Site icon Vistara News

Anganawadi worker: ತಂಗಿಗೆ ನನ್ನ ಕೆಲಸ ಕೊಡಿ ಎಂದು ತನ್ನ ಬದುಕಿಗೆ ದುರಂತ ಅಂತ್ಯ ಹಾಡಿದ ಅಂಗನವಾಡಿ ಕಾರ್ಯಕರ್ತೆ!

Anganawadi worker

ಚಿಕ್ಕಬಳ್ಳಾಪುರ: ಇಲ್ಲಿನ ದಿಬ್ಬೂರು ಗ್ರಾಮದ ಕೃಷಿ ಹೊಂಡಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತೆ (Anganawadi worker) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲಾವತಿ (35) ಆತ್ಮಹತ್ಯೆ ಮಾಡಿಕೊಂಡವರು.

ಕಲಾವತಿ ದಿಬ್ಬೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಆದರೆ ಡೆತ್‌ನೋಟ್‌ ಬರೆದಿಟ್ಟು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಕೆಲಸವನ್ನು ಮೈದುನ ಪತ್ನಿ ಅಂದರೆ ತನ್ನ ತಂಗಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅಂಗನವಾಡಿ ಕಾರ್ಯಕರ್ತೆ

ಡೆತ್‌ನೋಟ್‌ನಲ್ಲಿ ಏನಿದೆ?

ನನ್ನ ಸಾವಿಗೆ ನಾನೇ ಕಾರಣ, ಯಾರು ಹೊಣೆಯಲ್ಲ. ನನ್ನ ಮೈದುನ ಪತ್ನಿಗೆ (ತಂಗಿ) ನನ್ನ ಕೆಲಸ ಕೊಡಿ. ಆಕೆ ಚೆನ್ನಾಗಿ ಕೆಲಸ ಮಾಡುತ್ತಾಳೆ. ಬಾಲವಿಕಾಸ ಸಮಿತಿಯನ್ನು ಅಧ್ಯಕ್ಷರ ಮತ್ತು ಕಾರ್ಯಕರ್ತೆ ಹೆಸರಲ್ಲಿ ಜಂಟಿ ಖಾತೆ ತೆರಯಬೇಕು. ಜತೆಗೆ ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತಿಗೆ ಮನವಿ ಮಾಡಿದ್ದಾರೆ. ಜತೆಗೆ ತಾನು ಕೊಡಬೇಕಾಗಿರುವ ಸಾಲದ ವಿವರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಕೃಷಿ ಹೊಂಡದಿಂದ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version