ಕರ್ನಾಟಕ
Anganawadi workers: ಕಾಂಗ್ರೆಸ್‌ಗೆ 6ನೇ ಗ್ಯಾರಂಟಿ ಕಂಟಕ; ಜೂ.27ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್
Anganawadi workers: ಜೂನ್ 27ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುವುದು ಶತಸಿದ್ಧ ಎಂದು ಅಂಗನವಾಡಿ ಕಾರ್ಯಕರ್ತರು ಗುಡುಗಿದ್ದಾರೆ. 6ನೆೇ ಗ್ಯಾರಂಟಿ ಆದ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಬೇಕು. ಚುನಾವಣೆ ಸಮಯದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಿ ಎಂದಿದ್ದಾರೆ.
ಬೆಂಗಳೂರು: ಕಾಂಗ್ರೆಸ್‌ಗೆ ತನ್ನ ಗ್ಯಾರಂಟಿ ಯೋಜನೆಯೇ ತಲೆನೋವಾಗಿ ಪರಿಣಮಿಸಿದೆ. 5 ಗ್ಯಾರಂಟಿಗಳ (Congress guarantee) ಜಾರಿಗೆ ಕಾಂಗ್ರೆಸ್ ಸರ್ಕಾರ ಹರಸಾಹಸ ಪಡುತ್ತಿದ್ದರೆ, ಈ ಮಧ್ಯೆ ಸರ್ಕಾರಕ್ಕೆ ಮತ್ತೆ ಸಂಕಷ್ಟವೊಂದು ಎದುರಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ್ದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಅಂಗನವಾಡಿ ಕಾರ್ಯಕರ್ತೆಯರು (Anganawadi workers) ಒತ್ತಾಯಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವ ಧನ ಹೆಚ್ಚಳ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್ ಹೊರಡಿಸಿತ್ತು. ಈ ಬಗ್ಗೆ ಶೀಘ್ರ ಸರ್ಕಾರ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಜೂನ್ 27ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಇದರಿಂದಾಗಿ ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ.
ಈಗಾಗಲೇ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರ ಫೆಡರೇಶನ್ (AITUC) ಪ್ರತಿಭಟನೆಗೆ ಕರೆ ಕೊಟ್ಟಿದೆ. ಜೂನ್ 27ರೊಳಗೆ ಬೇಡಿಕೆ ಈಡೇರದಿದ್ದರೆ, ಸರ್ಕಾರ ಸ್ಪಂದಿಸದೇ ಹೋದರೆ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಬೇಡಿಕೆಗಳೇನು?
-ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನವನ್ನು ಕ್ರಮವಾಗಿ 15 ಸಾವಿರ ಮತ್ತು 10 ಸಾವಿರ ರೂಪಾಯಿಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿದೆ. ಅದನ್ನು ಅನುಷ್ಠಾನಗೊಳಿಸಬೇಕು.
-ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 4 ವರ್ಷದ ಹಿಂದೆ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್‌ಗಳು ಕಳಪೆ ಗುಣಮಟ್ಟದ್ದಾಗಿದ್ದು ಹಾಳಾಗಿವೆ. ಆದ್ದರಿಂದ ಹೊಸ ಮೊಬೈಲ್ ಅಥವಾ ಮಿನಿ ಟ್ಯಾಬ್ ನೀಡಬೇಕು.
-ಪ್ರಣಾಳಿಕೆಯ ಭಾಗವಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಕರ್ಯವಿಲ್ಲ. ಹಾಗಾಗಿ ಅವರು ಸೇವಾ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ, ₹3 ಲಕ್ಷ ಹಾಗೂ ಕಿರಿಯ ಅಂಗನವಾಡಿ ಕಾರ್ಯಕರ್ತೆಯರಿಗೆ ₹2 ಲಕ್ಷ ನೀಡುವುದು.
