Site icon Vistara News

Gruhalakshmi scheme : ಗೃಹ ಲಕ್ಷ್ಮಿ ಯೋಜನೆಗೆ ಶುಭ ಶುಕ್ರವಾರದಿಂದ ಅರ್ಜಿ ಸಲ್ಲಿಕೆ! ದಾಖಲೆ ಏನೇನು ಬೇಕು?

Lakshmi Hebbalkar

#image_title

ಬೆಂಗಳೂರು: ರಾಜ್ಯಾದ್ಯಂತ ಸದ್ದು ಮಾಡಿರುವ, ಚರ್ಚೆಗೆ ಕಾರಣವಾಗಿರುವ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಸ್ಕೀಮ್‌ (Congress Guarantee) ಗೃಹ ಲಕ್ಷ್ಮೀ ಯೋಜನೆಗೆ (Gruhalakshmi scheme) ಅರ್ಜಿ ಸಲ್ಲಿಕೆ ಜೂನ್ 16ರಿಂದ (ಶುಕ್ರವಾರ) ಆರಂಭಗೊಳ್ಳಲಿದೆ. ಈ ಹಿಂದೆ ಜೂನ್ 15ರಿಂದಲೇ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿತ್ತು. ಆದರೆ, ಕೆಲವೊಂದು ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಜೂನ್‌ 16ರಿಂದ ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಹತ್ವದ ಯೋಜನೆಯ ಲಾಭ ಎಲ್ಲಾ ಬಿಪಿಎಲ್,‌ ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಇದ್ದವರಿಗೆ ಸಿಗಲಿದೆ ಎಂದು ಹೇಳಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಬಗ್ಗೆ ಮಾಹಿತಿ ನೀಡಿದರು

ವರ್ಷಕ್ಕೆ 30,000 ಕೋಟಿ ರೂ. ಅನುದಾನ ಬೇಕು

ಗೃಹ ಲಕ್ಷ್ಮೀ ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ ಬೇಕಾದೀತು ಎಂಬ ನಿರೀಕ್ಷೆ ಇದೆ. ಇದರಿಂದ ರಾಜ್ಯದ 75% ರಿಂದ 78% ಕುಟುಂಬಗಳಿಗೆ ಅನುಕೂಲ ದೊರೆಯಲಿದೆ ಎಂದು ಅವರು ತಿಳಿಸಿದರು. ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದು ಅವರು ಹೇಳಿದರು.

ಅರ್ಜಿ ಸಲ್ಲಿಸುವುದು ಎಲ್ಲಿ? ಹೇಗೆ ಮತ್ತು ದಾಖಲೆ ಏನೇನು ಬೇಕು?

  1. ಅರ್ಜಿಯನ್ನು ಆನ್ ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದು.
    (ಸೇವಾಸಿಂಧು ಪೋರ್ಟಲ್‌: https://sevasindhugs.karnataka.gov.in/gruhalakshmi)
  2. ಜೂನ್‌ 16ರ (ಶುಕ್ರವಾರ) ಮಧ್ಯಾಹ್ನ 1.30ಕ್ಕೆ ಅರ್ಜಿ ಸಲ್ಲಿಕೆಗೆ ಚಾಲನೆ ಸಿಗಲಿದ್ದು, ಬಳಿಕ ಅರ್ಜಿ ಸಲ್ಲಿಸಬಹುದು.
  3. ಅರ್ಜಿ ಸಲ್ಲಿಕೆಗೆ ಎಸ್ಎಂಎಸ್ ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ ಅಟೋ ಜನರೇಟೆಡ್ ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
  4. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿದೆ.
  5. ಮಂಜೂರಾತಿಯ ನಂತರ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಆಗಲಿದೆ.
  6. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗಿಲ್ಲ, ಬದಲಾಗಿ ಸಂಪೂರ್ಣ ಉಚಿತ.
  7. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ. ಹೀಗಾಗಿ ನಿರಂತರವಾಗಿ ಹೊಸ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.
  8. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: Congress Guarantee: ‘ಅಕ್ಕಿ ಕೊಡದ ಮೋದಿ ಸರ್ಕಾರʼ, ʼಬಿ ಟೀಂʼ JDSಗೆ ಸುರ್ಜೆವಾಲ 7 ಪ್ರಶ್ನೆ

Exit mobile version