ಉಡುಪಿ: ಕಾಪು ತಾಲೂಕಿನ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ 2,87,606 ರೂ. ಮೌಲ್ಯದ ಅಕ್ಕಿ ಪತ್ತೆಯಾಗಿದೆ.
ಅಕ್ರಮ ಅಕ್ಕಿ ದಾಸ್ತಾನು ಖಚಿತ ಮಾಹಿತಿ ಪಡೆದ ಕಾಪುವಿನ ಆಹಾರ ನಿರೀಕ್ಷಕ ಟಿ.ಲೀಲಾನಂದ ಅವರು, ಕಾಪು ಪೊಲೀಸರ ಸಹಕಾರದೊಂದಿಗೆ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿನ ಮೊಹಮದ್ ಶಫೀಕ್ ಎಂಬವರ ಮನೆಗೆ ದಾಳಿ ನಡೆಸಿದರು.
ಪರಿಶೀಲಿಸಿದಾಗ ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ 2,87,606 ರೂ. ಮೌಲ್ಯದ 13,073 ಕೆ.ಜಿ. ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿ ಪತ್ತೆಯಾಗಿದೆ.
ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ಪತ್ತೆಯಾದ ಅಕ್ಕಿ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಅಕ್ಕಿ ಎಲ್ಲಿಂದ ಬಂತು? ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ; ಚಾಲಕ ಬಂಧನ, 12,720 ಕೆ.ಜಿ ಅಕ್ಕಿ ವಶ