-ಗೃಹಜ್ಯೋತಿ ಯೋಜನೆ ಅನುಷ್ಠಾನಕ್ಕೂ ಸಹಕರಿಸುವಂತೆ ಒತ್ತಡ ಹೇರಲಾಗುತ್ತಿದ್ದು, ಈ ಕ್ರಮವನ್ನು ಕೈಬಿಡಬೇಕು.
ಇದನ್ನೂ ಓದಿ: Free Bus Service: ಹೆಚ್ಚಿದ ನಾರಿ ಶಕ್ತಿ! 166 ಕೋಟಿ ರೂಪಾಯಿ ಮೀರಿ ಮುನ್ನುಗ್ಗುತ್ತಿರುವ ಶಕ್ತಿ ಸ್ಕೀಂ!
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಮಾತನಾಡಿದ್ದು, ಜೂನ್ 27ರಂದು ಫ್ರೀಡಂ ಪಾರ್ಕ್‌ನಲ್ಲಿ ನಾವು ಪ್ರತಿಭಟನೆ ಮಾಡುವುದು ಶತಸಿದ್ಧವಾಗಿದೆ. 6ನೆೇ ಗ್ಯಾರಂಟಿ ಆದ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಗಮನ ಹರಿಸಬೇಕು.
ಬಿಸಿಯೂಟ, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. 15 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ 10 ಸಾವಿರಾರು ಗೌರವ ಧನ ಹೆಚ್ಚಳ ಮಾಡುತ್ತೇವೆ ಎಂದಿದ್ದಾರೆ. ನಾವು ಜೀವನ ಮಾಡುವುದು ಈಗಿನ ದಿನಗಳಲ್ಲಿ ಕಷ್ಟ ಆಗುತ್ತಿದೆ. ಬೇರೆ ಎಲ್ಲಾ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರ ಮಾತನಾಡುತ್ತಿದ್ದು, ನಮ್ಮ ಬೇಡಿಕೆ ಬಗ್ಗೆ ಚಕಾರ ಎತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಬೆಂಗಳೂರು
TA Sharavana: ಅನಾಮಿಕರಾಗಿದ್ದ ಜಮೀರ್‌ಗೆ ರಾಜಕೀಯ ಬದುಕು ಕೊಟ್ಟಿದ್ದೇ ಜೆಡಿಎಸ್: ಟಿ.ಎ.ಶರವಣ
TA Sharavana: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಪ್ಯಾಂಟ್ ಒಳಗೆ ಆರ್‌ಎಸ್‌ಎಸ್ ಚೆಡ್ಡಿ ಹಾಕಿದ್ದಿದ್ದು ಗೊತ್ತೇ ಆಗಲಿಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಮಾನ್ಯ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಖಾತೆ ಮಂತ್ರಿಗಳಾದ ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಆಡಿರುವ ಕ್ಷುಲ್ಲಕ ಮಾತುಗಳು ಅವರ ಘನತೆಗೆ ತಕ್ಕುದಲ್ಲ ಎಂದು ಜೆಡಿಎಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ (TA Sharavana) ಹೇಳಿದ್ದಾರೆ.
ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಬಗ್ಗೆ ಮಂತ್ರಿ ಜಮೀರ್ ಅಹ್ಮದ್ ಮಾಡಿರುವ ಟೀಕೆಗೆ ಕಿಡಿಕಾರಿರುವ ಅವರು, “ತಮ್ಮ ರಾಜಕೀಯ ಬದುಕಿನ ಆರಂಭದ ಕಾಲದಲ್ಲಿ ಕುಮಾರಸ್ವಾಮಿ ಅವರ ಜತೆಗಿದ್ದು, ಅವರಿಂದ ರಾಜಕೀಯ ಲಾಭ ಪಡೆದು, ಏಳಿಕೆಯಾಗಿ ಈಗ ವ್ಯಕ್ತಿಗತವಾಗಿ ನಿಂದಿಸುವ ಮಟ್ಟಕ್ಕೆ ಜಮೀರ್ ಅಹಮದ್ ಹೋಗಿರುವುದು ಅವರ ಮಟ್ಟವನ್ನು ತೋರಿಸುತ್ತದೆ” ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜಕೀಯವಾಗಿ ಅನಾಮಿಕರಾಗಿದ್ದ ಜಮೀರ್ ಅವರನ್ನು ಗುರುತಿಸಿ, ಮಂತ್ರಿ ಸ್ಥಾನ ಕೊಟ್ಟು ಅವರಿಗೆ ಅಸ್ತಿತ್ವವನ್ನು ತಂದು ಕೊಟ್ಟವರು ಕುಮಾರಣ್ಣ. ಅವರಿಗೆ ರಾಜಕೀಯ ಬದುಕು ಕೊಟ್ಟಿದ್ದೇ ಜೆಡಿಎಸ್. ಅದನ್ನೇ ಮರೆತು, ಬದುಕು ಕೊಟ್ಟ ಪಕ್ಷ, ನಾಯಕರ ಬಗ್ಗೆ ವಿದ್ರೋಹಿ ಮಾತುಗಳನ್ನು ಆಡುತ್ತಿರುವ ಜಮೀರ್ ಅಹಮದ್ ಅವರ ನಡೆ ಖಂಡನಾರ್ಹ ಎಂದು ಆಕ್ಷೇಪಿಸಿದ್ದಾರೆ.
ಈ ಹಿಂದೆ ಜಮೀರ್ ರಾಜಕೀಯವಾಗಿ ಇನ್ನೂ ಕಣ್ಣು ಬಿಡುತ್ತಿದ್ದಾಗ, ಯಾವ ಕುಮಾರಣ್ಣ ಅವರನ್ನು ತಮ್ಮದೇ ಬಸ್‌ನಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿಕೊಂಡು ಹೋದಾಗ ಯಾವ ಚಡ್ಡಿ ಹಾಕಿದ್ದರೋ, ಈಗಲೂ ಅಂಥದ್ದೇ ಚಡ್ಡಿ ಹಾಕಿದ್ದಾರೆ. ಆಗ ಜಮೀರ್ ಅಹ್ಮದ್ ಅವರಿಗೆ ಪರಿವೆ ಇರಲಿಲ್ಲವೇ? ಕುಮಾರಣ್ಣ ಯಾವತ್ತೂ ಬದಲಾಗಿಲ್ಲ. ನಂಬಿದ ತತ್ವ ಸಿದ್ಧಾಂತದಲ್ಲಿ ರಾಜಿ ಮಾಡಿಕೊಂಡು ಅಧಿಕಾರಕ್ಕಾಗಿ ರಾಜಕಾರಣ ಮಾಡಿದವರಲ್ಲ ಎಂದು ಶರವಣ ಹೇಳಿದ್ದಾರೆ.
ಇದನ್ನೂ ಓದಿ | Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?
ರಾಜಕಾರಣ ನಿಂತ ನೀರಲ್ಲ. ಕಾಲಾಂತರದಲ್ಲಿ ಬದಲಾಗುತ್ತದೆ. ಆದರೆ ಹತ್ತಿದ ಏಣಿಯನ್ನೇ ಕಾಲಲ್ಲಿ ಒದೆಯುವ ಜಮೀರ್ ಅಹ್ಮದ್ ಮನಸ್ಥಿತಿ ಸರಿಯಲ್ಲ. ಇದು ರಾಜಕೀಯ ದ್ರೋಹದ ಮನೋಭಾವ ಎನ್ನದೆ ವಿಧಿಯಿಲ್ಲ ಎಂದವರು ಟೀಕಿಸಿದ್ದಾರೆ.
ಅಲ್ಪ ಸಂಖ್ಯಾತರ ಬಗ್ಗೆ ಕುಮಾರಸ್ವಾಮಿ ಅವರು ಯಾವತ್ತೂ ಅಗೌರವದ ಮಾತಾಡಿಲ್ಲ. ಚನ್ನಪಟ್ಟಣದಲ್ಲಿ ತಾವು ಗೆಲ್ಲಲು ಅಲ್ಪಸಂಖ್ಯಾತರೂ ಕಾರಣ ಎಂದು ಹೇಳಿದ್ದಾರೆ. ಅನಗತ್ಯವಾಗಿ ಅವರ ಹೇಳಿಕೆಯನ್ನು ತಿರುಚುವುದು ಬೇಡ ಎಂದಿದ್ದಾರೆ.
