Site icon Vistara News

Pralhad Joshi: ಜಾತಿ ಪದ್ಧತಿ ತೊಡೆದು ಹಾಕಲು ಮತ್ತೊಂದು ಕ್ರಾಂತಿ ಅಗತ್ಯ: ಪ್ರಲ್ಹಾದ್‌ ಜೋಶಿ

Pralhad Joshi

ಹುಬ್ಬಳ್ಳಿ: ಸಂಸ್ಕೃತಿಗೆ ಅಂಟಿಕೊಂಡಿರುವ ಜಾತಿ ಪದ್ಧತಿ ಹೋಗಲಾಡಿಸಲು ಸಾಮಾಜಿಕ ಕ್ರಾಂತಿಯ ಅವಶ್ಯಕತೆಯಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಶರಣ ಸಮಗಾರ ಹರಳಯ್ಯನವರ ಜಯಂತೋತ್ಸವ ಅಂಗವಾಗಿ ಶನಿವಾರ ನಡೆದ ಸದಸ್ಯತ್ವ ಅಭಿಯಾನ ಮತ್ತು ರಾಜ್ಯ ಪದಾಧಿಕಾರಿಗಳ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿಯಲ್ಲಿ ಜಾತಿ ಪದ್ಧತಿ ರೂಢಿಯಲ್ಲಿರಲಿಲ್ಲ. ಕಳೆದ ಕೆಲ ಶತಮಾನಗಳಿಂದ ಜಾತಿ ಎಂಬ ಪಿಡುಗು ನಮ್ಮ ಸಂಸ್ಕೃತಿಗೆ ಅಂಟಿಕೊಂಡಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಸಮಗಾರ ಹರಳಯ್ಯನವರು ವಿಶಿಷ್ಟ ವಚನಗಳ ಮೂಲಕ ಕ್ರಾಂತಿ ಮಾಡಿ ಸಮಾಜದಲ್ಲಿ ಸ್ವಾಸ್ಥ್ಯದ ಜ್ಯೋತಿ ಬೆಳಗಿಸಿದರು ಎಂದು ಸ್ಮರಿಸಿದ ಸಚಿವರು, ಇಂದಿಗೂ ನಮ್ಮ ಸಂಸ್ಕೃತಿಗೆ ಅಂಟಿರುವ ಜಾತಿ ಪಿಡುಗನ್ನು ತೊಡೆದು ಹಾಕಬೇಕಿದೆ. ಇದಕ್ಕಾಗಿ ಮತ್ತೊಂದು ಕ್ರಾಂತಿಯ ಅವಶ್ಯಕತೆಯಿದೆ ಎಂದು ಪ್ರತಿಪಾದಿಸಿದರು.

ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ ಸಂಘ ಹಾಗೂ ಹರಳಯ್ಯ ಸಮಾಜ ಅಭಿವೃದ್ಧಿ ಮಹಾಮಂಡಲ ವತಿಯಿಂದ ಸಂತ ರವಿ ದಾಸರ ಹಾಗೂ ಮಹಾಶಿವ ಶರಣ ಸಮಗಾರ ಹರಳಯ್ಯನವರ ಜಯಂತೋತ್ಸವ ಪ್ರಯುಕ್ತ ಸದಸ್ಯತ್ವ ಅಭಿಯಾನ ಮತ್ತು ರಾಜ್ಯ ಪದಾಧಿಕಾರಿಗಳ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಸಮಗಾರ ಹರಳಯ್ಯ ಬಸವ ಪ್ರಭು ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಗಾರ ಸಮಾಜದ ಅಧ್ಯಕ್ಷ ಜಗದೀಶ ಬೆಟಗೇರಿ, ಶಾಸಕರಾದ ಮಹೇಶ್ ತೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್.ಪಾಟೀಲ್ ಹಾಗು ಸಮಗಾರ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ | 40 percent commission: ಸಿಎಂಗೆ ಕೋರ್ಟ್‌ ಸಮನ್ಸ್;‌ ಜಾಹೀರಾತು ಕೊಟ್ಟರೆ ಮಾನನಷ್ಟ ಆಗಲ್ಲ: ವಕೀಲರು ಉತ್ತರಿಸುತ್ತಾರೆಂದ ಸಿದ್ದರಾಮಯ್ಯ

