Site icon Vistara News

KSET 2023: ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ, ಆನ್‌ಲೈನ್ ಮೂಲಕ ಅಪ್ಲೈ ಮಾಡಲು ಸೆ.30 ಕೊನೆ ದಿನ

KSET

ಬೆಂಗಳೂರು, ಕರ್ನಾಟಕ: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ (assistant professor) ಅರ್ಹತಾ (KSET 2023) ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority – KEA) ನಡೆಸುವ ಈ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 11ರಿಂದಲೇ ಆರಂಭವಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು. ಇಲ್ಲಿ ಕ್ಲಿಕ್ ಮಾಡಿ.

ಕೆಸೆಟ್ 2023ರ ಪರೀಕ್ಷೆ ನೋಟಿಫಿಕೇಷನ್‌ ಪ್ರಕಾರ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದರೂ, ಅರ್ಜಿ ಶುಲ್ಕವನ್ನು ಅಕ್ಟೋಬರ್ 3ರವರೆಗೂ ಸಲ್ಲಿಸಬಹುದಾಗಿದೆ. ಹಾಗೆಯೇ, 2023 ನವೆಂಬರ್ 26ರಂದು ಪರೀಕ್ಷೆಯನ್ನು ನಡೆಸಲಾಗುತ್ತದೆ.

ಕೆಸೆಟ್‌ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅರ್ಹ ಅಭ್ಯರ್ಥಿಗಳು ಯಾರು?

ಸಾಮಾನ್ಯ ವರ್ಗಕ್ಕೆ ಕನಿಷ್ಠ 55% ಅಂಕಗಳನ್ನು (ರೌಂಡಿಂಗ್ ಆಫ್ ಇಲ್ಲದೆ) ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅದೇ ರೀತಿ, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಅಂಗವಿಕಲ ವ್ಯಕ್ತಿಗಳು (PWD), ಮಂಗಳಮುಖಿ, ಹಿಂದುಳಿದ ವರ್ಗಗಳು ಅಂದರೆ, ವರ್ಗ-I, IIA, IIB, IIIA ಮತ್ತು IIIB ಅಭ್ಯರ್ಥಿಗಳು ಯುಜಿಸಿ ನವದೆಹಲಿಯಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯಗಳು / ಸಂಸ್ಥೆಗಳಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.50 ಅಂಕ ಗಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಯಾವುದೇ ವಯಸ್ಸಿನ ಮಿತಿ ಇಲ್ಲ.

ಕೆಸೆಟ್ ಅರ್ಜಿ ಆಹ್ವಾನ ನೋಟಿಫಿಕೇಷನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ಸುದ್ದಿಯನ್ನೂ ಓದಿ: KPSC Recruitment 2023 : ಜೂನಿಯರ್‌ ಎಂಜಿನಿಯರ್‌ ನೇಮಕ; ಅರ್ಹತಾ ಪಟ್ಟಿ ಪ್ರಕಟ

ಪ್ರವೇಶ ಶುಲ್ಕ ಎಷ್ಟು?

ಸಾಮಾನ್ಯ ವರ್ಗ ಹಾಗೂ ಕೆಟಗರಿ -IIA, IIB, IIIA, IIIB ಮತ್ತು ಇತರ ರಾಜ್ಯ ಅಭ್ಯರ್ಥಿಗಳು ಸಾವಿರ ರೂಪಾಯಿ ಶುಲ್ಕವಾಗಿ ನೀಡಬೇಕಾಗುತ್ತದೆ. ಅದೇ ರೀತಿ, ವರ್ಗ – I, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಟ್ರಾನ್ಸ್‌ಜೆಂಡರ್ ಅಭ್ಯರ್ಥಿಗಳಿಗೆ 700 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version