ಇದನ್ನೂ ಓದಿ | ST Reservation : ಎಸ್‌ಟಿಗೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಬೇಕಿರುವುದು ಕೇಂದ್ರ: ಸಿಎಂ ಸಿದ್ದರಾಮಯ್ಯ
ಅಲ್ಪ ಸಂಖ್ಯಾತರು ತಮ್ಮ ಸ್ವತ್ತು ಎಂದು ತಿಳಿದು, ಅವರನ್ನು ಗುತ್ತಿಗೆ ಪಡೆದವರಂತೆ ವರ್ತಿಸುವುದು ಜಮೀರ್ ಅಹ್ಮದ್ ಅವರಿಗೆ ಘನತೆ ತರುವುದಿಲ್ಲ. ಸರಿಯಲ್ಲ ಎಂದು ಅವರಿಗೆ ನಾನು ತಿಳಿ ಹೇಳುತ್ತೇನೆ ಎಂದು ಶರವಣ ತಿರುಗೇಟು ನೀಡಿದ್ದಾರೆ.
ಕರ್ನಾಟಕ
Anekal News: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಸಾವು
Anekal News: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ದುರ್ಘಟನೆ ನಡೆದಿದೆ.
ಆನೇಕಲ್: ಮಹಡಿಯ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಗುಲ್ಬರ್ಗ ಮೂಲದ ಜಗದೀಶ್ ಹಾಗೂ ಪೂಜಾ ದಂಪತಿಯ ಪುತ್ರ ಮೃತಪಟ್ಟಿದ್ದಾನೆ.
ಮನೆಯ ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದ ಮಗು, ಆಯತಪ್ಪಿ ಮಹಡಿಯ ಮೇಲಿಂದ ಕೆಳಗೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಚಿಕಿತ್ಸೆಗಾಗಿ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪುಟ್ಟ ಕಂದಮ್ಮ ಕೊನೆಯುಸಿರೆಳೆದಿದೆ. ಹೀಗಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ | Mangalore News: 70, 80 ವರ್ಷದ ಇಬ್ಬರು ವೃದ್ಧ ಸಹೋದರಿಯರು ಆತ್ಮಹತ್ಯೆಗೆ ಶರಣು
ಮನೆಯಲ್ಲಿ 15 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ಕಳವು
ಆನೇಕಲ್: ಮನೆಯ ಬೀಗ ಒಡೆದು 15 ಲಕ್ಷ ಮೌಲ್ಯದ ನಗದು, ಚಿನ್ನ ಕಳವು ಮಾಡಿರುವುದು ತಾಲೂಕಿನ ಸಿಡಿ ಹೊಸಕೋಟೆಯ ಅಭಯ ಲೇಔಟ್‌ನಲ್ಲಿ ನಡೆದಿದೆ. ಕಳ್ಳತನ ನಡೆಸಿದ ಬಳಿಕ ಯಾವುದೇ ಸುಳಿವು ಸಿಗಬಾರದು ಎಂದು ಖದೀಮರು ಖಾರದ ಪುಡಿ ಚೆಲ್ಲಿ ಹೋಗಿದ್ದಾರೆ.
