Site icon Vistara News

Vijayanagara News : ವಿಜಯನಗರದಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ

Anti Human Trafficking Day Program inaugurated by ZP CEO Sadashiva Prabhu at Vijayanagara

ಹೊಸಪೇಟೆ: ಭಿಕ್ಷಾಟನೆ ಹಾಗೂ ಇತರೆ ದುಷ್ಕೃತ್ಯಗಳಿಗಾಗಿ ಮಾನವ ಕಳ್ಳಸಾಗಾಣಿಕೆ (Human trafficking) ಅಮಾನವೀಯವಾಗಿ ನಡೆಯುತ್ತಿದ್ದು, ಇದರ ವಿರುದ್ಧ ಸರ್ವರೂ ಹೋರಾಡಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ತಿಳಿಸಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆ ಮತ್ತು ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳಸಾಗಾಣಿಕೆಯಲ್ಲಿ ಹೆಚ್ಚು ತೊಂದರೆಗೆ ಒಳಪಡುವವರು ಮಕ್ಕಳು ಹಾಗೂ ಮಹಿಳೆಯರು. ಭಿಕ್ಷಾಟನೆ ಹಾಗೂ ಇತರ ದುಷ್ಕೃತ್ಯಗಳಿಗೆ ಬಳಸಿಕೊಳ್ಳಲು ಮಾಣವ ಕಳ್ಳಸಾಗಾಣಿಗೆ ನಡೆಯುತ್ತದೆ. ಇಲಾಖೆ ಮಟ್ಟದಲ್ಲಿ ಜತೆಗೆ ಸಾರ್ವಜನಿಕರಿಗೂ ಮಾಹಿತಿ ಮತ್ತು ಜಾಗೃತಿ ಮೂಡಿದಾಗ ಇದನ್ನು ಬೇರುಮಟ್ಟದಲ್ಲಿ ತಡೆಗಟ್ಟಬಹುದು ಎಂದು ತಿಳಿಸಿದರು.

ಇದನ್ನೂ ಓದಿ: Davis Cup 2023: ಡೇವಿಸ್‌ ಕಪ್​ಗೆ ತಂಡ ಪ್ರಕಟ; ಬೋಪಣ್ಣಗೆ ವಿದಾಯ ಸರಣಿ

ಕಾರ್ಯಕ್ರಮದ ಆರಂಭಕ್ಕೂ ಮುನ್ನ ಮಾನವ ಕಳ್ಳ ಸಾಗಾಣಿಕೆ ವಿರೋಧಿಸಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಾಥಾಗೆ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ನ್ಯಾ.ಕಿಶನ್ ಬಿ. ಮಾಡಲಗಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ ಪ್ರಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Gruha Jyothi Scheme : 1.43 ಕೋಟಿ ಜನರಿಗೆ ಮಾತ್ರ ಈ ಬಾರಿ ಫ್ರೀ ವಿದ್ಯುತ್;‌ ಉಳಿದವರಿಗಿಲ್ಲ!

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಲೀಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ, ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೋಗೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಸವರಾಜ್ ಸೇರಿದಂತೆ ಇತರರು ಇದ್ದರು.

Exit mobile version