ಉತ್ತರ ಕನ್ನಡ
Jeevajala TaskForce: ಮತ್ತೊಂದು ಕೆರೆ ಅಭಿವೃದ್ಧಿಯತ್ತ ಹೆಜ್ಜೆ ಇಟ್ಟ ಜೀವಜಲ ಕಾರ್ಯಪಡೆ
Srinivasa Hebbar: ಉತ್ತರ ಕನ್ನಡ ಜಿಲ್ಲೆಯ ನೀರಿನ ಮೂಲಕ್ಕೆ ಸಂಜೀವಿನಿಯಂತೆ ಕಾರ್ಯನಿರ್ವಹಣೆ ಮಾಡುತ್ತಿರುವ ಜೀವಜಲ ಕಾರ್ಯಪಡೆಯು ಈಗ ಮತ್ತೊಂದು ಕೆರೆ ಅಭಿವೃದ್ಧಿಗೆ ಮುಂದಾಗಿದೆ.
ಶಿರಸಿ: ಬೇಸಿಗೆಯ ತಾಪದಿಂದ ಎಲ್ಲ ಕಡೆ ನೀರಿನ ಹಾಹಾಕಾರ ಹೆಚ್ಚುತ್ತಿದೆ. ಇದಕ್ಕೆಲ್ಲ ನೀರಿನ ಮೂಲಗಳು ಬರಿದಾಗುತ್ತಿರುವುದೂ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲ ಮೂಲವನ್ನು ಅಭಿವೃದ್ಧಿ ಪಡಿಸುತ್ತಾ ಬಂದಿರುವ ಕೆರೆ ಹೆಬ್ಬಾರ ಎಂದೇ ಖ್ಯಾತಿ ಪಡೆದಿರುವ ಶ್ರೀನಿವಾಸ ಹೆಬ್ಬಾರ (Srinivasa Hebbar) ಅವರು ತಮ್ಮ ಜೀವಜಲ ಕಾರ್ಯಪಡೆಯ (Jeevajala TaskForce) ಮೂಲಕ ಮತ್ತೊಂದು ಜಲಮೂಲವನ್ನು ಅಭಿವೃದ್ಧಿ ಪಡಿಸುವ ಕೆಲಸವನ್ನು ಪ್ರಾರಂಭಿಸಿದ್ದಾರೆ.
ಕಳೆದ ಆರು ವರ್ಷಗಳಿಂದ ಶಿರಸಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಸಹಕರಿಸಿರುವ ಜೀವಜಲ ಕಾರ್ಯಪಡೆ ಈಗಲೂ ತನ್ನ ಕೆಲಸವನ್ನು ಮುಂದುವರಿಸಿದೆ. ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ಈಗ ಶಿರಸಿ ತಾಲೂಕಿನ ಗೌಡಳ್ಳಿಯ ಕೆಂಪು ಕೆರೆಯನ್ನು ಹೂಳೆತ್ತುವ ಕೆಲಸವನ್ನು ಆರಂಭಿಸಲಾಗಿದೆ.
ಇದನ್ನೂ ಓದಿ: Salary Hike : ಭಾರತದಲ್ಲೇ ಬೆಂಗಳೂರಿನಲ್ಲಿ ಅತ್ಯಧಿಕ ಸಂಬಳ ಸಿಗಲು ಕಾರಣವೇನು? ಈ ವರ್ಷ ಎಷ್ಟು ಹೆಚ್ಚಳ?