ಬಿಜೆಪಿ ಮುಖಂಡ ರವಿಚಂದ್ರನ್ ಮನೆಯಲ್ಲಿ ಕಳ್ಳತನ ನಡೆದಿದೆ. ಮಾಲೀಕ ಸೋಮವಾರ ಕುಟುಂಬ ಸಮೇತವಾಗಿ ಮೈಸೂರಿಗೆ ಹೋಗಿದ್ದರು. ಈ ವೇಳೆ ಇಬ್ಬರು ಖದೀಮರು ಕೈಚಳಕ ತೋರಿಸಿದ್ದಾರೆ. ಮೈಸೂರಿನಿಂದ ವಾಪಸ್ ಮನೆಗೆ ಬಂದು ನೋಡಿದಾಗ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ಪರಿಶೀಲನೆ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Sagara News: ಸಾಗರದಲ್ಲಿ ತಲ್ವಾರ್ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ
ಕರ್ನಾಟಕ
MB Patil : ಬೆಂಗಳೂರಿನಲ್ಲಿ 800 ಕೋಟಿ ರೂ. ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಒಲವು: ಎಂ.ಬಿ. ಪಾಟೀಲ್
MB Patil : ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ ಅವರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ, ಅಲ್ಲಿಯ ಸೌಲಭ್ಯಗಳನ್ನು ವೀಕ್ಷಿಸಿದ್ದಾರೆ. ಅಲ್ಲದೆ, ಈ ವೇಳೆ ಹೂಡಿಕೆ ಸಂಬಂಧ ಮಾತುಕತೆಯನ್ನೂ ನಡೆಸಿದ್ದಾರೆ.
ಟೆಕ್ಸಾಸ್: ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ (Bommasandra Industrial Area) ನೂತನ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಉತ್ಪಾದನಾ ಘಟಕವನ್ನು ಆರಂಭಿಸಲು ಅಮೆರಿಕದ ಮುಂಚೂಣಿ ಕಂಪನಿಯಾದ ಕ್ರಿಪ್ಟನ್ ಸೊಲ್ಯೂಷನ್ಸ್ (Krypton Solutions) ಮುಂದೆ ಬಂದಿದ್ದು, 100 ಮಿಲಿಯನ್ ಡಾಲರ್ (million dollars) (800 ಕೋಟಿ ರೂ.) ಬಂಡವಾಳ ಹೂಡಲು ಉತ್ಸಾಹ ತೋರಿದೆ. ಜತೆಗೆ ಈ ಕಂಪನಿಯು ಮೈಸೂರು ಮತ್ತು ಚಾಮರಾಜನಗರದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಪರಿಶೀಲಿಸಲು ಒಪ್ಪಿಕೊಂಡಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ (MB Patil) ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಎಂ.ಬಿ. ಪಾಟೀಲ್, ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಸುರೇಶ್ ಪಟೇಲ್ ಮತ್ತು ಇತರ ಉನ್ನತಾಧಿಕಾರಿಗಳೊಂದಿಗೆ ಈ ಸಂಬಂಧ ಸೋಮವಾರ ಚರ್ಚಿಸಲಾಗಿದೆ. ಅದು ಸ್ಥಳೀಯ ಸಹಭಾಗಿತ್ವಕ್ಕೆ ಆಸಕ್ತಿ ಹೊಂದಿದ್ದು, ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಖಾತ್ರಿಯನ್ನು ನಮ್ಮಿಂದ ಬಯಸಿದೆ ಎಂದು ಹೇಳಿದ್ದಾರೆ.
