ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ (KPTCL exam scam) ಮತ್ತೊಬ್ಬ ಆರೋಪಿಯನ್ನು ಬೆಳಗಾವಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್ ಉಪಕರಣಗಳ ಪೂರೈಕೆ ಮಾಡುತ್ತಿದ್ದ ಬೆಂಗಳೂರಿನ ದೇವಸಂದ್ರದ ನಿವಾಸಿ ಮಹಮ್ಮದ್ ಅಜೀಮುದ್ದೀನ್ (37) ಬಂಧಿತ. ಬೆಂಗಳೂರಿನ ಎಸ್‌ಪಿ ರಸ್ತೆಯಲ್ಲಿ ‘ಸ್ಪೈ ಜೋನ್’ ಎಲೆಕ್ಟ್ರಾನಿಕ್ ಮಳಿಗೆ ಹೊಂದಿದ್ದ ಆರೋಪಿ ವಿವಿಧ ಪರೀಕ್ಷೆಗಳಲ್ಲಿ ಅಕ್ರಮ ಎಸಗಲು ಪೂರೈಸಿದ ಹಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೂರೈಕೆ ಮಾಡುತ್ತಿದ್ದ. ಆರೋಪಿಯನ್ನು ಬಂಧಿಸಿ, ಮಳಿಗೆ ಸೀಜ್ ಮಾಡಿರುವ ಪೊಲೀಸರು, ಆತನನ್ನು ವಿಚಾರಣೆಗೆ ಬೆಳಗಾವಿಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ | ಗಣೇಶ ವಿಸರ್ಜನೆ ವೇಳೆ ಗುಂಪು ಗಲಭೆ; 15ಕ್ಕೂ ಹೆಚ್ಚು ಮಂದಿಗೆ ಗಾಯ
ದೆಹಲಿ, ಹೈದರಾಬಾದ್‌ನ ಡೀಲರ್‌ಗಳಿಂದ ಅಕ್ರಮವಾಗಿ ಎಲೆಕ್ಟ್ರಾನಿಕ್ ಸೂಕ್ಷ್ಮ ಉಪಕರಣ ಖರೀದಿಸುತ್ತಿದ್ದ ಆರೋಪಿ, ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ನೆರವಾಗಿದ್ದ. ಮಹಮ್ಮದ್ ಅಜೀಮುದ್ದೀನ್ ಬಳಿ ಎಲೆಕ್ಟ್ರಾನಿಕ್ ಉಪಕರಣ ಖರೀದಿಸುತ್ತಿದ್ದ ಸಂಜು ಭಂಡಾರಿಯನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಇದೀಗ ಮಹಮ್ಮದ್ ಅಜೀಮುದ್ದೀನ್ ಬಂಧನದಿಂದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 17ಕ್ಕೇರಿದೆ.
ಬಂಧಿತ ಆರೋಪಿಯಿಂದ ಎರಡು ಮೊಬೈಲ್, ವಿವಿಧ ಬಗೆಯ ಎಲೆಕ್ಟ್ರಾನಿಕ್ ಉಪಕರಣ ಸೇರಿ ಒಟ್ಟು 179 ವಸ್ತುಗಳು, ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ ಏಳು ಎನ್-95 ಮಾಸ್ಕ್, 41 ಬನಿಯನ್, ವಿವಿಧ ಬಗೆಯ 445 ಎಲೆಕ್ಟ್ರಾನಿಕ್ ಇಯರ್ ಪೀಸ್, 554 ವಿವಿಧ ಬಗೆಯ ಚಾರ್ಜಿಂಗ್ ಕೇಬಲ್, 6 ವಾಕಿಟಾಕಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ | ದಿ.ಆದಿಕೇಶವುಲು ಆಪ್ತನ ಸಾವು; ಡಿ.ಎ. ಶ್ರೀನಿವಾಸ್ ಸೇರಿ ನಾಲ್ವರು ಆರೋಪಿಗಳಿಗೆ ಸಿಬಿಐ ಉರುಳು