Site icon Vistara News

Anganawadi Workers protest | ಕೊರೆವ ಚಳಿಯಲ್ಲೂ ಅಹೋರಾತ್ರಿ ಪ್ರತಿಭಟನೆ; ಕುಸಿದುಬಿದ್ದ ಅಂಗನವಾಡಿ ಕಾರ್ಯಕರ್ತೆ

ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು (Anganwadi Workers protest) ಬೀದಿಗಿಳಿದಿದ್ದು, ಕೊರೆವ ಚಳಿಯನ್ನು ಲೆಕ್ಕಿಸದೆ ಮಕ್ಕಳ ಸಮೇತ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಜಮಾಯಿಸಿದ್ದು, ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇತ್ತ ಚಳಿಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಎಂಬುವವರು ಕುಸಿದು ಬಿದ್ದ ಘಟನೆಯು ತಡರಾತ್ರಿ ನಡೆದಿದೆ. ಹೊಸನಗರ ಮೂಲದ ಕಾರ್ಯಕರ್ತೆ ಶಾಲಿನಿಗೆ ಶುಗರ್‌ ಲೆವೆಲ್‌ ಕಡಿಮೆ ಆಗಿದ್ದು ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದರು. ಈ ವೇಳೆ ಆಂಬ್ಯುಲೆನ್ಸ್ ಸಿಗದೆ ಪರದಾಡಬೇಕಾಯಿತು. ಬಳಿಕ ಪೊಲೀಸರ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.

ಬೇಡಿಕೆಗಳು ಏನೇನು?
*ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂ ಮಾಡಬೇಕು.
*ರಾಷ್ಟ್ರೀಯ ಶಿಕ್ಷಣ ಯೋಜನೆಯಾದ NEP ಅನ್ನು ರಾಜ್ಯದಲ್ಲಿ ಜಾರಿ ಮಾಡಿದರೆ ಅಂಗನವಾಡಿ ಕಾರ್ಯಕರ್ತೆಯರಿಗೆ 31 ಸಾವಿರ ವೇತನ ನೀಡಿ ಶಾಲಾ ಶಿಕ್ಷಕರ ಸ್ಥಾನಮಾನ ನೀಡಬೇಕು.
*ಮಿನಿ ಅಂಗನವಾಡಿ ಕೇಂದ್ರಗಳನ್ನು ತಕ್ಷಣ ಮೇಲ್ದರ್ಜೆಗೆ ಏರಿಸಬೇಕು.
*ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ನೀಡಿ ಪೆನ್‌ಷನ್ ಜಾರಿ ಮಾಡಬೇಕು.
*ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರೋಗ್ಯ ವಿಮೆಯಾದ ಇ.ಎಸ್.ಐ ಜಾರಿ ಮಾಡಬೇಕು.

ಇದನ್ನೂ ಓದಿ | Murugha mutt | ಮಠಕ್ಕೆ ಉಸ್ತುವಾರಿ ಸ್ವಾಮೀಜಿ ನೇಮಿಸಲು ಜೈಲು ಸೇರಿದ ಮುರುಘಾ ಶ್ರೀಗಳಿಗೆ ಹಕ್ಕಿದೆಯೇ ಎಂದು ಕೇಳಿದ ಹೈಕೋರ್ಟ್‌

Exit mobile version