ಕಂಪನಿಯು ಟೆಕ್ಸಾಸ್‌ನಲ್ಲಿ ಹೊಂದಿರುವ 40 ಸಾವಿರ ಚದರ ಮೀಟರ್ ವಿಸ್ತೀರ್ಣದ ಉತ್ಪಾದನಾ ಘಟಕಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಿದ್ದು, ಅಲ್ಲಿರುವ ಸೌಲಭ್ಯಗಳನ್ನು ವೀಕ್ಷಿಸಲಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆಬಂದರೆ, ಅಗತ್ಯ ಸೌಲಭ್ಯಗಳನ್ನು ತ್ವರಿತ ಗತಿಯಲ್ಲಿ ಒದಗಿಸಲಾಗುವುದು. ಈ ಸಂಬಂಧದ ಪ್ರಾಥಮಿಕ ಚರ್ಚೆ ಈಗಾಗಲೇ ಮುಗಿದಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಸೆಮಿಕಂಡಕ್ಟರ್ ಕ್ಷೇತ್ರದ ದೈತ್ಯ ಕಂಪನಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಜತೆಗೂ ಮಾತುಕತೆ ನಡೆಸಲಾಗಿದೆ. ಅದು ಬೆಂಗಳೂರಿನಲ್ಲಿರುವ ತನ್ನ ಆರ್ & ಡಿ ಕೇಂದ್ರದ ಚಟುವಟಿಕೆಯನ್ನು ವಿಸ್ತರಿಸುವ ಬದ್ಧತೆಯನ್ನು ತೋರಿದೆ. ಅಮೆರಿಕದ ಆಚೆಗೆ ಕಂಪನಿಯು ಹೊಂದಿರುವ ಅತಿದೊಡ್ಡ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಸಂಶೋಧನೆ ಬಗ್ಗೆ ಚರ್ಚೆ
ಈ ಸಭೆಯಲ್ಲಿ ಅನಲಾಗ್ ಮತ್ತು ಎಂಬೆಡೆಡ್ ಸೆಮಿಕಂಡಕ್ಟರ್ ಕುರಿತ ಸಂಶೋಧನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ. ಇದಕ್ಕೆ ಬೆಂಗಳೂರಿನ ವೈಟ್ ಫೀಲ್ಡಿನಲ್ಲಿರುವ ಸೆಮಿಕಂಡಕ್ಟರ್ ಸೂಕ್ತ ಸ್ಥಳವಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಜತೆಗೆ ಹೂಡಿಕೆಗೆ ಇರುವ ಅಡಚಣೆಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಹೊಂದಿರುವ ಬದ್ಧತೆಯನ್ನು ಅವರಿಗೆ ತಿಳಿಸಲಾಗಿದೆ. ಭೇಟಿಯ ಸಂದರ್ಭದಲ್ಲಿ ಕಂಪನಿಯು ಹೊಂದಿರುವ 300 ಎಂಎಂ ವೇಫರ್ ಫ್ಯಾಬ್ ಉತ್ಪಾದನಾ ಘಟಕವನ್ನು ವೀಕ್ಷಿಸಲಾಯಿತು ಎಂದು ಸಚಿವ ಎಂ.ಬಿ. ಪಾಟೀಲ್ ವಿವರಿಸಿದ್ದಾರೆ.
ಮೇಲಿನ ಕಂಪನಿಗಳ ಜತೆಗೆ, ಟೆಕ್ಸಾಸ್‌ನಲ್ಲೇ ಕೇಂದ್ರ ಕಚೇರಿ ಹೊಂದಿರುವ ಇ.ಆರ್.ಪಿ. ಲಾಜಿಕ್ ಕಂಪನಿಯೊಂದಿಗೂ ಚರ್ಚಿಸಲಾಯಿತು. ಸ್ಯಾಪ್ ಕೌಶಲ್ಯದಲ್ಲಿ ಪರಿಣತಿ ಹೊಂದಿರುವ ಅದು ಬೆಂಗಳೂರಿನ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಕೆಲಸ ಮಾಡುವ ಉತ್ಸಾಹ ತೋರಿಸುತ್ತಿದೆ. ಈ ಕಂಪನಿಯು ಈಗಾಗಲೇ ಹೈದರಾಬಾದ್, ಚೆನ್ನೈ, ಸೇಲಂ ಮುಂತಾದ ಕಡೆ ಸಕ್ರಿಯವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಮಾತುಕತೆಯಲ್ಲಿ ಕ್ರಿಪ್ಟನ್ ಕಂಪನಿಯ ಪರವಾಗಿ ಸಿಒಒ ದೀಪಕ್ ಪಟೇಲ್, ಸಿಎಂಒ ಮಹೇಶ್ ಪಟೇಲ್, ಉಪಾಧ್ಯಕ್ಷ ಮುಕೇಶ್ ಪಟೇಲ್, ಆನಂದ್ ಪಟೇಲ್, ಹಿತೇಶ್ ಭಕ್ತಾ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಪರವಾಗಿ ಜನರಲ್ ಮ್ಯಾನೇಜರ್ ಅಮಿಚಾಯ್ ರೋನ್, ಉಪಾಧ್ಯಕ್ಷ ಸ್ಟೀವ್ ಬೋನರ್, ಇಆರ್ ಪಿಎಲ್ ಪರವಾಗಿ ಕಣ್ಣನ್ ಶ್ರೀನಿವಾಸನ್ ಭಾಗವಹಿಸಿದ್ದರು.