ಮೋದಿ ಚಿಂತೆ ಮಾಡುವವರಲ್ಲ, ಚಿಂತನೆ ಮಾಡುವ ಪ್ರಧಾನಿ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ. ಅಲ್ಲದೆ, ಮೋದಿ ಚಿಂತೆ ಮಾಡುವವರಲ್ಲ. ಚಿಂತನೆ ಮಾಡುವ ಪ್ರಧಾನಿಯಾಗಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್-2024’ (Veerashaiva Lingayat Global Business Conclave-2024) ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಲ್ಹಾದ್‌ ಜೋಶಿ, ವಿಕಸಿತ ಭಾರತಕ್ಕೆ ತಮ್ಮ ದೂರದೃಷ್ಟಿ ಹಾಗೂ ಅವಿಸ್ಮರಣೀಯ ಕಾರ್ಯವೈಖರಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಅಡಿಪಾಯ ಹಾಕಿದ್ದಾರೆ. ವಿಕಸಿತ ಭಾರತ ಮೋದಿ ಅವರ ಮಹೋನ್ನತ ಕನಸು ಎಂದು ಹೇಳಿದರು.

ಸ್ವಾತಂತ್ರ್ಯ ಸಿಕ್ಕು 75 ವರ್ಷವಾದರೂ ನಾವಿನ್ನೂ ಅಭಿವೃದ್ಧಿ ಹೊಂದುತ್ತಿರುವ ದೇಶ ಎನಿಸಿಕೊಂಡಿದೆ. ಇನ್ನು ಮೇಲೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರ ಹೊಮ್ಮಲಿದೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

ಈಗ ಆರ್ಥಿಕವಾಗಿ 5ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಹೆಜ್ಜೆ ಇಡುತ್ತಿದ್ದೇವೆ. ಇನ್ನು 20 ವರ್ಷಗಳಲ್ಲಿ ಅಭಿವೃದ್ಧಿ ರಾಷ್ಟ್ರವಾಗಿ ಭಾರತ ಮೊದಲಿರುತ್ತದೆ ಎಂದು ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಚಿಂತನೆಯುಳ್ಳ ಪ್ರಧಾನಿ

ನರೇಂದ್ರ ಮೋದಿ ಅವರು ಚಿಂತೆ ಮಾಡುವವರಲ್ಲ. ಚಿಂತನೆ ಮಾಡುವ ಪ್ರಧಾನಿಯಾಗಿದ್ದಾರೆ. ತಾವು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಇಲಾಖೆಗಳಲ್ಲಿ ಏನಿರಬೇಕು?, ಹೇಗಿರಬೇಕು? ಎಂಬುದನ್ನು ಈಗಲೇ ಅಧಿಕಾರಿ ವರ್ಗಕ್ಕೆ ಸಲಹೆ- ಸೂಚನೆ ನೀಡಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

ಜಗತ್ತಿನ ವಿವಿಧ ದೇಶಗಳಲ್ಲಿ ಲಿಂಗಾಯತ ವೀರಶೈವರು ಉದ್ದಿಮೆಗಳನ್ನು ಸ್ಥಾಪಿಸಿ ಉದ್ಯೋಗ ಕಲ್ಪಿಸುವಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಸಮಾಜದ ಯುವ ಪೀಳಿಗೆ ಸಹ ಇದನ್ನು ಅನುಸರಿಸಬೇಕು ಎಂದು ಪ್ರಲ್ಹಾದ್‌ ಜೋಶಿ ಜೋಶಿ ಕರೆ ನೀಡಿದರು.

ಇದನ್ನೂ ಓದಿ: medical negligence: ನವಜಾತ ಶಿಶುವನ್ನು ಬಿಸಿನೀರಲ್ಲಿ ಮುಳುಗಿಸಿ ಚರ್ಮ ಕಾಯಿಲೆ ಕಥೆ ಕಟ್ಟಿದ್ದ ಆಸ್ಪತ್ರೆಗೆ 10 ಲಕ್ಷ ದಂಡ!

ಅಂತಾರಾಷ್ಟ್ರೀಯ ಬ್ಯುಸಿನೆಸ್ ಸಮಾವೇಶಗಳ ಆಯೋಜನೆಯಿಂದ ಯುವ ಜನತೆಯ ಉನ್ನತಿಗೆ ಮಾರ್ಗದರ್ಶನ ದೊರೆಯುತ್ತದೆ ಎಂದು ಇದೇ ವೇಳೆ ಪ್ರಲ್ಹಾದ್‌ ಜೋಶಿ ಹೇಳಿದರು.

Exit mobile version