ಕಳೆದ ಎರಡು ದಿನಗಳಿಂದ ಗೌಡಳ್ಳಿಯಲ್ಲಿ ಹೆಬ್ಬಾರ್ ನೇತೃತ್ವದಲ್ಲಿ ಹೂಳೆತ್ತುವ ಕೆಲಸ ನಡೆಸಲಾಗುತ್ತಿದೆ. ಎರಡು ಹಿಟಾಚಿ ಮತ್ತು ಎರಡು ಟಿಪ್ಪರ್‌ಗಳನ್ನು ಬಳಸಿ ಹೂಳೆತ್ತುವ ಕೆಲಸ ನಡೆಯುತ್ತಿದ್ದು, ಅರ್ಧದಷ್ಟು ಕಾಮಗಾರಿ ಈಗಾಗಲೇ ಮುಗಿದಿದೆ. ಅಂದಾಜು 20 ಅಡಿಯಷ್ಟು ಆಳದ ಹೂಳನ್ನು ತೆಗೆಯುವ ಕೆಲಸ ನಡೆಯುತ್ತಿದೆ.
ಸ್ಥಳೀಯರಿಂದ ಶ್ಲಾಘನೆ
ಗೌಡಳ್ಳಿಯ ಕೆಂಪು ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದು, ಇಷ್ಟು ದಿನ ಇದು ಉಪಯೋಗಕ್ಕೆ ಬಾರದ ರೀತಿಯಲ್ಲಿತ್ತು. ಜತೆಗೆ ಗಿಡ-ಗಂಟಿಗಳು ಬೆಳೆದುಕೊಂಡಿತ್ತು. ಆದರೆ, ಈಗ ಅದನ್ನು ಸ್ವಚ್ಛಗೊಳಿಸಿ ಅಭಿವೃದ್ಧಿಪಡಿಸುವ ಕೆಲಸವು ಜೀವಜಲ ಕಾರ್ಯಪಡೆಯಿಂದ ನಡೆಯುತ್ತಿದ್ದು, ಇವರ ಕೆಲಸಕ್ಕೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Congress Guarantee: ಗ್ಯಾರಂಟಿ ಈಡೇರಿಸದಿದ್ದರೆ ಮಹಿಳೆಯರು ಬೀದಿಗೆ ಬರೋದು ಗ್ಯಾರಂಟಿ ಎಂದ ಬೊಮ್ಮಾಯಿ
ಜಲಮೂಲ ಅಭಿವೃದ್ಧಿಗೆ ಎಲ್ಲರೂ ಸಹಕರಿಸಿ
ಗೌಡಳ್ಳಿ ಕೆಂಪು ಕೆರೆ ಹೂಳೆತ್ತುವ ಕೆಲಸವು ಜೀವಜಲ ಕಾರ್ಯಪಡೆಯಿಂದ ನಡೆಯುತ್ತಿದೆ. ಈಗಾಗಲೇ ಕರಸುಳ್ಳಿ, ಜೈನ ಮಠದ ಕೆರೆ ಹೂಳೆತ್ತುವ ಕೆಲಸ ಆಗಿದೆ. ಜಲಮೂಲ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದು ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಮನವಿ ಮಾಡಿದ್ದಾರೆ.
ಉಡುಪಿ
Weather Report: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
Weather Report: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ಬಿಪರ್‌ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ತಾಪಮಾನ ಏರಿಕೆ ಮುನ್ಸೂಚನೆ
ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?
ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
Karwar News: ಕಾರವಾರದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ಹಾಗೂ ನಿವೃತ್ತ ಅಧಿಕಾರಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿಜೆಎಮ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಕಾರವಾರ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ (Karwar News) ಆರೋಪಿಗಳಾದ ವಾಣಿಜ್ಯ ತೆರಿಗೆ ಅಧಿಕಾರಿ ರಾಜು ಪವಾರ ಮತ್ತು ನಿವೃತ್ತ ಅಧಿಕಾರಿ ಶಿವಾನಂದ ನಾಯ್ಕ ಎಂಬುವವರಿಗೆ ನ್ಯಾಯಾಲಯ 2 ವರ್ಷ ಶಿಕ್ಷೆ ಮತ್ತು 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಕಳೆದ 2014ರಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ನೌಕರೆಯೊಬ್ಬರು ಈ ಇಬ್ಬರು ಆರೋಪಿತರು ಲೈಂಗಿಕ ಕಿರುಕುಳ ನೀಡಿದ ಕುರಿತು ದೂರು ದಾಖಲಿಸಿದ್ದರು. ಅದರಂತೆ ಸಿಜೆಎಮ್ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿದ್ದು ಈ ಸಂಬಂಧ ಆರೋಪಿತರಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಆರೋಪಿತ ವಾಣಿಜ್ಯ ತೆರಿಗೆ ಅಧಿಕಾರಿ ರಾಜು ಪವಾರ ಸದ್ಯ ಕುಮಟಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮತ್ತೊಬ್ಬ ಆರೋಪಿ ಶಿವಾನಂದ ನಾಯ್ಕ ನಿವೃತ್ತಿ ಹೊಂದಿದ್ದು, ಇಬ್ಬರ ವಿರುದ್ಧದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ನ್ಯಾಯಾಧೀಶರಾದ ರೇಷ್ಮಾ ರೋಡ್ರಿಗ್ರೀಸ್ ಕಲಂ 354, 354(A), 506 ಸಹಿತ 34 ಐಪಿಸಿ ಅಡಿ ಆರೋಪಿಗಳಿಗೆ ತಲಾ ಎರಡು ವರ್ಷ ಕಾರಾಗೃಹ ವಾಸ ಮತ್ತು 15 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಇದನ್ನೂ ಓದಿ | Karwar Accident: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
ಸರ್ಕಾರದ ಪರವಾಗಿ ಕಾರವಾರದ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಮಂಜುನಾಥ ಹೊನ್ನಯ್ಯ ನಾಯ್ಕ ವಾದ ಮಂಡಿಸಿದ್ದರು.
ಉತ್ತರ ಕನ್ನಡ
Karwar Accident: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
Karwar Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ತೋಡೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಪಘಾತ ನಡೆದಿದೆ.
ಕಾರವಾರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾರವಾರದ ರಾಷ್ಟ್ರೀಯ ಹೆದ್ದಾರಿ-66ರ ತೋಡೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸಂದೀಪ್ ಗುನಗ, ಲಿಂಗರಾಜು ಮೃತ ಬೈಕ್ ಸವಾರರು. ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಯಚೂರಿನಲ್ಲಿ ಬೈಕ್ ಮೇಲೆ ಲಾರಿ ಹರಿದು ಇಬ್ಬರ ದುರ್ಮರಣ
ರಾಯಚೂರು: ಬೈಕ್ ಮೇಲೆ ಲಾರಿ ಹರಿದಿದ್ದರಿಂದ ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ ನಗರದ ಸಾಥ್ ಮೈಲ್ ಬಳಿ ನಡೆದಿದೆ. ಹುಣಿಶ್ಯಾಳಹುಡಾ ಗ್ರಾಮದ ಹನುಮೇಶ (30), ಆಂಜನೇಯ (35) ಮೃತರು. ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | Assault Case: ಹಣಕಾಸಿನ ಕಿರಿಕ್; ರಾಜಿಗೆಂದು ಕರೆಸಿ ಮಚ್ಚು, ಲಾಂಗು ಬೀಸಿದರು
ಬಾವಿಯಲ್ಲಿ ಬಿದ್ದು ವೃದ್ಧೆ ಸಾವು
ಕೊಪ್ಪಳ: ಸೌದೆ ತರಲು ಹೋಗಿದ್ದಾಗ ಬಾವಿಯಲ್ಲಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿರುವುದು ಜಿಲ್ಲೆ ಕುಷ್ಟಗಿ ತಾಲೂಕಿನ ರ‍್ಯಾ ವಣಕಿಯಲ್ಲಿ ನಡೆದಿದೆ. ಗ್ರಾಮದ ಭರಮವ್ವ ಹರಿಜನ (65) ಮೃತರು. ಈಕೆ ಸೋಮವಾರ ಸೌದೆ ತರಲು ಹೋಗಿದ್ದರು. ಆದರೆ, ಮಂಗಳವಾರ ಬಸಪ್ಪ ಎಂಬುವವರ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉತ್ತರ ಕನ್ನಡ
Uttara kannada News: ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ನಿಂದ ಹೊನ್ನಾವರದಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
Uttara kannada News: ಹೊನ್ನಾವರ ತಾಲೂಕಿನ ಸೇಂಟ್ ಥಾಮಸ್ ಹೈಸ್ಕೂಲ್‌ನ ಹಳೇ ವಿದ್ಯಾರ್ಥಿಗಳ ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ನಿಂದ ಕಳೆದ 3 ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಆರ್ಥಿಕ ನೆರವು ನೀಡುತ್ತಿದ್ದು, ಪ್ರಸಕ್ತ ವರ್ಷ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಆರ್ಥಿಕ ನೆರವು ನೀಡಲಾಯಿತು.