ಇದನ್ನೂ ಓದಿ: ST Reservation : ಎಸ್‌ಟಿಗೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಬೇಕಿರುವುದು ಕೇಂದ್ರ: ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಐಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
ಕರ್ನಾಟಕ
Kalaburagi News: ಮುಂದಿನ ವಾರ ರಾಜ್ಯಕ್ಕೆ ಬರ ಅಧ್ಯಯನ ತಂಡ : ಕೃಷಿ ಸಚಿವ ಚೆಲುವರಾಯಸ್ವಾಮಿ
Kalaburagi News: ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ ಹಿನ್ನಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ನೀಡಿದೆ. ಇದೇ ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಕಲಬುರಗಿ: ರಾಜ್ಯದಲ್ಲಿ ಬರಗಾಲ (Drought) ಪರಿಸ್ಥಿತಿ ಅಧ್ಯಯನಗೈಯಲು ಕೇಂದ್ರದಿಂದ ಮೂರು ತಂಡಗಳು (3 Teams) ಮುಂದಿನ ವಾರದಲ್ಲಿ ರಾಜ್ಯಕ್ಕೆ ಆಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯ ವಿಭಾಗೀಯ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ ಹಿನ್ನಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ನೀಡಿದೆ. ಇದೇ ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ
ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಅನಾವೃಷ್ಟಿ ಪರಿಸ್ಥಿತಿಯಿದೆ. ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆ ಹಾನಿ ಸಮೀಕ್ಷೆ ನಡೆದಿದ್ದು, ಈಗಾಗಲೇ ಶೇ. 95 ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ. ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತಿಮಗೊಳ್ಳಲಿದೆ. ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ದಲ್ಲಿ ಸುಮಾರು 28 ಸಾವಿರ ಕೋ. ರೂ ಹಾನಿ ಅಂದಾಜಿಸಲಾಗಿದೆ. 4,000 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ವಿವರಣೆ ನೀಡಿದರು.
ನರೇಗಾ ಕೂಲಿ ಕಾರ್ಮಿಕರ ಕೆಲಸದ ದಿನ 100 ರಿಂದ 150 ಕ್ಕೆ ಹೆಚ್ಚಿಸಲಾಗುವುದು. ಬರಗಾಲ ಘೋಷಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗುತ್ತದೆ. ಪ್ರತಿ ವಾರ ಕಮಿಟಿ ಸಭೆ ಕರೆದು ಪರಿಹಾರ ಕಾರ್ಯ ಉಸ್ತುವಾರಿ ನೋಡಿಕೊಳ್ಳಲಿದೆ ಎಂದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪರಿಣಾಮ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದರು.
ಕಳೆದ ವರ್ಷ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಯಲ್ಲಿ ತೊಗರಿ ಬೆಳೆ ನೆಟೆ ರೋಗಕ್ಕೆ ತುತ್ತಾಗಿದ್ದರಿಂದ ಹಿಂದಿನ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತಾದರು, ಅನುದಾನ ಬಿಡುಗಡೆ ಮಾಡಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಎರಡು ಹಂತದಲ್ಲಿ 4 ಜಿಲ್ಲೆಗಳ 2,37,860 ರೈತರಿಗೆ 148 ಕೋಟಿ ರೂ. ಪರಿಹಾರ ನೀಡಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ 1,65,027 ರೈತರಿಗೆ 120.66 ಕೋಟಿ ರೂ. ಪರಿಹಾರ ಸೇರಿದೆ. ಇನ್ನು ಬಾಕಿ 74 ಕೋಟಿ ರೂ. ಪರಿಹಾರ ನೀಡಬೇಕಿದ್ದು, ಅದನ್ನು ಶೀಘ್ರ ರೈತರ ಖಾತೆಗೆ ಪಾವತಿಸಲಾಗುವುದು ಎಂದರು.
