Site icon Vistara News

Vijayanagara News: ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

Vijayanagara SP Shrihari Babu BL Statement

ವಿಜಯನಗರ: ಜಿಲ್ಲಾ ಪೊಲೀಸ್ ಇಲಾಖೆ (Police Department) ವತಿಯಿಂದ ನಾಗರಿಕ ಬಂದೂಕು (Gun) ತರಬೇತಿಗೆ (Training) ಅರ್ಜಿ (Application) ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್. ತಿಳಿಸಿದ್ದಾರೆ.

ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಆ.21 ರಿಂದ ಆ.27 ರವರೆಗೆ ಪುನೀತ್ ರಾಜಕುಮಾರ್‌ ಕ್ರೀಡಾಂಗಣ, ಕೂಡ್ಲಿಗಿ ಮತ್ತು ಹರಪನಹಳ್ಳಿ ಉಪ ವಿಭಾಗ ವ್ಯಾಪ್ತಿಯಲ್ಲಿ ಆ.28ರಿಂದ ಸೆ.03ರವರೆಗೆ ಹಗರಿಬೊಮ್ಮನಹಳ್ಳಿಯ ಸರ್ಕಾರಿ ಕಾಲೇಜು ಮೈದಾನದಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರು ಹತ್ತಿರದ ಪೊಲೀಸ್ ಠಾಣೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ತಮ್ಮ ವಿಳಾಸದ ಸರಹದ್ದಿನ ಪೊಲೀಸ್ ಠಾಣೆಗೆ ಆಗಸ್ಟ್ 15 ರೊಳಗೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Tomato Price : Good News; ಟೊಮ್ಯಾಟೊ ಧಾರಣೆ ದಿಢೀರ್‌ ಅರ್ಧಕ್ಕರ್ಧ ಕುಸಿತ; ಅಬ್ಬರ ಮುಗೀತಾ?

ನಿಬಂಧನೆಗಳು

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಾಸ್‌ಪೋರ್ಟ್ ಅಳತೆಯ 3 ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. 21 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತದೆ. ಭಾಗವಹಿಸುವ ನಾಗರಿಕರು ನಿಯಮಿತವಾಗಿ ತರಬೇತಿಗೆ ಹಾಜರಾಗುವುದು ಹಾಗೂ ಶಿಸ್ತು ಪಾಲಿಸಬೇಕು.

ತರಬೇತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಶೂಗಳನ್ನು ಧರಿಸಬೇಕು. ಲುಂಗಿ, ಪಂಚೆ ಧರಿಸಲು ಅವಕಾಶವಿರುವುದಿಲ್ಲ, ತರಬೇತಿ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಮದ್ದುಗುಂಡುಗಳ ಶುಲ್ಕವನ್ನು ಭರಿಸಬೇಕು.

ಇದನ್ನೂ ಓದಿ: Annabhagya Scheme : ಶೀಘ್ರ ಹೊಸ ಪಡಿತರ ಕಾರ್ಡ್‌; ಎಲ್ಲೋ ಬೋರ್ಡ್‌ ಕಾರಿದ್ದವರಿಗೆ BPL: ಕೆ.ಎಚ್. ಮುನಿಯಪ್ಪ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಯಾವುದೇ ನಾಗರಿಕ ಅರ್ಜಿಯನ್ನು ತಿರಸ್ಕರಿಸುವ ಅಥವಾ ಪುರಸ್ಕರಿಸುವ ಅಧಿಕಾರವನ್ನು ಹೊಂದಿರುತ್ತಾರೆ, ತರಬೇತಿ ಅಭ್ಯರ್ಥಿಗಳು ತರಬೇತಿ ವೇಳೆ ಸಣ್ಣ ನೋಟ್ ಪುಸ್ತಕ ಮತ್ತು ಪೆನ್ ತರತಕ್ಕದ್ದು ಹಾಗೂ ತರಬೇತಿ ಕೊನೆಯಲ್ಲಿ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Exit mobile version