ಹೊನ್ನಾವರ: ತಾಲೂಕಿನ ಸೇಂಟ್ ಥಾಮಸ್ ಹೈಸ್ಕೂಲ್‌ನಲ್ಲಿ ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ (Poor students) ಸಮವಸ್ತ್ರ (Uniforms) ಹಾಗೂ ಆರ್ಥಿಕ ನೆರವು ನೀಡಲಾಯಿತು.
ಶಾಲೆಯ ಹಳೇ ವಿದ್ಯಾರ್ಥಿಗಳಿಂದ ರಚಿಸಿಕೊಂಡ ಇನ್ಸ್ಪಿರೇಶನ್ ಎಜುಕೇಷನಲ್ ಟ್ರಸ್ಟ್‌ನ ವತಿಯಿಂದ ಕಳೆದ ಮೂರು ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಸಮವಸ್ತ್ರ ವಿತರಣೆ, ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ಸೇರಿದಂತೆ ವಿವಿಧ ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಟ್ರಸ್ಟ್‌ನ ಸದಸ್ಯರು ತಿಳಿಸಿದರು.
ಇದನ್ನೂ ಓದಿ: IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್ ಹುದ್ದೆ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ
ಕಾರ್ಯಕ್ರಮದಲ್ಲಿ ಪ್ರಸುತ್ತ ವರ್ಷ ಸೇಂಟ್ ಥಾಮಸ್ ಹೈಸ್ಕೂಲ್‌ನ 20 ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸುವುದರ ಜತೆಗೆ 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಆರ್ಥಿಕ ನೆರವನ್ನು ಟ್ರಸ್ಟ್ ವತಿಯಿಂದ ನೀಡಲಾಯಿತು.
ಇದನ್ನೂ ಓದಿ: Traffic Police: ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಪೊಲೀಸ್ರು ಅಡ್ಡ ಹಾಕ್ತಾರೆ ಹುಷಾರ್!
ಈ ಸಂದರ್ಭದಲ್ಲಿ ಟ್ರಸ್ಟಿನ ಸದಸ್ಯರಾದ ಗುರುರಾಜ ನಾಯಕ್, ಸಂತೋಷ ಮೇಸ್ತ್, ಶಂಕರ ಗೌಡ ಗುಣವಂತೆ ಹಾಗೂ ಸೆಂಟ್ ಥಾಮಸ್ ಹೈಸ್ಕೂಲ್ ಪ್ರಾಚಾರ್ಯರು ಮತ್ತು ಸಿಬ್ಬಂದಿ ಹಾಗೂ ನಾಗರಾಜ್, ಶ್ರೀಕಾಂತ್ ನಾಯ್ಕ, ಡಾ. ಸಚಿನ್, ವೆಂಕಟೇಶ ಗಂಗಾವಳಿಕಾರ, ಇಸ್ಮಾಯಿಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ11 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ13 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಉತ್ತರ ಕನ್ನಡ21 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ17 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ23 hours ago
Karwar Accident: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಪ್ರಮುಖ ಸುದ್ದಿ23 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?
-
ಕರ್ನಾಟಕ7 hours ago
Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!