ್ ಕುಸಿದು ಬಿದ್ದ ನಿತಿನ್‌ ಗಡ್ಕರಿ; ತುರ್ತು ಚಿಕಿತ್ಸೆ

Vijay Deverakonda Mrunal Thakur The Family Star to release on OTT
ಟಾಲಿವುಡ್23 mins ago

Vijay Deverakonda: ಮೃಣಾಲ್ – ವಿಜಯ್ ದೇವರಕೊಂಡ ಅಭಿನಯದ ʻಫ್ಯಾಮಿಲಿ ಸ್ಟಾರ್ʼ ಒಟಿಟಿ ರಿಲೀಸ್‌ ಡೇಟ್‌ ಫಿಕ್ಸ್‌!

Job Alert
ಉದ್ಯೋಗ24 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ

Lok Sabha Election 2024 Congress comes to power it will survey and grab property says Pralhad Joshi
Lok Sabha Election 202430 mins ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿ ಸರ್ವೆ; ಹೆಚ್ಚಿದ್ದರೆ ವಶಕ್ಕೆ;‌ ಕೇಂದ್ರ ಸಚಿವರ ಎಚ್ಚರಿಕೆ

MS Dhoni
ಕ್ರೀಡೆ42 mins ago

MS Dhoni: ಸಿಟ್ಟಿನಲ್ಲಿ ಕ್ಯಾಮೆರಾಗೆ ನೀರಿನ ಬಾಟಲ್​ ಎಸೆಯಲು ಮುಂದಾದ ಧೋನಿ; ವಿಡಿಯೊ ವೈರಲ್​

Lok Sabha Election 2024 General holiday for first phase of polling on April 26
Lok Sabha Election 202452 mins ago

Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