ಇದನ್ನೂ ಓದಿ: Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ
ನವೋದ್ಯಮ ಯೋಜನೆಯಡಿ ಹೊಸ ಎಫ್.ಪಿ.ಓಗಳಿಗೆ 5-20 ಲಕ್ಷ ರೂಪಾಯಿ ವರೆಗಿದ್ದ ಸಾಲದ ನೆರವನ್ನು 20-50 ಲಕ್ಷ ರೂ.ಗಳಿಗೆ ಏರಿಕೆ ಮಾಡಿದ್ದು, ಇದಕ್ಕಾಗಿ 10 ಕೋಟಿ ಮೀಸಲಿಡಲಾಗಿದೆ. ಬೃಹತ್ ಕಟಾವ್ ಹಬ್ (ಹಾರ್ವೆಸ್ಟರ್ ಹಬ್) ಸ್ಥಾಪನೆಗೆ 50 ಕೋಟಿ ರೂ. ಮೀಸಲಿಟ್ಟಿದ್ದು, ರಾಜ್ಯದಾದ್ಯಂತ 100 ಹಬ್ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದರು.
ಬೆಳೆ ವಿಮೆ ಮಾರ್ಪಾಡು
ಬೆಳೆ ವಿಮೆಯನ್ನು ಈಗ ಖಾಸಗಿ ಕಂಪನಿಯೇ ಉಸ್ತುವಾರಿಯಾಗಿದ್ದು, ಸಮರ್ಪಕವಾಗಿ ಬೆಳೆ ಹಾನಿಗೆ ತಕ್ಕ ಪರಿಹಾರ ದೊರಕುತ್ತಿಲ್ಲ ಎಂಬುದಾಗಿ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಈ ಮೊದಲಿನಂತೆ ಮುಂದಿನ ವರ್ಷದಿಂದ ಸರ್ಕಾರದಿಂದಲೇ ಬೆಳೆ ವಿಮೆ ನಿರ್ವಹಿಸಲು ಚಿಂತನೆ ನಡೆದಿದೆ ಎಂದ ಸಚಿವರು, ಕೃಷಿ ಹೊಂಡ ನಿರ್ಮಾಣ ಮಾಡುವ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಈ ವರ್ಷ 100 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
-
ಪ್ರಮುಖ ಸುದ್ದಿ24 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಕಿರುತೆರೆ14 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ದೇಶ19 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕರ್ನಾಟಕ16 hours ago
Namma Metro: ಮೆಟ್ರೋ ಟ್ರ್ಯಾಕ್ನಲ್ಲಿ ಲಾಕ್ ಆದ ಮೆಂಟೈನ್ಸ್ ವೆಹಿಕಲ್! ಮೇಲೆತ್ತಲು ಕ್ರೇನ್ ಬಳಕೆ
-
ಕ್ರೈಂ20 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?
-
ಕರ್ನಾಟಕ13 hours ago
Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್ ವೆಹಿಕಲ್; ಎಂದಿನಂತೆ ಮೆಟ್ರೋ ಓಡಾಟ
-
ಉತ್ತರ ಕನ್ನಡ15 hours ago
Karwar Tunnel Route : ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗ ಕೊನೆಗೂ ಸಂಚಾರ ಮುಕ್ತ!
-
ಕರ್ನಾಟಕ11 hours ago
Lecturer Death : ಬಿಜಿಎಸ್ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು; ಸಾವಿನ ಸುತ್ತ ಅನುಮಾನದ ಹುತ್ತ